South Eastern Railway Recruitment 2022: ಸ್ಪೋರ್ಟ್ಸ್ ಕೋಟಾದಡಿ ಖಾಲಿ ಹುದ್ದೆಗಳ ಭರ್ತಿಗೆ ಮುಂದಾದ ಆಗ್ನೇಯ ರೈಲ್ವೆ
ಆಗ್ನೇಯ ರೈಲ್ವೆ ಯಲ್ಲಿ ಖಾಲಿ ಇರುವ 21 ಹುದ್ದೆಗಳನ್ನು ಭರ್ತಿ ಮಾಡಲು ಸ್ಪೋರ್ಟ್ಸ್ ಕೋಟಾದಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 2ರೊಳಗೆ ಅರ್ಜಿ ಸಲ್ಲಿಸಬಹುದು
ಬೆಂಗಳೂರು(ಜ.3): ರೈಲ್ವೆ ಇಲಾಖೆ ಸೇರಲು ಬಯಸುವವರಿಗೆ ಸುವರ್ಣಾವಕಾಶವೊಂದು ಒಲಿದು ಬಂದಿದೆ. ಆಗ್ನೇಯ ರೈಲ್ವೆ(South Eastern Railway) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸ್ಪೋರ್ಟ್ಸ್ ಕೋಟಾ (Sports Quota) ಆಧಾರದಲ್ಲಿ ಒಟ್ಟು 21 ಸ್ಪೋರ್ಟ್ಸ್ ಪರ್ಸನ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 3ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನ ಫೆಬ್ರವರಿ 2, 2022. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ತಾಣ https://www.rrcser.co.in/ ಗೆ ಭೇಟಿ ನೀಡಬಹುದು.
ಶೈಕ್ಷಣಿಕ ವಿದ್ಯಾರ್ಹತೆ: ಆಗ್ನೇಯ ರೈಲ್ವೆ ನೇಮಕಾತಿಯ ಸ್ಪೋರ್ಟ್ಸ್ ಕೋಟಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ 10ನೇ ತರಗತಿ, 12 ನೇ ತರಗತಿ, ಐಟಿಐ ಪೂರ್ಣಗೊಳಿಸಿರಬೇಕು. ಮತ್ತು ರಾಜ್ಯ ರಾಷ್ಟ್ರ ಮಟ್ಟದ ಕ್ರೀಡಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯ ಪ್ರಮಾಣ ಪತ್ರ ಹೊಂದಿರಬೇಕು.
ವಯೋಮಿತಿ: ಆಗ್ನೇಯ ರೈಲ್ವೆ ನೇಮಕಾತಿಯ ಸ್ಪೋರ್ಟ್ಸ್ ಕೋಟಾ ಸ್ಪೋರ್ಟ್ಸ್ ಪರ್ಸನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜನವರಿ 1, 2022ಕ್ಕೆ 18-25 ವರ್ಷದೊಳಗಿರಬೇಕು. ವರ್ಗಗಳ ಆಧಾರದಲ್ಲಿ ವಯೋಮಿತಿ ಸಡಿಲಿಕೆ ಇದೆ.
KAPL Recruitment 2022: ಮಾಸಿಕ 87,000 ರೂ ವೇತನ , ಆಯುಷ್ ವಿಭಾಗದಲ್ಲಿ ಮ್ಯಾನೇಜರ್
ಅರ್ಜಿ ಶುಲ್ಕ: ಆಗ್ನೇಯ ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸುವ SC/ST/ಮಹಿಳೆ/ಅಲ್ಪಸಂಖ್ಯಾತ/EBC ಅಭ್ಯರ್ಥಿಗಳ ಕುಟುಂಬದ ಆದಾಯವು ವಾರ್ಷಿಕ 50000/- ಕ್ಕಿಂತ ಕಡಿಮೆ ಇದ್ದರೆ 250 ರೂ. ಅರ್ಜಿ ಶುಲ್ಕ. ಇತರ ಎಲ್ಲಾ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ. ಆನ್ಲೈನ್ ಪೇಮೆಂಟ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಅಧಿಸೂಚನೆಯಲ್ಲಿ ಹೇಳಲಾಗಿದೆ.
ಆಯ್ಕೆ ಪ್ರಕ್ರಿಯೆ: ಆಗ್ನೇಯ ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ವೀಕೃತ ಅರ್ಜಿಯ ಆಧಾರದಲ್ಲಿ ಶಾರ್ಟ್ಲಿಸ್ಟಿಂಗ್ ಮಾಡಿ, ಕ್ರೀಡಾ ಪ್ರಯೋಗಗಳು, ಕ್ರೀಡಾ ಸಾಧನೆ ಮತ್ತು ಶೈಕ್ಷಣಿಕ ಅರ್ಹತೆಯ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಕರ್ನಾಟಕದಲ್ಲಿ ಉದ್ಯೋಗ ದೊರೆಯಲಿದೆ.
ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವೇತನ ದೊರೆಯಲಿದೆ. ರೈಲ್ವೇ ಇಲಾಖೆಯ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
NHPC Recruitment 2022: ಜಲ ವಿದ್ಯುತ್ ಶಕ್ತಿ ನಿಗಮದಲ್ಲಿ 1.6ಲಕ್ಷ ವೇತನದ ಟ್ರೈನಿ ಇಂಜಿನಿಯರ್
ಖಾಲಿ ಇರುವ 21 ಹುದ್ದೆಗಳಿಗೆ ಸ್ಪೋರ್ಟ್ಸ್ ಕೋಟಾದಡಿ ಅರ್ಜಿ ಆಹ್ವಾನಿಸಿದ ಪಶ್ಚಿಮ ಮಧ್ಯ ರೈಲ್ವೆ: ಪಶ್ಚಿಮ ಮಧ್ಯ ರೈಲ್ವೇ (Western Central Railway)ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 21 ಸ್ಪೋರ್ಟ್ಸ್ ಪರ್ಸನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಸ್ಪೋರ್ಟ್ಸ್ ಕೋಟಾ, 10ನೇ ತರಗತಿ ಹಾಗೂ 12ನೇ ತರಗತಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಲು ಜನವರಿ 22 ಕೊನೆ ದಿನವಾಗಿದೆ. ಅಭ್ಯರ್ಥಿಗಳು ಪಶ್ಚಿಮ ಮಧ್ಯ ರೈಲ್ವೆಯ ಅಧಿಕೃತ ವೆಬ್ ತಾಣ wcr.indianrailways.gov.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಕೋರಲಾಗಿದೆ.
ವಿದ್ಯಾರ್ಹತೆ ಮತ್ತು ವಯೋಮಿತಿ: ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ಸ್ಪೋರ್ಟ್ಸ್ ಪರ್ಸನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ 10ನೇ ತರಗತಿ/ 12ನೇ ತರಗತಿ ಪಾಸಾಗಿರಬೇಕು. ಜೊತೆಗೆ ಟೆಕ್ನಿಕಲ್ ಹುದ್ದೆಗಳಿಗೆ ಐಟಿಐ ಪಾಸಾಗಿರಬೇಕು. ಅಭ್ಯರ್ಥಿಗಳ ವಯಸ್ಸು 18-25 ವರ್ಷದೊಳಗಿರಬೇಕು. PWD ಅಭ್ಯರ್ಥಿಗಳಿಗೆ 10 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.