ಸಹಾಯಕ ಮ್ಯಾನೇಜರ್ ಹುದ್ದೆಗೆ ನಬಾರ್ಡ್ ನೇಮಕಾತಿ: ಅರ್ಜಿ ಹಾಕಿ
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ನಲ್ಲಿ 2020ನೇ ಸಾಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಹುದ್ದೆಯ ವಿವರ ಈ ಕೆಳಗಿನಂತಿದೆ.
ನವದೆಹಲಿ, (ಜ.18): ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ಸಹಾಯಕ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ದಿನಾಂಕ 03-2-2020ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಗ್ರಾಮಲೆಕ್ಕಾಧಿಕಾರಿ ನೇಮಕಾತಿಗೆ ಅರ್ಜಿ ಆಹ್ವಾನ; ಪರೀಕ್ಷೆ ಇಲ್ಲದೇ ನೇರ ನೇಮಕಾತಿ
ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಪಿಜಿ ಡಿಪ್ಲೋಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸರಬೇಕು.
ವಯೋಮಿತಿ: 1/09/2020ಕ್ಕೆ ಅನ್ವಯವಾಗುವಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ಮತ್ತಷ್ಟು ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಶುಲ್ಕ: ST/SC/ ಮಾಜಿ ಯೋಧರಿಗೆ 150 ರೂ. ಇತರೆ ಅಭ್ಯರ್ಥಿಗಳಿಗೆ 800 ರೂ.
ನೇಮಕಾತಿ ಪ್ರಕ್ರಿಯೆ: ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಮತ್ತಷ್ಟು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ