Asianet Suvarna News Asianet Suvarna News

SSLC, PUC, ಡಿಗ್ರಿ ಪಾಸಾದವರಿಗೂ ಕೇಂದ್ರ ಸರ್ಕಾರಿ ಹುದ್ದೆ

ಸ್ಟಾಫ್ ಸೆಲೆಕ್ಷನ್ ಕಮಿಷನ್(SSC)2020ನೇ ಸಾಲಿನ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು,   1355 ವಿವಿಧ ಹುದ್ದೆಗಳ ಭರ್ತಿಗೆ ಅಧಿಕೃತ ಪ್ರಕಟಣೆ ಹೊರಡಿಸಿದೆ. 

SSC Recruitment 2020 apply for 1355 Phase VIII Posts
Author
Bengaluru, First Published Mar 2, 2020, 3:31 PM IST

ನವದೆಹಲಿ, (ಮಾ.02): ಸ್ಟಾಫ್ ಸೆಲೆಕ್ಷನ್ ಕಮಿಷನ್(SSC)2020ನೇ ಸಾಲಿನ 1355 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.

8ನೇ ಹಂತದ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಇದೇ ಮಾರ್ಚ್ 20 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಕರ್ನಾಟಕ ಅಂಚೆ ವೃತ್ತದಲ್ಲಿ ವಿವಿಧ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ SSLC, 2nd PUC ಅಥವಾ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 30 ವರ್ಷ ನೇಮಕಾತಿಯನ್ನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ಕಂಪ್ಯೂಟರ್ ಆಧಾರಿತ ಬಹು ಆಯ್ಕೆ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

1279 ದ್ವಿತೀಯ ದರ್ಜೆ ಹುದ್ದೆ ಭರ್ತಿಗೆ KPSC ಅಧಿಸೂಚನೆ ಪ್ರಕಟ

ಅರ್ಜಿ ಶುಲ್ಕ: ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳಿಗೆ 100ರೂ. ಇನ್ನು SC/ST ಅಭ್ಯರ್ಥಿಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

#NewsIn100Seconds: ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

"

ಮಾರ್ಚ್ 02ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us:
Download App:
  • android
  • ios