Asianet Suvarna News Asianet Suvarna News

RITESನಲ್ಲಿ ವಿವಿಧ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವಾ ಸಂಸ್ಥೆ(RITES)2020ನೇ ಸಾಲಿನ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಗೆ ಕೆಲ ಮಾಹಿತಿ ಈ ಕೆಳಗೆ ನೀಡಲಾಗಿದ್ದು, ಇದನ್ನು ಓದಿಕೊಂಡು ಅರ್ಜಿ ಹಾಕಿ.

RITES recruitment 2020 apply for 100 Apprentice Posts
Author
Bengaluru, First Published Jan 22, 2020, 4:04 PM IST
  • Facebook
  • Twitter
  • Whatsapp

ನವದೆಹಲಿ, (ಜ.22): ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವಾ ಸಂಸ್ಥೆ(RITES) 100 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪದವಿ ಅಪ್ರೆಂಟಿಸ್, ಡಿಪ್ಲೋಮಾ ಅಪ್ರೆಂಟಿಸ್ ಮತ್ತು ಟ್ರೇಡ್ ಅಪ್ರೆಂಟಿಸ್ ಒಟ್ಟು 100 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಹುದ್ದೆ ನೇಮಕಾತಿಗೆ ಜೆಸ್ಕಾಂ ಅರ್ಜಿ ಆಹ್ವಾನ

ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಗಳನ್ನು  ಜನವರಿ 31, 2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ವಿದ್ಯಾರ್ಹತೆ
* ಪದವಿ ಅಪ್ರೆಂಟಿಸ್: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ/ ಬಿ. ಟೆಕ್ ಮೆಕ್ಯಾನಿಕಲ್/ ಅಟೋಮೊಬೈಲ್/ ಎಲೆಕ್ಟ್ರಿಕಲ್ 
* ಡಿಪ್ಲೋಮಾ ಅಪ್ರೆಂಟಿಸ್: ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ / ಮೆಕ್ಯಾನಿಕಲ್/ ಅಟೋಮೊಬೈಲ್. 
* ಟ್ರೇಡ್ ಅಪ್ರೆಂಟಿಸ್(ಐಟಿಐ ಪಾಸ್): ಮೆಕ್ಯಾನಿಕಲ್/ ಅಟೋಮೊಬೈಲ್/ ಎಲೆಕ್ಟ್ರಿಕಲ್ ಸಂಬಂಧಿಸಿದ ಐಟಿಐ. 

ಗ್ರಾಮಲೆಕ್ಕಾಧಿಕಾರಿ ನೇಮಕಾತಿಗೆ ಅರ್ಜಿ ಆಹ್ವಾನ; ಪರೀಕ್ಷೆ ಇಲ್ಲದೇ ನೇರ ನೇಮಕಾತಿ

ವಯೋಮಿತಿ: 21 ರಿಂದ 30 ವರ್ಷ.
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ. 
ಆಯ್ಕೆ ವಿಧಾನ: ಸಂದರ್ಶನ ಮೂಲಕ ಆಯ್ಕೆ ಇರುತ್ತದೆ.

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us:
Download App:
  • android
  • ios