NHM Recruitment 2022: ಬರೋಬ್ಬರಿ 2980 ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಮುಂದಾದ ರಾಷ್ಟ್ರೀಯ ಆರೋಗ್ಯ ಸಂಸ್ಥೆ
- 2980 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ರಾಷ್ಟ್ರೀಯ ಆರೋಗ್ಯ ಸಂಸ್ಥೆ
- ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 7 ಕೊನೆ ದಿನ.
- 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಎಂಎಸ್ಸಿ, ಪದವಿ ಆದವರಿಗೆ ಅವಕಾಶ
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2980 ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಎನ್‌ಎಂಎಚ್ ಮುಂದಾಗಿದ್ದು, 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಎಂಎಸ್ಸಿ, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 7, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದುಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ತಾಣ http://upnrhm.gov.in/ ಗೆ ಭೇಟಿ ನೀಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಎನ್‌ಎಂಎಚ್ ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಎಂಎಸ್ಸಿ, ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ ಮತ್ತು ವೇತನ: ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 18,150 ರೂ ನಿಂದ 28,015 ರೂ ವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.
KUIDFC RECRUITMENT 2022: ರಾಜ್ಯದ ಕೆಯುಐಡಿಎಫ್‌ಸಿಯಲ್ಲಿ ಖಾಲಿ ಇರುವ 30 ವಿವಿಧ ಹುದ್ದೆಗೆ ಅರ್ಜಿ ಸಲ್ಲಿಸಿ
ಉದ್ಯೋಗದ ಸ್ಥಳ & ಆಯ್ಕೆ ಪ್ರಕ್ರಿಯೆ: ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತರ ಪ್ರದೇಶದ ಲಕ್ನೋದಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
KIMS Koppal Recruitment 2022: ಕೊಪ್ಪಳದ ಕಿಮ್ಸ್ ನಲ್ಲಿ 17 ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ
ಬಿಇ, ಬಿ.ಟೆಕ್ ಆದವರಿಗೆ UPSCಯಲ್ಲಿ ಉದ್ಯೋಗ: ಕೇಂದ್ರ ಲೋಕ ಸೇವಾ ಆಯೋಗ (Union Public Service Commission) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಸಬ್ ಡಿವಿಷನಲ್ ಎಂಜಿನಿಯರಿಂಗ್ (Sub Divisional Engineering) ಹುದ್ದೆಗಳು ಖಾಲಿ ಇದ್ದು, ಬಿಇ (BE), ಬಿ.ಟೆಕ್ (B.Tech) ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಡಿಸೆಂಬರ್ 11 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆನ್ಲೈನ್( Online)ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ UPSC ಅಧಿಕೃತ ವೆಬ್ಸೈಟ್ www.upsc.gov.in ಗೆ ಭೇಟಿ ನೀಡಬಹುದು.
Indian Air Force recruitment 2022: ವಾಯುಸೇನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ
ವಿದ್ಯಾರ್ಹತೆ ಮತ್ತು ಅರ್ಜಿ ಶುಲ್ಕ: ಸಬ್ ಡಿವಿಶಿನಲ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್ ಪಾಸಾಗಿರಬೇಕು. ಸಾಮಾನ್ಯ/ಒಬಿಸಿ-25 ರೂ. SC/ST/ಮಾಜಿ ಸೈನಿಕ-ಯಾವುದೇ ಅರ್ಜಿ ಶುಲ್ಕ ಇಲ್ಲ
ವೇತನ ವಿವರ: ಸಬ್ ಡಿವಿಶಿನಲ್ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 15,600 ರಿಂದ 39,100 ರೂ ವೇತನ ಪಡೆಯಲಿದ್ದಾರೆ.
ವಯೋಮಿತಿ: ಸಬ್ ಡಿವಿಷನಲ್ ಎಂಜಿನಿಯರಿಂಗ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ- 35 ವರ್ಷ, SC/ST-5 ವರ್ಷಗಳ ವಯೋಮಿತಿ ಸಡಿಲಿಕೆ, OBC- 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಉದ್ಯೋಗದ ಸ್ಥಳ: ವೈಯಕ್ತಿಕ ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಸಬ್ ಡಿವಿಶಿನಲ್ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಂಡೀಘಡದಲ್ಲಿ ಉದ್ಯೋಗ ಮಾಡಬೇಕು.