Post Office Recruitment 2022: ಅಂಚೆ ಇಲಾಖೆಯ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗೆ ಅರ್ಜಿ ಆಹ್ವಾನ
ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನಾಂಕವಾಗಿದೆ.
ಬೆಂಗಳೂರು(ಜ.25): ಭಾರತೀಯ ಅಂಚೆ ಇಲಾಖೆ (India Post Office) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 29 ಸ್ಟಾಫ್ ಕಾರ್ ಡ್ರೈವರ್ (Staff Car Driver) ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಜನವರಿ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.indiapost.gov.in ಗೆ ಭೇಟಿ ನೀಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.
ಕೆಲಸದ ಅನುಭವ: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಡ್ರೈವಿಂಗ್ ಲೈಟ್ ಮತ್ತು ಹೆವಿ ಮೋಟಾರ್ ವೆಹಿಕಲ್ನಲ್ಲಿ ಕನಿಷ್ಠ 3 ವರ್ಷ ಅನುಭವ ಹೊಂದಿರಬೇಕು.
KPTCL RECRUITMENT 2022: ವಿದ್ಯುತ್ ಪ್ರಸರಣ ನಿಗಮದಲ್ಲಿ 1492 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ವಯೋಮಿತಿ: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು 18-27 ವರ್ಷದೊಳಗಿರಬೇಕು.
ಉದ್ಯೋಗದ ಸ್ಥಳ: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದೆಹಲಿಯಲ್ಲಿ ಉದ್ಯೋಗ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 19,900 ದಿಂದ 63,200 ವೇತನ ದೊರೆಯಲಿದೆ.
Mangalore University Recruitment 2022: ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (Bengaluru Metro Rail Corporation Limited- BMRCL) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸಹಾಯಕ ಮ್ಯಾನೇಜರ್, ಸೀನಿಯರ್ ಟ್ರಾನ್ಸ್ಪೋರ್ಟ್ ಪ್ಲ್ಯಾನರ್ ಸೇರಿ ಒಟ್ಟು 11 ಹುದ್ದೆಗಳು ಖಾಲಿ ಇವೆ. ಜನವರಿ 21ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮತ್ತು ಆಫ್‌ಲೈನ್ ಮೂಲಕ ಕೂಡ ಅರ್ಜಿ ಸಲ್ಲಿಸಲು ಫೆಬ್ರವರಿ 21 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ https://english.bmrc.co.in/ ಗೆ ಭೇಟಿ ನೀಡಬಹುದು.
ಶೈಕ್ಷಣಿಕ ವಿದ್ಯಾರ್ಹತೆ: ನಮ್ಮ ಮೆಟ್ರೋ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹುದ್ದೆಗನುಸಾರವಾಗಿ ಓದಿರಬೇಕು
ಚೀಫ್ ಎಂಜಿನಿಯರ್ಸ್/ಅಡ್ವೈಸರ್ಸ್-ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ, ಬಿ.ಟೆಕ್ ಮಾಡಿರಬೇಕು.
ಸೀನಿಯರ್ ಟ್ರಾನ್ಸ್ಪೋರ್ಟ್ ಪ್ಲ್ಯಾನರ್(ಕನ್ಸಲ್ಟೆಂಟ್)- ಸಿವಿಲ್ ಎಂಜಿನಿಯರಿಂಗ್, ಟ್ರಾನ್ಸ್ಪೋರ್ಟ್ ಪ್ಲ್ಯಾನಿಂಗ್ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಅಸಿಸ್ಟೆಂಟ್ ಮ್ಯಾನೇಜರ್(ಪ್ರಾಪರ್ಟಿ ಡೆವಲಪ್ಮೆಂಟ್)- ಎಂಬಿಎ, ಎಕನಾಮಿಕ್ಸ್/ಕಾಮರ್ಸ್ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜನರಲ್ ಮ್ಯಾನೇಜರ್ (HR)
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್
3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್
ಕೆ.ಹೆಚ್. ರಸ್ತೆ , ಶಾಂತಿನಗರ
ಬೆಂಗಳೂರು-560027