ನವದೆಹಲಿ, (ಮಾ.01): ರೈಲ್ವೆ ನೇಮಕಾತಿ ಬೋರ್ಡ್ NTPCನಲ್ಲಿ ಖಾಲಿ ಇರುವ ವಿವಿಧ 35,277 ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಲಾಸಾಗಿದೆ.

ಸ್ಟೇಷನ್ ಮಾಸ್ಟರ್, ಟಿಕೆಟ್ ಕ್ಲರ್ಕ್, ಜ್ಯೂನಿಯರ್ ಕ್ಲರ್ಕ್ ಸೇರಿದಂತೆ ಒಟ್ಟು ಒಂಭತ್ತು ನಮೂನೆಯ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. 

KPTCLನಲ್ಲಿ ಭರ್ಜರಿ ನೇಮಕಾತಿ, 3646 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂದಿನಿಂದ ಅಂದ್ರೆ ಮಾರ್ಚ್ 01ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಮಾರ್ಚ್ 31,2019ರೊಳಗೆ ಸಲ್ಲಿಸಬಹುದು.

ವಯೋಮಿತಿ:  ಜುಲೈ 2,2019ರ ಅನ್ವಯ 18 ರಿಂದ 33 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. 

SDA,FDA ಹುದ್ದೆಗಳ ನೇಮಕಾತಿಗೆ KPSC ಅರ್ಜಿ ಆಹ್ವಾನ

ಅರ್ಜಿ ಶುಲ್ಕ:  ಸಾಮಾನ್ಯ / ಓಬಿಸಿ ಅಭ್ಯರ್ಥಿಗಳಿಗೆ 500 ರೂ. ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 250ರೂ. ನಿಗದಿಪಡಿಸಲಾಗಿದ್ದು, ಅರ್ಜಿ ಶುಲ್ಕವನ್ನು ಏಪ್ರಿಲ್ 5,2019 ರೊಳಗೆ ಪಾವತಿಸಲು ಅವಕಾಶವಿರುತ್ತದೆ.

ಆಯ್ಕೆ ಪ್ರಕ್ರಿಯೆ:  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಿಗೆ ಸೇರಲು ಇಚ್ಛಿಸುವ ಅಭ್ಯರ್ಥಿಗಳು ಆರ್‌ಆರ್‌ಬಿಯ ಅಧಿಕೃತ ವೆಬ್‌ಸೈಟ್ http://www.rrbkolkata.gov.in/ ಗೆ ಹೋಗಿ ಅಜಿಯನ್ನು ಮಾರ್ಚ್ 31,2019 ರೊಳಗೆ ಸಲ್ಲಿಸಬೇಕು. ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.