SEBI Recruitment 2022: ಆಫೀಸರ್ ಗ್ರೇಡ್​ ಎ ಹುದ್ದೆಗೆ ಅರ್ಜಿ ಆಹ್ವಾನಿಸಿದ ಭದ್ರತೆ ಮತ್ತು ವಿನಿಮಯ ಮಂಡಳಿ

ಭಾರತದ ಭದ್ರತೆ ಮತ್ತು ವಿನಿಮಯ ಮಂಡಳಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಪ್ರಕಟಿಸಿದೆ.  ಆನ್​ಲೈನ್  ಮೂಲಕ ಅರ್ಜಿ ಸಲ್ಲಿಸಲು ಜನವರಿ 24 ಕೊನೆಯ ದಿನಾಂಕವಾಗಿದೆ.

SEBI Recruitment 2022 Apply for Grade A Officer posts gow

ಬೆಂಗಳೂರು(ಜ.6): ಭಾರತದ ಭದ್ರತೆ ಮತ್ತು ವಿನಿಮಯ ಮಂಡಳಿ (Security and Exchange Board of India- SEBI) ಖಾಲಿ ಇರುವ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಪ್ರಕಟಿಸಿದೆ. ಒಟ್ಟು 120 ಆಫೀಸರ್ ಗ್ರೇಡ್​ ಎ(ಅಸಿಸ್ಟೆಂಟ್ ಮ್ಯಾನೇಜರ್) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 5ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಲು ಜನವರಿ 24 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ  www.sebi.gov.in ಗೆ ಭೇಟಿ ನೀಡಬಹುದು.

120 ಹುದ್ದೆಗಳ ಮಾಹಿತಿ ಇಂತಿದೆ
ಜೆನೆರಲ್ ವಿಭಾಗದಲ್ಲಿ  80 
ಕಾನೂನು ವಿಭಾಗದಲ್ಲಿ 16
ಇನ್ಫಾರ್ಮೇಷನ್‌ ಟೆಕ್ನಾಲಜಿ    ವಿಭಾಗದಲ್ಲಿ14
 ಸಂಶೋಧನೆ ವಿಭಾಗದಲ್ಲಿ    07
ಅಫೀಶಿಯಲ್ ಲಾಂಗ್ವೇಜ್‌ ವಿಭಾಗದಲ್ಲಿ 03

ಶೈಕ್ಷಣಿಕ ವಿದ್ಯಾರ್ಹತೆ: ಆಫೀಸರ್ ಗ್ರೇಡ್​ ಎ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್​, ಕಾನೂನು ಪದವಿ (LLB), ಸಿಎ, ಎಂಎಸ್ಸಿ, ಎಂಎ, ಎಂಕಾಂ, ಎಂಸಿಎ, ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು.

CCI RECRUITMENT 2022: ಭಾರತೀಯ ಸ್ಪರ್ಧಾ ಆಯೋಗದಲ್ಲಿ 2 ಲಕ್ಷದವರೆಗೆ ವೇತನದ ಉದ್ಯೋಗ, ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ: ಸಾಮಾನ್ಯ / ಒಬಿಸಿ / ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ರೂ.1000. ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / PWD ಅಭ್ಯರ್ಥಿಗಳಿಗೆ ರೂ.100. ಪಾವತಿಸಬೇಕಿದ್ದು, ಆನ್‌ಲೈನ್‌ ಮೂಲಕ ಡೆಬಿಟ್ ಕಾರ್ಡ್, ಕ್ರೆಡಿಟ್‌ ಕಾರ್ಡ್‌ ಬಳಸಿ ಪಾವತಿಸಬಹುದು.

ಪ್ರಮುಖ ದಿನಾಂಕಗಳು: 
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಜನವರಿ 24
ಫೇಸ್‌-1 ಆನ್‌ಲೈನ್‌ ಪರೀಕ್ಷೆ ದಿನಾಂಕ ಫೆಬ್ರವರಿ 20
ಫೇಸ್‌-2 ಆನ್‌ಲೈನ್‌ ಪರೀಕ್ಷೆ ದಿನಾಂಕ ಮಾರ್ಚ್ 20
ಪ್ರವೇಶ ಪತ್ರ ಬಿಡುಗಡೆ ದಿನಾಂಕವನ್ನು ಅರ್ಜಿ ಸಲ್ಲಿಸಿದವರಿಗೆ ಇಮೇಲ್/ಎಸ್‌ಎಂಎಸ್‌ ಮೂಲಕ ತಿಳಿಸಲಾಗುತ್ತದೆ.
ಫೇಸ್‌-3 ಸಂದರ್ಶನ ದಿನಾಂಕ ಪರೀಕ್ಷೆ ಬರೆದ ನಂತರ ತಿಳಿಸಲಾಗುತ್ತದೆ.

IARI Recruitment 2022: SSLC ಪಾಸಾದವರನ್ನು ಟೆಕ್ನೀಷಿಯನ್ ಹುದ್ದೆಗಳ ನೇಮಕಾತಿ

ವಯೋಮಿತಿ: ಭಾರತದ ಭದ್ರತೆ ಮತ್ತು ವಿನಿಮಯ ಮಂಡಳಿ ಯಾವುದೇ ವಿಭಾಗದ ಹುದ್ದೆಗೆ ಅರ್ಜಿ ಸಲ್ಲಿಸಲು ಗರಿಷ್ಠ 30 ವರ್ಷ. ವರ್ಗಾವಾರು ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ: ಸಂದರ್ಶನದಲ್ಲಿ ಆಫೀಸರ್ ಗ್ರೇಡ್​ ಎ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 28,150-55,600 ರೂ. ವೇತನ ನೀಡಲಾಗುತ್ತದೆ. ಅಧಿಸೂಚನೆ ಓದಲು ಈ ಲಿಂಕ್ ಕ್ಲಿಕ್ ಮಾಡಿ  https://www.sebi.gov.in/sebiweb/other/careerdetail.jsp?careerId=199

SSLC ಪಾಸಾದವರನ್ನು ಟೆಕ್ನೀಷಿಯನ್ ಹುದ್ದೆಗಳ ನೇಮಕಾತಿಗೆ ಕರೆದ ಕೃಷಿ ಸಂಶೋಧನಾ ಸಂಸ್ಥೆ: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (Indian Agriculture Research Institute) ಖಾಲಿ ಇರುವ ಟೆಕ್ನೀಷಿಯನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಒಟ್ಟು 641 ಟೆಕ್ನಿಷಿಯನ್ (Technician) ಹುದ್ದೆಗಳು ಖಾಲಿ ಇದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನವಾಗಿದೆ. SSLC ಪಾಸಾದ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್​ಸೈಟ್​ iari.res.in ಗೆ ಭೇಟಿ ನೀಡಲು ಕೋರಲಾಗಿದೆ.

ವಿದ್ಯಾರ್ಹತೆ: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ (IARI) ಕಾಲಿ ಇರುವ ತಂತ್ರಜ್ಞ  ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್​/ ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.

ವಯೋಮಿತಿ: ಕೃಷಿ ಸಂಶೋಧನಾ ಸಂಸ್ಥೆಯ ತಂತ್ರಜ್ಞ  ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-30 ವರ್ಷದೊಳಗಿರಬೇಕು. ಸರ್ಕಾರದ ನಿಯಮಾನುಸಾರ ಎಸ್​ಸಿ, ಎಸ್​ಟಿ, ಒಬಿಸಿ, PWD, PH ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

Latest Videos
Follow Us:
Download App:
  • android
  • ios