Asianet Suvarna News Asianet Suvarna News

NHAI Recruitment 2022: ಇಂಜಿನಿಯರಿಂಗ್‌ ಪದವೀಧರರಿಗೆ ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗವಕಾಶ!

ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ  ಖಾಲಿ ಇರುವ ಟೆಕ್ನಿಕಲ್ ವಿಭಾಗದ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಮಾರ್ಚ್ 17ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. 

NHAI Recruitment 2022 notification for General Manager post apply now gow
Author
Bengaluru, First Published Feb 17, 2022, 1:43 PM IST

ಬೆಂಗಳೂರು(ಫೆ.17): ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (National Highways Authority of India) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು  15 ಪ್ರಧಾನ ವ್ಯವಸ್ಥಾಪಕರು (General Manager) ಹುದ್ದೆಗಳು ಖಾಲಿ ಇದ್ದು, ಟೆಕ್ನಿಕಲ್ವಿ (Technical) ಭಾಗಕ್ಕೆ ಈ ಹುದ್ದೆಗಳನ್ನು  ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್‌ ಎರಡೂ ಪ್ರಕಾರವಾಗಿ ಮಾರ್ಚ್ 17ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ತಾಣ https://nhai.gov.in/#/ ಗೆ ಭೇಟಿ ನೀಡಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಹೆಚ್‌ಎಐ) ದಲ್ಲಿ ಖಾಲಿ ಇರುವ ಟೆಕ್ನಿಕಲ್ ವಿಭಾಗದ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಾಸಾಗಿರಬೇಕು.

ಆಯ್ಕೆ ಪ್ರಕ್ರಿಯೆ: ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ಟೆಕ್ನಿಕಲ್ ವಿಭಾಗದ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುವುದು ಬಳಿಕ ದಾಖಲೆ ಪರಿಶೀಲನೆ ಮೂಲಕ  ಆಯ್ಕೆ ಮಾಡಲಾಗುವುದು.

Haveri Anganwadi Recruitment 2022: ಹಾವೇರಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಅರ್ಜಿ ಆಹ್ವಾನ

ವೇತನ ವಿವರ: ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ಟೆಕ್ನಿಕಲ್ ವಿಭಾಗದ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 37400 ರೂ. ನಿಂದ 67000 ರೂ.ವರೆಗೆ ವೇತನ ನಿಗದಿಯಾಗಿದೆ.

ವಯೋಮಿತಿ:  ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ಟೆಕ್ನಿಕಲ್ ವಿಭಾಗದ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 56 ವರ್ಷವಾಗಿರಬೇಕು.

ಅರ್ಜಿ ಸಲ್ಲಿಸಬೇಕಾದ ಆಫ್‌ಲೈನ್ ವಿಳಾಸ:
DGM (HR & Admn.) IA,
National Highways Authority of India,
Plot No: G -5 & 6
Sector – 10, Dwarka, New Delhi – 110075

LIC Recruitment 2022: ಭಾರತೀಯ ಜೀವ ವಿಮಾ ನಿಗಮದಲ್ಲಿ ವಿಮಾ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

ಯುವ ವೃತ್ತಿಪರ ಟೆಕ್ಕಿಗಳಿಗೆ NHAI ಉದ್ಯೋಗವಕಾಶ: ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (National Highways Authority of India -NHAI)ಪ್ರಾದೇಶಿಕ ಕಛೇರಿ, ಹೈದರಾಬಾದ್ ನಲ್ಲಿ ಖಾಲಿ ಇರುವ ವಿವಿಧ 9 ಟೆಕ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಯುವ ವೃತ್ತಿಪರ  (Young Professional) ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಆಫ್‌ಲೈನ್ ಮೂಲಕ ಫೆಬ್ರವರಿ 29ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ www.nhai.gov.in ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ  ಹೈದರಾಬಾದ್ ಕಛೇರಿಯಲ್ಲಿ ಖಾಲಿ ಇರುವ ಟೆಕ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ   ಸಿವಿಲ್ ಇಂಜಿನಿಯರಿಂಗ್ ಪದವೀಧರರಾಗಿರಬೇಕು. 2021ರಲ್ಲಿ ಸಿವಿಲ್ ಇಂಜಿಯನಿಯರಿಂಗ್ ಗೇಟ್ (Graduate Aptitude Test in Engineering - GATE) ಪರೀಕ್ಷೆ ಪಾಸಾಗಿರಬೇಕು.  

 ಅರ್ಜಿ ಸಲ್ಲಿಸಬೇಕಾದ ವಿಳಾಸ: ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ  ಹೈದರಾಬಾದ್ ಕಛೇರಿಯಲ್ಲಿ ಖಾಲಿ ಇರುವ ಟೆಕ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 25 ರೊಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು. ಅಥವಾ ಈ ಮೇಲ್ ಮೂಲಕ ಸಲ್ಲಿಸಲಬೇಕು. ವಿಳಾಸ ಈ ಕೆಳಗಿನಂತಿದೆ.
National Highways Authority of India
Regional Office – Hyderabad
Administrative Staff College of India
1 st floor, New Building, College Park Campus-Road.
No,3 Banjara Hills, Hyderabad-500034
Ph: 040-29562147/29562148 
ಈ ಮೇಲ್‌ ವಿಳಾಸ: nhairohyd@gmail.com ಅಥವಾ rohyderabad@nhai.org.

Follow Us:
Download App:
  • android
  • ios