NIC Recruitment 2022: ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ ವಿಜ್ಞಾನಿ ಹುದ್ದೆಗಳಿಗೆ ನೇಮಕಾತಿ

ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ಪರವಾಗಿ ವೈಜ್ಞಾನಿಕ ಮತ್ತು ತಾಂತ್ರಿಕ ಹುದ್ದೆಗಳ 127 ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 21, 2022 ಆಗಿದೆ.
NIC Recruitment 2022 notification for Scientist of 127 post gow

ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ ಅಂಡ್ ಇನ್ಫರ್ಮೇಷನ್ ಟೆಕ್ನಾಲಜಿ (NIELIT) ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ (MeitY) ನ್ಯಾಷನಲ್ ಇನ್ಫರ್ಮ್ಯಾಟಿಕ್ಸ್ ಸೆಂಟರ್ (NIC) ಪರವಾಗಿ ವೈಜ್ಞಾನಿಕ ಮತ್ತು ತಾಂತ್ರಿಕ ಹುದ್ದೆಗಳ 127 ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 21, 2022 ಆಗಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ  B.E/B.Tech/M.E/M.Tech/M.Sc/MCA/M.Phil ಮಾಡಿರಬೇಕು. ಹೆಚ್ಚಿನ ಮಾಹಿತಿಗೆ https://recruitment.nic.in/  ಭೇಟಿ ನೀಡಿ.

ವಿಜ್ಞಾನಿಗಳಾಗಿ ತಮ್ಮ ವೃತ್ತಿಜೀವನವನ್ನು ಮುಂದುವರಿಸಲು ಸಿದ್ಧರಿರುವ ಅಭ್ಯರ್ಥಿಗಳಿಗೆ, NIC ಸೈಂಟಿಸ್ಟ್ ನೇಮಕಾತಿ 2022 ಒಂದು ಸುವರ್ಣ ಅವಕಾಶವಾಗಿದೆ. NIC ಸೈಂಟಿಸ್ಟ್ ನೇಮಕಾತಿ 2022 ರ ವಿವರವಾದ ಅಧಿಸೂಚನೆಯನ್ನು ಕೆಳಗೆ ನೀಡಲಾದ ಲಿಂಕ್‌ನಿಂದ ನೇರವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದು. NIC ಸೈಂಟಿಸ್ಟ್ ನೇಮಕಾತಿ 2022 ಗೆ ಅರ್ಜಿ ಸಲ್ಲಿಸಲು ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ಈ ಕೆಳಗಿನ ದಿನಾಂಕಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು. 

ವಯೋಮಿತಿ: ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ ಅಂಡ್ ಇನ್ಫಾರ್ಮೇಷನ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 35 ವರ್ಷದಿಂದ 50 ವರ್ಷದ ಒಳಗಿರಬೇಕು. 

ಅರ್ಜಿ ಶುಲ್ಕ: ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ ಅಂಡ್ ಇನ್ಫಾರ್ಮೇಷನ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ಅಭ್ಯರ್ಥಿಗಳು 800 ರೂ ಅರ್ಜಿ ಶುಲ್ಕ ಪಾವತಿಸಬೇಕು. ಉಳಿದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. 

FSSAI Recruitment 2022: ಭಾರತೀಯ ಆಹಾರ ಪ್ರಾಧಿಕಾರದಲ್ಲಿ ವಿವಿಧ

ಆಯ್ಕೆ ಪ್ರಕ್ರಿಯೆ: ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ ಅಂಡ್ ಇನ್ಫಾರ್ಮೇಷನ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

NTRO RECRUITMENT 2022: ನ್ಯಾಷನಲ್ ಟೆಕ್ನಿಕಲ್ ರಿಸರ್ಚ್‌ ಆರ್ಗನೈಜೇಷನ್ ನಲ್ಲಿ ಐಟಿ ಉದ್ಯೋಗ

ವೇತನ ವಿವರ: ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ ಅಂಡ್ ಇನ್ಫಾರ್ಮೇಷನ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ ಮಾಸಿಕ 67,700 ರೂ ನಿಂದ 2,16,600 ರೂ ವೇತನ ದೊರೆಯಲಿದೆ.
 

Latest Videos
Follow Us:
Download App:
  • android
  • ios