IIIT Bangalore Recruitment 2022: ಬೆಂಗಳೂರಿನ ಐಐಐಟಿಯಲ್ಲಿ Research Associate ಹುದ್ದೆಗೆ ಅರ್ಜಿ ಸಲ್ಲಿಸಿ
- ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು
- ಸಂಶೋಧನಾ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಿದ IIIT ಬೆಂಗಳೂರು
- ಡಿಸೆಂಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ
ಬೆಂಗಳೂರು(ಡಿ.26): ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು (International Institute of Information Technology Bangalore -IIITB) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಸಂಶೋಧನಾ ಸಹಾಯಕ (Research Associate) ಹುದ್ದೆಗಳು ಖಾಲಿ ಇದ್ದು, ಬಿಇ/ಬಿ.ಟೆಕ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Last Date)ವಾಗಿದೆ. ಹೆಚ್ಚಿನ ಮಾಹಿತಿಗಾಗಿ iiitb.ac.in ಗೆ ಭೇಟಿ ನೀಡಲು ಕೋರಲಾಗಿದೆ.
ವಿದ್ಯಾರ್ಹತೆ: ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು ಇಲ್ಲಿನ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಎಂಜಿನಿಯರಿಂಗ್/ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ ಮೆಕ್ಯಾನಿಕಲ್ ಎಂಜಿನಿಯರಿಂಗ್/ ಮಾಹಿತಿ ತಂತ್ರಜ್ಞಾನದಲ್ಲಿ ಬಿಇ, ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇಲ್ ಐಡಿ- opportunities@iiitb.ac.in ಗೆ ಕಳುಹಿಸಲು ಕೋರಲಾಗಿದೆ.
ಆಯ್ಕೆ ಪ್ರಕ್ರಿಯೆ ಮತ್ತು ವೇತನ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.
WIPRO RECRUITMENT 2022: ಎಂಜಿನಿಯರಿಂಗ್ ಅಭ್ಯರ್ಥಿಗಳಿಗೆ ವಿಪ್ರೋ ಭರ್ಜರಿ ಆಫರ್, ಹೊಸಬರಿಗೆ ಮಾತ್ರ ಅವಕಾಶ
ಹಟ್ಟಿ ಚಿನ್ನದ ಗಣಿಯಲ್ಲಿ 1 ಲಕ್ಷಕ್ಕೂ ಅಧಿಕ ವೇತನದ ಉದ್ಯೋಗ, ಇಂದೇ ಅರ್ಜಿ ಸಲ್ಲಿಸಿ: ರಾಯಚೂರಿನ (Raichur) ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ (Hutti Gold Mines Company Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್ (Manager), ಡಿಜಿಎಂ, ಜನರಲ್ ಮ್ಯಾನೇಜರ್ (General Manager) ಹೀಗೆ ಒಟ್ಟು 4 ಹುದ್ದೆಗಳು ಖಾಲಿ ಇದ್ದು, ಬಿಇ, ಪಿಎಚ್.ಡಿ. ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ (Application) ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸಲು ಜನವರಿ 21, 2022 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಂಪೆನಿಯ https://huttigold.karnataka.gov.in/ ಗೆ ಭೇಟಿ ನೀಡಿ ವಿವರಣೆ ಪಡೆದುಕೊಳ್ಳಬಹುದು.
ಜನರಲ್ ಮ್ಯಾನೇಜರ್- 1, ಡೆಪ್ಯುಟಿ ಜನರಲ್ ಮ್ಯಾನೇಜರ್-1, ಸೀನಿಯರ್ ಮ್ಯಾನೇಜರ್ -1, ಮ್ಯಾನೇಜರ್ -1 ಹೀಗೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ರಾಯಚೂರಿನ ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ಅಧಿಸೂಚನೆ ಹೊರಡಿಸಿದೆ.
UPSC Recruitment 2022: ಖಾಲಿ ಇರುವ 187 ಹುದ್ದೆಗಳ ನೇಮಕಕ್ಕೆ ಯುಪಿಎಸ್‌ಸಿ ಅರ್ಜಿ ಆಹ್ವಾನ
ಶೈಕ್ಷಣಿಕ ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನರಲ್ ಮ್ಯಾನೇಜರ್- ಮೈನಿಂಗ್ ವಿಭಾಗದಲ್ಲಿ ಎಂಜಿನಿಯರಿಂಗ್ (BE) ಪೂರ್ಣಗೊಳಿಸಿರಬೇಕು.
ಡೆಪ್ಯುಟಿ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ - BE, ಎಂಎಸ್ಸಿ, ಪಿಎಚ್ಡಿ, ಸ್ನಾತಕೋತ್ತರ ಪದವಿ, ಎಂಬಿಎ ಮಾಡಿರಬೇಕು.
ಮ್ಯಾನೇಜರ್ - ಮಿನರಲ್ ಡ್ರೆಸ್ಸಿಂಗ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ, ಕೆಮಿಕಲ್ ಎಂಜಿನಿಯರಿಂಗ್ ಓದಿರಬೇಕು.
ಅರ್ಜಿ ಸಲ್ಲಿಸುವ ವಿಳಾಸ ಮತ್ತು ವಿಧಾನ: ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಂಡ ವಿಳಾಸಕ್ಕೆ ಕಳುಹಿಸಿ
I/c ಎಕ್ಸಿಕ್ಯೂಟಿವ್ ಡೈರೆಕ್ಟರ್
ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್
PO ಹಟ್ಟಿ- 584115
ರಾಯಚೂರು ಜಿಲ್ಲೆ
ಕರ್ನಾಟಕ