KIOCL Recruitment 2022: ಕುದುರೆಮುಖ ಕಬ್ಬಿಣ ಕಾರ್ಖಾನೆಯಲ್ಲಿ ಎಂಜಿನಿಯರ್ ಪದವೀಧರರ ನೇಮಕಾತಿ
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ಖಾಲಿ ಇರುವ ವಿವಿಧ ಎಂಜಿನಿಯರ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತರು ಏಪ್ರಿಲ್ 12ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಬೆಂಗಳೂರು (ಮಾ.31): ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (Kudremukh Iron Ore Company Limited -KIOCL) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಸಹಾಯಕ ಸಿವಿಲ್ ಎಂಜಿನಿಯರ್, ಮೆಕ್ಯಾನಿಕಲ್ ಎಂಜಿನಿಯರ್ ಸೇರಿ ಒಟ್ಟು 9 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 11 ಮತ್ತು 12ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಆಸಕ್ತರು ಇಲಾಖೆಯ ಅಧಿಕೃತ ವೆಬ್‌ತಾಣ https://kioclltd.in/ ಗೆ ಭೇಟಿ ನೀಡಲು ಕೋರಲಾಗಿದೆ.
ಒಟ್ಟು 9 ಹುದ್ದೆಗಳ ಮಾಹಿತಿ ಇಂತಿದೆ:
ಮೆಕ್ಯಾನಿಕಲ್ ಇಂಜಿನಿಯರ್: 4 ಹುದ್ದೆಗಳು
ಎಲೆಕ್ಟ್ರಿಕಲ್ ಇಂಜಿನಿಯರ್ : 2 ಹುದ್ದೆಗಳು
ಇನ್ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್ ಇಂಜಿನಿಯರ್ : 1 ಹುದ್ದೆ
ಸಹಾಯಕ ಸಿವಿಲ್ ಇಂಜಿನಿಯರ್ : 2 ಹುದ್ದೆಗಳು
ಶೈಕ್ಷಣಿಕ ವಿದ್ಯಾರ್ಹತೆ: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದಗೆ ಅನುಗುಣವಾಗಿ ವಿದ್ಯಾರ್ಹತೆ ಪಡೆದಿರಬೇಕು.
ಮೆಕ್ಯಾನಿಕಲ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಮೆಕ್ಯಾನಿಕಲ್ ನಲ್ಲಿ B.E ಅಥವಾ B.Tech ಮಾಡಿರಬೇಕು.
ಎಲೆಕ್ಟ್ರಿಕಲ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ನಲ್ಲಿ B.E ಅಥವಾ B.Tech ಮಾಡಿರಬೇಕು.
ಇನ್ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಇನ್ಸ್ಟ್ರುಮೆಂಟೇಶನ್ / ಕಂಟ್ರೋಲ್ ವಿಷಯದಲ್ಲಿ B.E ಅಥವಾ B.Tech ಮಾಡಿರಬೇಕು.
ಸಹಾಯಕ ಸಿವಿಲ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ ಮಾಡಿರಬೇಕು.
IAS OFFICER SALARY: UPSC ಪರೀಕ್ಷೆ ಬರೆದು IAS ಅಧಿಕಾರಿಯಾಗುವವರಿಗೆ ವೇತನವೆಷ್ಟು?
ಕೆಲಸದ ಅನುಭವ: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ಕೆಲಸದ ಅನುಭವ ಹೊಂದಿರಬೇಕು.
ಮೆಕ್ಯಾನಿಕಲ್ ಇಂಜಿನಿಯರ್: ಪೆಲೆಟ್ ಪ್ಲಾಂಟ್ ಮತ್ತು ಕಬ್ಬಿಣದ ಅದಿರು ಶುದ್ಧೀಕರಣ ಘಟಕದ ನಿರ್ವಹಣೆ, ಕಚ್ಚಾ ವಸ್ತುಗಳ ನಿರ್ವಹಣೆ ಇತ್ಯಾದಿ ವಿಭಾಗದಲ್ಲಿ ಕನಿಷ್ಠ 03 ವರ್ಷಗಳ ಅನುಭವವನ್ನು ಹೊಂದಿರಬೇಕು,
ಎಲೆಕ್ಟ್ರಿಕಲ್ ಇಂಜಿನಿಯರ್ : ಅಭ್ಯರ್ಥಿಗಳು 5MW ಸಾಮರ್ಥ್ಯದ ಡೀಸೆಲ್ ತೈಲ/ಇಂಧನ ತೈಲ/ನೈಸರ್ಗಿಕ ತೈಲ ಆಧಾರಿತ ವಿದ್ಯುತ್ ಸ್ಥಾವರಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯಲ್ಲಿ ಕನಿಷ್ಠ 3 ವರ್ಷಗಳ ಅನುಭವವನ್ನು ಹೊಂದಿರಬೇಕು .
ಇನ್ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್ ಇಂಜಿನಿಯರ್ : ಅಭ್ಯರ್ಥಿಗಳು ಫೀಲ್ಡ್ ಇನ್‌ಸ್ಟ್ರುಮೆಂಟೇಶನ್ ಸಮಸ್ಯೆಗಳನ್ನು ವಿಶ್ಲೇಷಿಸುವಲ್ಲಿ ಟ್ರಬಲ್‌ಶೂಟಿಂಗ್‌ನಲ್ಲಿ ಕನಿಷ್ಠ 03 ವರ್ಷಗಳ ಅನುಭವವನ್ನು ಹೊಂದಿರಬೇಕು.
ಸಹಾಯಕ ಸಿವಿಲ್ ಇಂಜಿನಿಯರ್ : ಅಭ್ಯರ್ಥಿಗಳು ಸಿವಿಲ್ ಕನ್‌ಸ್ಟ್ರಕ್ಷನ್‌ನಲ್ಲಿ ಕನಿಷ್ಠ 3 ವರ್ಷಗಳ ಅನುಭವವನ್ನು ಹೊಂದಿರಬೇಕು
ವಯೋಮಿತಿ: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ವಯೋಮಿತಿ ಹೊಂದಿರಬೇಕು. ಸಹಾಯಕ ಸಿವಿಲ್ ಇಂಜಿನಿಯರ್ ಹುದ್ದೆಗೆ ಗರಿಷ್ಠ 32 ವರ್ಷಗಳ ಅನುಭವ ಮತ್ತು ಮಿಕ್ಕೆಲ್ಲ ಹುದ್ದೆಗಳೀಗೆ ಗರಿಷ್ಠ 35 ವರ್ಷಗಳ ಅನುಭವ ಹೊಂದಿರಬೇಕು. OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
Indian Navy Recruitment 2022: ಅಪ್ರೆಂಟಿಸ್ ಮತ್ತು SSR ಬ್ಯಾಚ್ ಗೆ ಅರ್ಜಿ ಆಹ್ವಾನ
ಆಯ್ಕೆ ಪ್ರಕ್ರಿಯೆ: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಎಂಜಿನಿಯರ್ ಹುದ್ದೆಗಳಿಗೆ ಸೇರಲು ಬಯಸುವ ಅಭ್ಯರ್ಥಿಗನ್ನು ವಿದ್ಯಾರ್ಹತೆ, ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ
₹30000 ರಿಂದ ₹112000 ವೇತನ ದೊರೆಯಲಿದೆ.
ಸಂದರ್ಶನ ನಡೆಯುವ ಸ್ಥಳ: ಎಲೆಕ್ಟ್ರಿಕಲ್ ಇಂಜಿನಿಯರ್ ಮತ್ತು ಇನ್ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್ ಇಂಜಿನಿಯರ್ ಹುದ್ದೆಗೆ ಎಪ್ರಿಲ್ 11 ರಂದು ಸಂದರ್ಶನ ನಡೆಯಲಿದ್ದು, ಮಿಕ್ಕ ಹುದ್ದೆಗೆ ಎಪ್ರಿಲ್ 12 ರಂದು ನಡೆಯಲಿದೆ.
KIOCL Limited, 2nd Block, Koramangala, Bengaluru – 560034, Karnataka