Asianet Suvarna News Asianet Suvarna News

NMDC Recruitment 2022: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

 ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್   ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಮಾರ್ಚ್ 2 ಅರ್ಜಿ ಸಲ್ಲಿಸಲು ಲಕೊನೆಯ ದಿನವಾಗಿದೆ.

National Mineral Development Corporation   Limited has released the latest notification for fill up 200 posts gow
Author
Bengaluru, First Published Feb 9, 2022, 2:49 PM IST

ಬೆಂಗಳೂರು(ಫೆ.9): ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ (National Mineral Development Corporation Limited - NMDC)  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಫೀಲ್ಡ್​ ಅಸಿಸ್ಟೆಂಟ್, ಮೇಂಟೇನೆನ್ಸ್​ ಅಸಿಸ್ಟೆಂಟ್ ಸೇರಿ ವಿವಿಧ ಒಟ್ಟು 200ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 10ರಿಂದ ಮಾರ್ಚ್​ 2 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.  ಆಸಕ್ತರು ಹೆಚ್ಚಿನ ಮಾಹಿತಿಗಾಗಿ https://www.nmdc.co.in/ ಗೆ ಭೇಟಿ ನೀಡಲು ಕೋರಲಾಗಿದೆ. 

ಒಟ್ಟು 200 ವಿವಿಧ ಹುದ್ದೆಗಳ ಮಾಹಿತಿ:
ಫೀಲ್ಡ್​ ಅಸಿಸ್ಟೆಂಟ್:  43 ಹುದ್ದೆಗಳು
ಮೇಂಟೇನೆನ್ಸ್​ ಅಸಿಸ್ಟೆಂಟ್​(ಮೆಕ್ಯಾನಿಕ್):  90 ಹುದ್ದೆಗಳು
ಮೇಂಟೇನೆನ್ಸ್​ ಅಸಿಸ್ಟೆಂಟ್(ಎಲೆಕ್ಟ್ರಿಕಲ್): 35 ಹುದ್ದೆಗಳು
ಎಂಸಿಒ ಗ್ರೇಡ್-3: 4 ಹುದ್ದೆಗಳು
HEM ಮೆಕ್ಯಾನಿಕ್ ಗ್ರೇಡ್-3: 10 ಹುದ್ದೆಗಳು
ಎಲೆಕ್ಟ್ರಿಷಿಯನ್ ಗ್ರೇಡ್-3: 7 ಹುದ್ದೆಗಳು
ಬ್ಲಾಸ್ಟರ್ ಗ್ರೇಡ್-2: 2 ಹುದ್ದೆಗಳು
QCA ಗ್ರೇಡ್-3: 9 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ, ಡಿಪ್ಲೋಮಾ, ಬಿಎಸ್ಸಿ ಪೂರ್ಣಗೊಳಿಸಿರಬೇಕು.

STAFF SELECTION COMMISSION RECRUITMENT 2022: ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ ಪರೀಕ್ಷೆ ಅಧಿಸೂಚನೆ ಪ್ರಕಟ

ವಯೋಮಿತಿ: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷವಾಗಿರಬೇಕು.

ಅರ್ಜಿ ಶುಲ್ಕ: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು 150 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಎಸ್​ಸಿ/ಎಸ್​ಟಿ/PH/ESM ಅವರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಆನ್​ಲೈನ್​ ಮೂಲಕವೇ ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ವಿವರ: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 18,100 ರಿಂದ 35,040 ರೂ ತನಕ ವೇತನ ದೊರೆಯಲಿದೆ.

ಉದ್ಯೋಗ ಸ್ಥಳ: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು ಭಾರತದಲ್ಲಿ ಎಲ್ಲಿ ಬೇಕಾದರೂ ಕೆಲಸ ಮಾಡಲು ತಯಾರಿರಬೇಕು.

Bank of Maharashtra Recruitment 2022: ಖಾಲಿ ಇರುವ 500 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಾರ್ಮಿಕ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗವಿದೆ: ರಾಜ್ಯ ನೌಕರರ ವಿಮಾ ನಿಗಮ (Employees State Insurance Corporation - ESIC) ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. ನಿಗಮವು ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹೀಗೆ ಒಟ್ಟು 3865 ಹುದ್ದೆಗಳನ್ನು ಭರ್ತಿ ಮಾಡಲು ದೇಶದ ಹಲವು ರಾಜ್ಯಗಳಿಂದ  ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲೂ ಅಪ್ಪರ್ ಡಿವಿಷನ್‌ ಕ್ಲರ್ಕ್ (Upper Divison Clerk)‌, ಸ್ಟೆನೋಗ್ರಾಫರ್ (Stenographer), ಮಲ್ಟಿ ಟಾಸ್ಕಿಂಗ್ ಸ್ಟಾಫ್‌ (Multi Tasking Staff) ಹುದ್ದೆಗಳನ್ನು ಭರ್ತಿ ಮಾಡಲಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್  http://www.esic.nic.in/ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.  ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಜನವರಿ 15, 2022 ರಿಂದ ಪ್ರಾರಂಭವಾಗಿ ಫೆಬ್ರವರಿ 15, 2022 ರಂದು ಕೊನೆಗೊಳ್ಳಲಿದೆ. ಕರ್ನಾಟಕದಲ್ಲಿ (Karnataka) ಅಪ್ಪರ್ ಡಿವಿಷನ್‌ ಕ್ಲರ್ಕ್  199 ಹುದ್ದೆ, ಸ್ಟೆನೋಗ್ರಾಫರ್ 18 ಹುದ್ದೆ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್‌  65 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

Follow Us:
Download App:
  • android
  • ios