Asianet Suvarna News Asianet Suvarna News

RCF Recruitment 2022:10th,12th ಐಟಿಐ ಆದವರಿಗೆ ರೈಲು ಕೋಚ್ ಫ್ಯಾಕ್ಟರಿಯಲ್ಲಿ ಉದ್ಯೋಗವಕಾಶ

ರೈಲು ಕೋಚ್ ಫ್ಯಾಕ್ಟರಿ  ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31 ಆಗಿದೆ.  
 

RCF Recruitment 2022 notification  Apply for various Apprentice posts gow
Author
Bengaluru, First Published Jan 13, 2022, 6:58 PM IST
  • Facebook
  • Twitter
  • Whatsapp

ನವದೆಹಲಿ(ಜ.8): ರೈಲು ಕೋಚ್ ಫ್ಯಾಕ್ಟರಿ (Rail Coach Factory-RCF) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪಿಟ್ಟರ್,ವೆಲ್ಡರ್ ಸೇರಿ ಒಟ್ಟು 56 ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.  ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31 ಆಗಿದೆ.  ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು https://rcf.indianrailways.gov.in/ ಗೆ ಭೇಟಿ ನೀಡಲು ಕೋರಲಾಗಿದೆ.

ಒಟ್ಟು 56 ಹುದ್ದೆಗಳ ವಿವರ
ಫಿಟ್ಟರ್: 4 ಪೋಸ್ಟ್‌ಗಳು
ವೆಲ್ಡರ್: 1 ಪೋಸ್ಟ್
ಯಂತ್ರಶಾಸ್ತ್ರಜ್ಞ (Machinist): 13 ಪೋಸ್ಟ್‌ಗಳು
ಪೇಂಟರ್: 15 ಪೋಸ್ಟ್ಗಳು
ಕಾರ್ಪೆಂಟರ್: 3 ಹುದ್ದೆಗಳು
ಮೆಕ್ಯಾನಿಕ್: 3 ಹುದ್ದೆಗಳು
ಎಲೆಕ್ಟ್ರಿಷಿಯನ್: 7 ಹುದ್ದೆಗಳು
ಎಲೆಕ್ಟ್ರಾನಿಕ್ ಮೆಕ್ಯಾನಿಕ್: 9 ಹುದ್ದೆಗಳು
AC & Ref. ಮೆಕ್ಯಾನಿಕ್: 1 ಪೋಸ್ಟ್

ಶೈಕ್ಷಣಿಕ ವಿದ್ಯಾರ್ಹತೆ: ರೈಲು ಕೋಚ್ ಫ್ಯಾಕ್ಟರಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ,12ನೇ ತರಗತಿ ಪರೀಕ್ಷೆಯಲ್ಲಿ ಅಥವಾ ಐಟಿಐಯಲ್ಲಿ  ಕನಿಷ್ಠ 50%  ಅಂಕಗಳೊಂದಿಗೆ, ಮಾನ್ಯತೆ ಪಡೆದ ಮಂಡಳಿಯಿಂದ ಉತ್ತೀರ್ಣರಾಗಿರಬೇಕು ಮತ್ತು ರಾಷ್ಟ್ರೀಯ ವೃತ್ತಿಪರ ತರಬೇತಿ ಮಂಡಳಿಯಿಂದ ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರವನ್ನು ಹೊಂದಿರಬೇಕು.

Bank of Baroda Recruitment 2022: ಪದವೀಧರರಿಗೆ ಸುವರ್ಣಾವಕಾಶ, ಇಂದೇ ಅರ್ಜಿ ಸಲ್ಲಿಸಿ

ಆಯ್ಕೆ ಪ್ರಕ್ರಿಯೆ: ರೈಲು ಕೋಚ್ ಫ್ಯಾಕ್ಟರಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ. ಜೊತೆಗೆ ಐಟಿಐ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ: ರೈಲು ಕೋಚ್ ಫ್ಯಾಕ್ಟರಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಆನ್‌ಲೈನ್ ಮೋಡ್ ಮೂಲಕ 100 ರೂ ಪಾವತಿಸಬೇಕಾಗುತ್ತದೆ. SC/ST/PWD/ ಮಹಿಳಾ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ವಯೋಮಿತಿ: ರೈಲು ಕೋಚ್ ಫ್ಯಾಕ್ಟರಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಯಸ್ಸು 15 ರಿಂದ 24 ವರ್ಷದೊಳಗಿರಬೇಕು. ಆಯ್ಕೆಯಾದವರಿಗೆ ನಿಯಮಾನುಸಾರ ವೇತನ ಸಿಗಲಿದೆ.

INFOSYS OFF CAMPUS DRIVE 2022: 55,000 ಫ್ರೆಶರ್ ಹುದ್ದೆಗಳ ನೇಮಕಾತಿಗೆ ಮುಂದಾದ ಇನ್ಫೋಸಿಸ್‌

ಭಾರತೀಯ ರೈಲ್ವೆ ಹಣಕಾಸು ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಭಾರತೀಯ ರೈಲ್ವೆ ಹಣಕಾಸು ನಿಗಮ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಿಂದಿ ಅನುವಾದಕ, ಅಸಿಸ್ಟೆಂಟ್(ಫೈನಾನ್ಸ್​), ಅಸಿಸ್ಟೆಂಟ್ (ಅಡ್ಮಿನಿಸ್ಟ್ರೇಷನ್) ಸೇರಿ ಒಟ್ಟು 4 ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.  ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 28 ಆಗಿದೆ.  ಈಶಾನ್ಯ, ಜಮ್ಮು ಮತ್ತು ಕಾಶ್ಮೀರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಲಕ್ಷದ್ವೀಪದ ಅಭ್ಯರ್ಥಿಗಳಿಗೆ ಫೆಬ್ರವರಿ 1 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ:ಹಿಂದಿ ಅನುವಾದಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್​ನಿಂದ ಕಡ್ಡಾಯವಾಗಿ ಇಂಗ್ಲಿಷ್​ ಜೊತೆಗೆ ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಖಾಲಿ ಇರುವ ಎರಡು ಸಹಾಯಕ (ಫೈನಾನ್ಸ್​) ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವಾಣಿಜ್ಯ ವಿಭಾಗದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು.
ಸಹಾಯಕ (ಅಡ್ಮಿನಿಸ್ಟ್ರೇಷನ್): ಯಾವುದೇ ವಿಷಯದಲ್ಲಿ ಶೇ.55ರಷ್ಟು ಅಂಕಗಳೊಂದಿಗೆ ಪದವಿ ಪಡೆದಿರಬೇಕು.

ಆಯ್ಕೆ ಪ್ರಕ್ರಿಯೆ: ಭಾರತೀಯ ರೈಲ್ವೆ ಹಣಕಾಸು ನಿಗಮದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.  ಆಯ್ಕೆಯಾದವರು ನವದೆಹಲಿಯಲ್ಲಿ ಕೆಲಸ ಮಾಡಬೇಕಾಗುತ್ತದೆ.

Follow Us:
Download App:
  • android
  • ios