ಬೆಂಗಳೂರು, (ಆ.20): ಸ್ಟಾಫ್ ಸೆಲೆಕ್ಷನ್ ಕಮಿಷನ್(SSC)ನಲ್ಲಿ ಖಾಲಿ ಇರುವ ಜ್ಯೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಜೂನಿಯರ್ ಇಂಜಿನಿಯರಿಂಗ್‌ನಲ್ಲಿ ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್ ಮತ್ತು ಕ್ವಾಂಟಿಸಿ ಸರ್ವೇಯಿಂಗ್ ಮತ್ತು ಕಾಂಟ್ರ್ಯಾಕ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು,  ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಸೆಪ್ಟೆಂಬರ್ 19 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಜಾಬ್ಸ್‌ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್, ಪದವಿ(ಸಿವಿಎಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಇಂಜಿನಿಯರಿಂಗ್), ಡಿಪ್ಲೋಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ: 30/32 ವರ್ಷ (1 ಜನವರಿ 2020ರಂತೆ) 

ವೇತನ ಶ್ರೇಣಿ:  35,400 ರು. ರಿಂದ 1,12,400 ರು. ತಿಂಗಳಿಗೆ.

ನೇಮಕಾತಿ ವಿಧಾನ: ಲಿಖಿತ ಪರೀಕ್ಷೆ ಹಾಗೂ ಕಂಪ್ಯೂಟರ್ ಆಧಾರಿತ ಬಹು ಆಯ್ಕೆ ಪರೀಕ್ಷೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಅರ್ಜಿ ಶುಲ್ಕ: ಎಸ್ ಸಿ, ಎಸ್ಟಿ ಹಾಗೂ ಮಾಜಿಯೋಧ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಇತರೆ ವರ್ಗದ ಅಭ್ಯರ್ಥಿಗಳಿಗೆ 100 ರು. ನಿಗದಿಪಡಿಸಲಾಗಿದೆ.

ಈ ಬಗ್ಗೆ ಇನ್ನಿತರ ಮಾಹಿತಿಗಾಗಿ  ಇಲ್ಲಿ ಕ್ಲಿಕ್ಕಿಸಿ