ಕರ್ನಾಟಕ ಅಂಚೆ ವೃತ್ತದಲ್ಲಿ ವಿವಿಧ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ
ಕರ್ನಾಟಕ ಅಂಚೆ ವೃತ್ತದಲ್ಲಿ ವಿವಿಧ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ ದಿನಾಂಕವನ್ನ ವಿಸ್ತರಿಸಲಾಗಿದೆ. ಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
ಬೆಂಗಳೂರು, (ಮಾ.01): ಕರ್ನಾಟಕ ಪೋಸ್ಟಲ್ ಸರ್ಕಲ್ ನಲ್ಲಿ ಕ್ರೀಡಾ ಕೋಟಾದಡಿಯಲ್ಲಿ 44 ಜ್ಯೂನಿಯರ್ ಅಕೌಂಟೆಂಟ್, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಪೋಸ್ಟ್‌ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.
ಈ ಮುಂಚೆ ಫೆಬ್ರವರಿ 26,2020ರೊಳಗೆ ಅರ್ಜಿಯನ್ನು ಸಲ್ಲಿಸಲು ಸೂಚಿಸಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ಮಾರ್ಚ್ 16ರ ವರೆಗೆ ವಿಸ್ತರಿಸಲಾಗಿದೆ.
ಕರ್ನಾಟಕ ಅಂಚೆ ವೃತ್ತದಲ್ಲಿ ವಿವಿಧ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ: ಜ್ಯೂನಿಯರ್ ಅಕೌಂಟೆಂಟ್ ಹುದ್ದೆಗಳಿಗೆ ಪದವಿ, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಪೋಸ್ಟ್‌ಮ್ಯಾನ್ ಹುದ್ದೆಗಳಿಗೆ 10+2 ಅಥವಾ 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ವಯೋಮಿತಿ: ಈ ಹುದ್ದೆಗಳಿಗೆ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
1279 ದ್ವಿತೀಯ ದರ್ಜೆ ಹುದ್ದೆ ಭರ್ತಿಗೆ KPSC ಅಧಿಸೂಚನೆ ಪ್ರಕಟ
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಅವರ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಕ್ರೀಡಾ ಅರ್ಹತೆಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ: ಅರ್ಜಿದಾರರು 200 ರೂ. ಅರ್ಜಿ ಶುಲ್ಕವನ್ನು ಯಾವುದೇ ಅಂಚೆ ಕಛೇರಿಯಲ್ಲಿ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಜಾತಿ ಮತ್ತು ಮಾಜಿ ಸೈನಿಕ ವರ್ಗಕ್ಕೆ ಸೇರಿದ ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ. ಅರ್ಜಿ ಶುಲ್ಕ ಪಾವತಿಸಲು ಮಾರ್ಚ್ 12,2020 ಕೊನೆಯ ದಿನವಾಗಿರುತ್ತದೆ.
ಕಚೇರಿಯ ವಿಳಾಸ: ದಿ ಅಸಿಸ್ಟೆಂಟ್ ಡೈರೆಕ್ಟರ್ (ಆರ್&ಇ), ಓ/ಓ ಛೀಫ್ ಪೋಸ್ಟ್ ಮಾಸ್ಟರ್ ಜನರಲ್, ಕರ್ನಾಟಕ ಸರ್ಕಲ್, ಬೆಂಗಳೂರು-560001 ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಮಾರ್ಚ್ 1 ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ