NHM MP Recruitment 2022: ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜ.7 ಕೊನೆ ದಿನ

ರಾಷ್ಟ್ರೀಯ ಆರೋಗ್ಯ ಮಿಷನ್ ಮಧ್ಯಪ್ರದೇಶ​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 283 ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದೆ.
 

National Health Mission Madhya Pradesh announced job notification for the post of Lab Technician gow

ಬೆಂಗಳೂರು(ಡಿ.31): ರಾಷ್ಟ್ರೀಯ ಆರೋಗ್ಯ ಮಿಷನ್ , ಮಧ್ಯಪ್ರದೇಶ (National Health Mission Madhya Pradesh)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 283 ಲ್ಯಾಬ್​ ಟೆಕ್ನಿಷಿಯನ್ (Lab Technician) ಹುದ್ದೆಗಳು ಖಾಲಿ ಇದ್ದು, ಡಿಎಂಎಲ್​ಟಿ, ಬಿಎಸ್ಸಿ, ಎಂಎಲ್​ಟಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 1, 2022ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್​ಲೈನ್  (Online)​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ nhmmp.gov.in ಗೆ ಭೇಟಿ ನೀಡಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ರಾಷ್ಟ್ರೀಯ ಆರೋಗ್ಯ ಸಂಸ್ಥೆ  ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಡಿಎಂಎಲ್​ಟಿ, ಬಿಎಸ್ಸಿ, ಎಂಎಲ್​ಟಿ ಪಡೆದಿರಬೇಕು.

ವಯೋಮಿತಿ ಮತ್ತು ವೇತನ: ರಾಷ್ಟ್ರೀಯ ಆರೋಗ್ಯ ಮಿಷನ್​​ ನೇಮಕಾತಿಯ ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 21-  40 ವರ್ಷದೊಳಗಿರಬೇಕು.

SSC CGL Notification 2022: ಸಿಬ್ಬಂದಿ ನೇಮಕಾತಿ ಆಯೋಗದ ಸಿಜಿಎಲ್ ಪರೀಕ್ಷಾ ದಿನಾಂಕ ಪ್ರಕಟ

ಉದ್ಯೋಗದ ಸ್ಥಳ & ಆಯ್ಕೆ ಪ್ರಕ್ರಿಯೆ: ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು  ಆಯ್ಕೆ ಮಾಡಲಾಗುತ್ತದೆ.

ಬರೋಬ್ಬರಿ 2980 ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಮುಂದಾದ ರಾಷ್ಟ್ರೀಯ ಆರೋಗ್ಯ ಸಂಸ್ಥೆ: ರಾಷ್ಟ್ರೀಯ ಆರೋಗ್ಯ ಸಂಸ್ಥೆ (National Health Mission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2980 ಲ್ಯಾಬ್​​ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಎನ್‌ಎಂಎಚ್ ಮುಂದಾಗಿದ್ದು, 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಎಂಎಸ್ಸಿ, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.  ಜನವರಿ 7, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದುಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ತಾಣ http://upnrhm.gov.in/ ಗೆ ಭೇಟಿ ನೀಡಲು ಕೋರಲಾಗಿದೆ.

Central Water Board Recruitment 2022: SSLC ಆದವರಿಗೆ ಕಾರ್​ ಡ್ರೈವರ್ ಹುದ್ದೆಗೆ ಅವಕಾಶ

ಶೈಕ್ಷಣಿಕ ವಿದ್ಯಾರ್ಹತೆ:  ಎನ್‌ಎಂಎಚ್  ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಎಂಎಸ್ಸಿ, ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ ಮತ್ತು ವೇತನ: ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 18,150 ರೂ ನಿಂದ 28,015 ರೂ ವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು  40 ವರ್ಷದೊಳಗಿರಬೇಕು.

BEL Recruitment 2022: ಬೆಂಗಳೂರಿನ BELನಲ್ಲಿ ಟ್ರೈನಿ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

ಉದ್ಯೋಗದ ಸ್ಥಳ & ಆಯ್ಕೆ ಪ್ರಕ್ರಿಯೆ: ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತರ ಪ್ರದೇಶದ ಲಕ್ನೋದಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

SIMS Shivamogga Recruitment 2022: ವಿವಿಧ ಹುದ್ದೆಗಳ ಭರ್ತಿಗೆ ಕರೆ ನೀಡಿದ ವೈದ್ಯಕೀಯ ವಿಜ್ಞಾನ ಸಂಸ್ಥೆ

Latest Videos
Follow Us:
Download App:
  • android
  • ios