Oil India Limited Recruitment 2022: ಗ್ರೇಡ್ III, V ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆಬ್ರವರಿ 25,2022ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಬೆಂಗಳೂರು(ಫೆ.14): ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ (Oil India Limited) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗ್ರೇಡ್ III, V ಯಲ್ಲಿ ಒಟ್ಟು 62 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಫೆಬ್ರವರಿ 25,2022ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://www.oil-india.com/ ಗೆ ಭೇಟಿ ನೀಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ನೇಮಕಾತಿಯ ಗ್ರೇಡ್ III, V ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ, 10+2, ವಿದ್ಯಾರ್ಹತೆಯನ್ನು ಪಡೆದಿರಬೇಕು.
ವಯೋಮಿತಿ: ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ನೇಮಕಾತಿಯ ಗ್ರೇಡ್ III, V ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ 31 ರಿಂದ 36 ವರ್ಷದ ಒಳಗಿನ ವಯೋಮಾನದವರಾಗಿರಬೇಕು.SC,ST,OBC ಅಭ್ಯರ್ಥಿಗಳಿಗೆ ಅರಕಾರದ ನಿಯಮದನ್ವಯ ವಯೋಮಿತಿ ಸಡಿಲಿಕೆ ನೀಡಲಾಗಿದೆ.
NDRI Recruitment 2022: ರಾಷ್ಟ್ರೀಯ ಹೈನು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಈ ಕೂಡಲೇ ಅರ್ಜಿ ಸಲ್ಲಿಸಿ
ಆಯ್ಕೆ ಪ್ರಕ್ರಿಯೆ: ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ನೇಮಕಾತಿಯ ಗ್ರೇಡ್ III, V ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ (Computer Based Test-CBT) ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ : ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ನೇಮಕಾತಿಯ ಗ್ರೇಡ್ III, V ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ/ಪರಿಶಿಷ್ಟ ಪಂಗಡ/ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
ಅರ್ಜಿ ಸಲ್ಲಿಕೆ ವಿಧಾನ: ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ನೇಮಕಾತಿಯ ಗ್ರೇಡ್ III, V ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.oil-india.com/default.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 25,2022ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅಧಿಸೂಚನೆ ಓದಲು ಈ ಲಿಂಕ್ ಕ್ಲಿಕ್ ಮಾಡಿ. https://www.oil-india.com/Document/Career/Advertisement_for_Multiple_Posts_2022.pdf
IISC Recruitment 2022: ಬೆಂಗಳೂರಿನ ಐಐಎಸ್‌ಸಿಯಲ್ಲಿ ಇಂಜಿನಿಯರಿಂಗ್, MBA ಮಾಡಿದವರಿಗೆ ಉದ್ಯೋಗವಕಾಶ
ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗೆ ಫೆ.15 ಅರ್ಜಿ ಸಲ್ಲಿಸಲು ಕೊನೆಯ ದಿನ: ಟೆಲಿಕಮ್ಯುನಿಕೇಷನ್ಸ್ ಕನ್ಸಲ್ಟೆಂಟ್ಸ್ ಇಂಡಿಯನ್ ಲಿಮಿಟೆಡ್ (Telecommunications Consultants India Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 6 ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ (Technician Apprentice Trainee) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಫೆಬ್ರವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ dot.gov.in ಗೆ ಅಥವಾ https://tcilindia.com/ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸಬೇಕಾದ ವಿಳಾಸ: ಟೆಲಿಕಮ್ಯುನಿಕೇಷನ್ಸ್ ಕನ್ಸಲ್ಟೆಂಟ್ಸ್ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೊದಲಿಗೆ http://www.mhrdnats.gov.in/ ಅಧಿಕೃತ ವೆಬ್‌ತಾಣಕ್ಕೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು. https://tcilindia.com/ ನಲ್ಲಿ ಅಧಿಸೂಚನೆಯನ್ನು ಓದಿಕೊಂಡು ಬಳಿಕ ಅಗತ್ಯ ದಾಖಲಾತಿಗಳೊಂದಿಗೆ ಫೆ.15ಕ್ಕೆ ಮೊದಲು tcilapprentice2021@gmail.com ಈ ಮೇಲ್ ಮಾಡಬೇಕು.