ಬೆಂಗಳೂರು, (ಅ.29): ಸ್ಟಾಫ್ ಸೆಲೆಕ್ಷನ್ ಕಮಿಷನ್(ಎಸ್.ಎಸ್.ಸಿ) ವತಿಯಿಂದ ಶೀಘ್ರಲಿಪಿಗಾರ ಗ್ರೂಪ್ ಸಿ ಮತ್ತು ಡಿ ಹುದ್ದೆಗಳ ಭರ್ತಿಗೆ ಅರ್ಹ ಆಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ನವೆಂಬರ್ 04 ಕೊನೆಯ ದಿನವಾಗಿದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತೀರ್ಣರಾಗಿರಬೇಕು ಹಾಗೂ ಹಿಂದಿ ಅಥವಾ ಆಂಗ್ಲ ಭಾಷೆಯಲ್ಲಿ ಶೀಘ್ರಲಿಪಿಗಾರ ಸೀನಿಯರ್ ಪರೀಕ್ಷೆಯಲ್ಲಿ ಉತೀರ್ಣರಾಗಿರಬೇಕು.

ಜಾಬ್ಸ್  ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಯೋಮಿತಿ: ಸಿ. ಗ್ರೂಪ್ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 30 ಮತ್ತು ಡಿ ಗ್ರೂಪ್ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18-27 ವಯೋಮಿತಿ ನಿಗದಿಗೊಳಿಸಲಾಗಿದೆ.

ಪರೀಕ್ಷೆ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 100 ರೂ.  ಪರೀಕ್ಷಾ ಶುಲ್ಕ ನಿಗದಿಪಡಿಸಲಾಗಿದ್ದು ಎಸ್.ಸಿ, ಎಸ್.ಎಟಿ, ಪಿಡಬ್ಲೂಡಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಪರೀಕ್ಷಾ ಶುಲ್ಕ ಇರುವುದಿಲ್ಲ. 

ಪರೀಕ್ಷೆಯು 2021 ಮಾರ್ಚ್ 29 ರಿಂದ 31 ಮಾರ್ಚ್ ಅವಥಿಯೊಳಗೆ ದೇಶದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯಲಿದೆ.