ಬೆಂಗಳೂರು, (ಜೂ.17): ಖಾಲಿ ಇರುವ 101 ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪೋಸ್ಟಲ್ ಸರ್ಕಲ್ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

21 ಜೂನ್, 2019 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಮೇಲೆ ನೀಡಲಾಗಿರುವ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಕರ್ನಾಟಕ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಪೋಸ್ಟಲ್ ಅಸಿಸ್ಟೆಂಟ್  ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಬೋರ್ಡ್ ನಿಂದ 10+2 ಅಥವಾ 12ನೇ ತರಗತಿ ತೇರ್ಗಡೆಯಾಗಿರಬೇಕು. 

ವಯೋಮಿತಿ:  ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 30 ವರ್ಷ ವಯೋಮಿತಿ ನಿಗದಿಪಡಿಸಿದ್ದರೆ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 35 ವರ್ಷ ಮತ್ತು  ಓಬಿಸಿ ಅಭ್ಯರ್ಥಿಗಳಿಗೆ 33 ವರ್ಷ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಪರೀಕ್ಷೆ ಮಾಹಿತಿ: ಈ ಹುದ್ದೆಗಳಿಗೆ ಪರೀಕ್ಷೆಗಳನ್ನು 14 ಜುಲೈ 2019 ರಂದು ನಡೆಸುತ್ತಿದ್ದು, ಪರೀಕ್ಷೆಗಳನ್ನು ಬೆಂಗಳೂರು , ಧಾರವಾಡ ಮತ್ತು ಹಾಸನದಲ್ಲಿ ನಡೆಸಲಾಗುತ್ತದೆ. 

ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ನಿಮ್ಮ ಪ್ರಾದೇಶಿಕ ಕಚೇರಿ / ಡಿವಿಷನಲ್ ಕಚೇರಿಗೆ 21 ಜೂನ್ 2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ (ಹಾಲ್ ಟಿಕೇಟ್) 2 ಜುಲೈ 2019ರಂದು ನೀವು ಅರ್ಜಿ ಸಲ್ಲಿಸಿದ ಕಚೇರಿಯಲ್ಲಿ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಆದೇಶ ಪ್ರತಿಗಾಗಿ ಇಲ್ಲಿ ಕ್ಲಿಕ್ ಮಾಡಿ