ಅರ್ಜಿ ಹಾಕಿದ್ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: 1,40 ಲಕ್ಷ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶುರು
ಕೊರೋನಾದಿಂದ ಸ್ಥಗಿತಗೊಂಡಿದ್ದ 1,40,640 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಶರುವಾಗಿದೆ. ಇದರಿಂದ ಅರ್ಜಿ ಹಾಕಿದ್ದ ಅಭ್ಯರ್ಥಿಗಳು ನಿಟ್ಟುಸಿರು ಬಿಡುವಂತಾಗಿದೆ.
ನವದೆಹಲಿ, (ಸೆ.06): ಭಾರತೀಯ ರೈಲ್ವೆಯಲ್ಲಿನ ನೇಮಕಾತಿ ಪ್ರಕ್ರಿಯೆ ಡಿಸೆಂಬರ್ 15ರಿಂದ ಮೊದಲ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ನಡೆಸಲು ಪ್ರಾರಂಭಿಸಲಿದೆ.
ಈ ಕುರಿತು ರಾಷ್ಟ್ರೀಯ ಸಾರಿಗೆ ಮಂಡಳಿಯ ಅಧ್ಯಕ್ಷ ವಿ.ಕೆ. ಯಾದವ್ ತಿಳಿಸಿದ್ದಾರೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 1,40,640 ಹುದ್ದೆಗಳಿಗೆ ಕೊರೋನಾ ಭೀತಿ ಶುರುವಾಗುವ ಮುನ್ನ ಅರ್ಜಿ ಆಹ್ವಾನಿಸಲಾಗಿತ್ತು.
ಬಳಿಕ ಕೊರೋನಾ ಸಂಕಷ್ಟದಿಂದಾಗಿ ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿತ್ತು. ಇದೀಗ ಅವುಗಳ ನೇಮಕಾತಿ ಪ್ರಕ್ರಿಯೆ ಇದೇ ಡಿ.15ರಿಂದ ಆರಂಭವಾಗಲಿದೆ.
ಅಂಚೆ ಇಲಾಖೆಯಲ್ಲಿ ನೇಮಕಾತಿ: ವಿದ್ಯಾರ್ಹತೆ 10ನೇ ತರಗತಿ
1,40,640 ಹುದ್ದೆಗಳಿಗೆ 2.42 ಕೋಟಿ ಅರ್ಜಿಗಳು ಬಂದಿವೆ. ಈ ಅರ್ಜಿಗಳನ್ನು ಮುಂದಿನ ಹಂತಕ್ಕಾಗಿ ಈಗಾಗಲೇ ಅಂತಿಮಗೊಳಿಸಲಾಗಿದೆ. ವಿ.ಕೆ.ಯಾದವ್ ಮಾಹಿತಿ ನೀಡಿದ್ದಾರೆ.
ಗಾರ್ಡ್, ಕ್ಲರ್ಕ್, ಟ್ರ್ಯಾಕ್ ನಿರ್ವಹಣಕಾರ, ಪಾಯಿಂಟ್ಸ್ಮೆನ್ಗ ಹುದ್ದೆಗಳಿನ್ನು ಇದು ಒಳಗೊಂಡಿದೆ. ಈ ಕುರಿತು ರೈಲ್ವೆ ಸಚಿವ ಪಿಯೂಷ್ ಗೋಯಲ್ ಕೂಡ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ. ಸಂಪೂರ್ಣ ಮಾಹಿತಿಯನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.