ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿಯಲ್ಲಿ ಖಾಲಿ ಇರುವ 9 ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 04 ಕೊನೆಯ ದಿನವಾಗಿದೆ.

ಬೆಂಗಳೂರು(ಮಾ.5): ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿ (National Water Development Agency) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 9 ಸಹಾಯಕ ಇಂಜಿನಿಯರ್ (Assistant Engineer) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 04 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ nwda.gov.in ಗೆ ಭೇಟಿ ನೀಡಬಹುದು.

Add Asianetnews Kannada as a Preferred SourcegooglePreferred

ಶೈಕ್ಷಣಿಕ ವಿದ್ಯಾರ್ಹತೆ: ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿಯಲ್ಲಿ (NWDA) ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್ ನಲ್ಲಿ B.E. / B.Tech ಮಾಡಿರಬೇಕು.

ವಯೋಮಿತಿ: ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 21ರಿಂದ 27 ವರ್ಷದ ಒಳಗಿರಬೇಕು. ಸರಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

Bank of Baroda Recruitment 2022: ತಜ್ಞ ಅಧಿಕಾರಿ ಹುದ್ದೆಗೆ ಬ್ಯಾಂಕ್ ಆಫ್ ಬರೋಡಾ ನೇಮಕಾತಿ

ಅರ್ಜಿ ಶುಲ್ಕ: ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ SC/ ST/ EWS ಮತ್ತು ಮಹಿಳಾ ಅಭ್ಯರ್ಥಿಗಳು ₹500 ಅರ್ಜಿ ಶುಲ್ಕ ಪಾವತಿಸಬೇಕು. ಇತರ ಅಭ್ಯರ್ಥಿಗಳು ₹840 ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ: ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗೇಟ್ ಪರೀಕ್ಷೆ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಬಳಿಕ ದಾಖಲಾತಿ ಪರಿಶೀಲನೆ ,ವೈಯಕ್ತಿಕ ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ: ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ 7 ನೇ ವೇತನ ಆಯೋಗದ ಅನ್ವಯ ₹44900 ರಿಂದ ₹1,42,400 ವೇತನ ದೊರೆಯಲಿದೆ.

ಉದ್ಯೋಗ ಸ್ಥಳ: ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ಮಾಡಲಾಗುತ್ತದೆ.

SIDBI Recruitment 2022 : ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಿಂದ ಉದ್ಯೋಗ ನೇಮಕಾತಿ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆಗೆ ನೇಮಕಾತಿ ಅಧಿಸೂಚನೆ: ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ (University of Agricultural Sciences Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. 1 ತಾಂತ್ರಿಕ ಅಧಿಕಾರಿ (Technical Officer) ಹುದ್ದೆಯನ್ನು ಭರ್ತಿ ಮಾಡಲು ಮುಂದಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://uasd.edu/ ಗೆ ಭೇಟಿ ನೀಡಿ. ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಮಾರ್ಚ್ 9 ,2022ರಂದು ನೇರ ಸಂದರ್ಶನ ನಡೆಯಲಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆಯಿಂದ ಕೃಷಿ ಪವನಶಾಸ್ತ್ರ (Agrometeorology)ದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಸಂದರ್ಶನದ ವಿವರ: ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳ ಜೊತೆ ಮಾರ್ಚ್9, 2022 ರಂದು ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗುವ ನೇರ ಸಂದರ್ಶನಕ್ಕೆ ಪಾಲ್ಗೊಳ್ಳಲು ಈ ಕೆಳಗಿನ ವಿಳಾಸದಲ್ಲಿ ಇರತಕ್ಕದ್ದು,
ಸಹ ಸಂಶೋಧನಾ ನಿರ್ದೇಶಕರು,
ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ,
ಕೃಷಿ ವಿಶ್ವವಿದ್ಯಾಲಯ,
ವಿಜಯಪುರ
ಕರ್ನಾಟಕ