NHAI Recruitment 2022; ಕರ್ನಾಟಕ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕರ್ನಾಟಕದಲ್ಲಿ ಖಾಲಿ ಇರುವ ಒಟ್ಟು 37 ಹುದ್ದೆಗಳಿಗೆ ಅರ್ಜಿ ಆಹ್ವಾಸಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 23ರಂದು ಕೊನೆಯ ದಿನವಾಗಿದೆ. ಇನ್ನೊಂದೆಡೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3484 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅ. 31 ಕೊನೆಯ ದಿನವಾಗಿದೆ.
ಬೆಂಗಳೂರು (ಸೆ.29): ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧೀಕಾರ (ಎನ್‌ಎಚ್‌ಎಐ) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಸಲಿದ್ದು, ಈ ಸಲುವಾಗಿ ನೇಮಕಾತಿ ಆದೇಶವನ್ನು ಹೊರಡಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ನೇಮಕಾತಿ ಮಾಹಿತಿಗಳಾದ ಆಯ್ಕೆ ಪ್ರಕ್ರಿಯೆ, ವೇತನ ಮಾಹಿತಿ, ಬೇಕಾದ ದಾಖಲೆಗಳು, ಅರ್ಜಿ ಸಲ್ಲಿಕೆ ಹೇಗೆ, ವಯೋಮಿತಿ ಹಾಗೂ ವಿದ್ಯಾರ್ಹತೆ ಕುರಿತು ತಿಳಿಸಲಾಗಿದೆ. ಹುದ್ದೆಗಳ ವಿವಿರಗಳು ಇಲ್ಲಿವೆ: ಹುದ್ದೆಗಳು ಒಟ್ಟು 37 ಇದ್ದು, ಕರ್ನಾಟಕ ವಿಭಾಗದಲ್ಲಿ ನೇಮಕಾತಿ ನಡೆಯಲಿದೆ. ಮ್ಯಾಜೇಜರ್ ಹಾಗೂ ಹಿಂದಿ ಭಾಷಾ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾಗಿದೆ. ಮ್ಯಾನೇಜರ್ ಹುದ್ದೆಗಳು 36 ಇದ್ದು, ಹಿಂದಿ ಭಾಷಾ ಅಧಿಕಾರಿ 1 ಲಭ್ಯ ಇದೆ. ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗೆ ಕನಿಷ್ಠ 21 ವರ್ಷ ದಾಟಿರಬೇಕಿದ್ದು, ಗರಿಷ್ಠ ಎಂದರೆ 56 ವರ್ಷಗಳ ಒಳಗಿರಬೇಕಿದೆ. ಸರ್ಕಾರಿ ನಿಯಮಾನುಸಾರ ವಯೋ ಸಡಿಲಿಕೆ ಅನ್ವಯವಾಗಲಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಅಥವಾ ಆಫ್‌ಲೈನಲ್ಲಿ ಸಲ್ಲಿಸಬಹುದಾಗಿದ್ದು, ಅರ್ಜಿ ಶುಲ್ಕದ ವಿವರಗಳನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿದ. ನಿರ್ದಿಷ್ಠ ವೆಬ್‌ಸೈಟ್ ಮೂಲಕ ತೆರಳಿ ಅಲ್ಲಿ ಅರ್ಜಿ ಭರ್ತಿಗೊಳಿಸಬೇಕು. ಆಧಾರ್‌ಕಾರ್ಡ್, ಸದರಿ ಹುದ್ದೆಗೆ ಸಂಬಂಧಿಸಿದ ವಿದ್ಯಾರ್ಹತೆಗಳ ಅಂಕಪಟ್ಟಿಗಳ ನಲಕು ಪ್ರತಿಗಳನ್ನು ಲಗತ್ತಿಸಬೇಕಿದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕವಾಗಿ 15,600 ರು. ಇಂದ 2.8 ಲಕ್ಷ ರು. ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 23ರಂದು ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ https://www.nhai.gov.in/#/ ಗೆ ಭೇಟಿ ನೀಡಬಹುದು.
ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿರಬೇಕು. ಹಿಂದಿ ಭಾಷಾ ಅಧಿಕಾರಿ ಹುದ್ದೆಗೆ ಸ್ನಾತಕೋತ್ರೆ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವಿಪ್ರೋ ಉದ್ಯೋಗಿಗಳಿಗೆ ಸಿಹಿ ಸುದ್ದಿ; ಶೇ.96ರಷ್ಟು ಮಂದಿಗೆ ವಾರ್ಷಿಕ ವೇತನ ಹೆಚ್ಚಳ
3484 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ:
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3484 ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅ. 31ರ ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾಗಿರುವ ಮಾಹಿತಿಗೆ https://ksp-recruitment.in/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.
IOCL recruitment 2022: ಖಾಲಿ ಇರುವ ಬರೋಬ್ಬರಿ 1535 ಹುದ್ದೆಗಳಿಗೆ ನೇಮಕಾತಿ
ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಮತ್ತು ಪಿಎಸ್‌ಐ, ಎಪ್ಡಿಎ, ಎಸ್ಡಿಎ ಮತ್ತು ಪಿಡಿಒ ನೇಮಕಾತಿ ಪರೀಕ್ಷೆಗಳಿಗೆ ಅಗತ್ಯವಿರುವ ಕನ್ನಡ, ಇಂಗ್ಲಿಷ್, ಮೆಂಟಲ್ ಎಬಿಲಿಟಿ, ಜನರಲ್ ಸ್ಟಡೀಸ್, ಕರೆಂಟ್ ಅಪೈರ್ಸ್, ಪಂಚಾಯತ್ ರಾಜ್ ವಿಷಯಗಳನ್ನು ಅತ್ಯಂತ ನುರಿತ ವಿಷಯ ತಜ್ಞರಿಂದ ಬೋಧಿಸಲಾಗುವುದು. ತರಗತಿಗಳು ಅ.10ರಿಂದ ಪ್ರಾರಂಭವಾಗುತ್ತವೆ. ತರಬೇತಿಯ ಸಮಯದಲ್ಲಿ ಉಚಿತ ವಸತಿ ವ್ಯವಸ್ಥೆ ಇರುತ್ತದೆ. ಆಸಕ್ತರು ಅ.7ರೊಳಗೆ 8660217739 ಅಥವಾ 08172-245135 ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್ ಮಾಡಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಹಾಸನ ಶಾಖೆಯ ಕೃಷಿಕ್ ಸರ್ವೋದಯ ಪೌಂಡೇಶನ್ ಕಾರ್ಯದರ್ಶಿ ತಿಳಿಸಿದ್ದಾರೆ.