ಸರ್ಕಾರಿ ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರ ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದೆ. ಇದರಿಂದ ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿದ್ದವರು ನಿಟ್ಟುಸಿರು ಬಿಡುವಂತಾಗಿದೆ.
ನವದೆಹಲಿ, (ಸೆ.06): ಕೊರೋನಾ ವೈರಸ್ ನಡುವೆ ದೇಶದ ಆರ್ಥಿಕ ಪರಿಸ್ಥಿತಿ ಕುಸಿದಿದೆ. ಇನ್ನು ಸರ್ಕಾರಿ ಅಧಿಕಾರಿಗಳು ಖರ್ಚು ವೆಚ್ಚಗಳಲ್ಲಿ ಕಡಿತ ಮಾಡಬೇಕೆಂದು ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಆದ್ರೆ,ಸರ್ಕಾರಿ ಉದ್ಯೋಗಗಳ ನೇಮಕಾತಿಯ ಮೇಲೆ ನಿರ್ಬಂಧ ಹೇರಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಇದರೊಂದಿಗೆ ಉದ್ಯೋಗ ಆಕಾಂಕ್ಷಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಅಂಚೆ ಇಲಾಖೆಯಲ್ಲಿ ನೇಮಕಾತಿ: ವಿದ್ಯಾರ್ಹತೆ 10ನೇ ತರಗತಿ
ಮೊನ್ನೆ ಸೆ, 4ರಂದು ಹೊರಡಿಸಿರುವ ಖರ್ಚು ವೆಚ್ಚಗಳ ಇಲಾಖೆಯ ಸುತ್ತೋಲೆ ಸರ್ಕಾರದ ಇಲಾಖೆಗಳಲ್ಲಿ ಹುದ್ದೆಗಳ ನೇಮಕದ ಬಗ್ಗೆ ಆಂತರಿಕ ವಿಧಾನವನ್ನು ಅಳವಡಿಸಿಕೊಂಡಿದೆಯೇ ಹೊರತು ನೇಮಕಾತಿ ವಿಧಾನದ ಮೇಲೆ ಯಾವುದೇ ರೀತಿಯ ಅಡ್ಡ ಪರಿಣಾಮ ಬೀರುವುದಿಲ್ಲ ಎಂದು ಹಣಕಾಸು ಸಚಿವಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಟ್ವೀಟ್ ಗೆ ಪ್ರತಿಕ್ರಿಯಿಸಿದೆ.
ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಹುದ್ದೆಗಳ ನೇಮಕಾತಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಸ್ಟಾಫ್ ಸೆಲೆಕ್ಷನ್ ಕಮಿಷನ್, ಯುಪಿಎಸ್ ಸಿ, ರೈಲ್ವೆ ನೇಮಕಾತಿ ಮಂಡಳಿ ಮೊದಲಾದವುಗಳ ಮೂಲಕ ಹಿಂದಿನಂತೆಯೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದೆ.
ಅರ್ಜಿ ಹಾಕಿದ್ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: 1,40 ಲಕ್ಷ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶುರು
ಇನ್ನು ಕೊರೋನಾದಿಂದಾಗಿ ಬಾಕಿ ಉಳಿದಿದ್ದ ರೈಲ್ವೆ ಇಲಾಖೆಯ 1,40,640 ವಿವಿಧ ಹುದ್ದೆಗಳ ನೇಮಕಾತಿ ಅರ್ಜಿಗಳ ಪ್ರಕ್ರಿಯೆ ಇದೇ ಡಿಸೆಂಬರ್ 15ರಿಂದ ಪ್ರಾರಂಭವಾಗಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದನ್ನು ಇಲ್ಲಿ ಸ್ಮರಿಬಸಹುದು.