ಅಗ್ನಿವೀರ ನೇಮಕಕ್ಕೆ ಆನ್‌ಲೈನ್ ಪರೀಕ್ಷೆ, ಫೆಬ್ರವರಿ 6ರೊಳಗೆ ಅರ್ಜಿ ಸಲ್ಲಿಸಲು ಸೂಚನೆ
ಅಗ್ನಿಪಥ್ ಯೋಜನೆಯ ಅಡಿಯಲ್ಲಿ ಭಾರತೀಯ ವಾಯುಪಡೆಯಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು ಅರ್ಹರು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.
ಬೆಂಗಳೂರು: ಅಗ್ನಿಪಥ್ ಯೋಜನೆಯ ಅಡಿಯಲ್ಲಿ ಭಾರತೀಯ ವಾಯುಪಡೆಯಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು ಅರ್ಹರು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.
ಅಗ್ನಿವೀರ ವಾಯು ಹುದ್ದೆಯಲ್ಲಿ ಸೇವೆ ಸಲ್ಲಿಸಲು ಬಯಸುವವರಿಗಾಗಿ 2025 ರಲ್ಲಿ ಆನ್‌ಲೈನ್ ಪರೀಕ್ಷೆ ನಡೆಯಲಿದ್ದು ನೋಂದಣಿ ಪ್ರಕ್ರಿಯೆಯು ಪ್ರಾರಂಭವಾಗಿದೆ. ಉದ್ಯೋಗಾಕಾಂಕ್ಷಿಗಳು ಫೆಬ್ರವರಿ ೬ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಸುಂದರ ದ್ವೀಪದಲ್ಲಿ ಕೆಲಸಕ್ಕೆ ಆಹ್ವಾನ… ಊಟ, ತಿಂಡಿ, ವಸತಿ ಎಲ್ಲವೂ ಉಚಿತ ಆದ್ರೆ ...!?
ಆನ್‌ಲೈನ್ ಪರೀಕ್ಷೆಗೆ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೊಮಾದಲ್ಲಿ ಶೇ. 50 ಅಂಕಗಳೊಂದಿಗೆ ಪಾಸಾಗಿರಬೇಕು ಮತ್ತು ಇಂಗ್ಲಿಷ್ ನಲ್ಲಿ ಶೇ. 50 ಅಂಕಗಳನ್ನು ಪಡೆದಿರಬೇಕು.
ಕೆಎಸ್‌ಆರ್‌ಟಿಸಿ ಉದ್ಯೋಗ: ಎಂಟು ವರ್ಷಗಳಲ್ಲಿ 13,888 ನೌಕರರ ನಿವೃತ್ತಿ, ಕೇವಲ 262 ನೇಮಕಾತಿ
- ವಾಯುಪಡೆಯಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆ
- ಅವಿವಾಹಿತ ಪುರುಷ- ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
- ಅಭ್ಯರ್ಥಿಗಳಿಗೆ 2025ರಲ್ಲಿ ಆನ್‌ಲೈನ್ ಪರೀಕ್ಷೆ
- ಪರೀಕ್ಷೆಗಾಗಿ ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭ