Asianet Suvarna News Asianet Suvarna News

SSC ನೇಮಕಾತಿ: 25271 ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

* ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2021ನೇ ಸಾಲಿನ ನೇಮಕಾತಿ
* 25271 ಕಾನ್ಸ್ ಟೇಬಲ್ (GD) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
* ನೇಮಕಾತಿ ಕುರಿತಂತೆ ಅಧಿಕೃತ ವೆಬ್ ಸೈಟ್‌ನಲ್ಲಿ ಪ್ರಕಟ
 

ssc recruitment 2021 apply for constable gd post rbj
Author
Bengaluru, First Published Jul 18, 2021, 3:50 PM IST

ಬೆಂಗಳೂರು, (ಜು.18): ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 25271 ಕಾನ್ಸ್ ಟೇಬಲ್ (GD) ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಕಾನ್ಸ್ ಟೇಬಲ್ (GD) ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 2021 ಆಗಸ್ಟ್ 31ರೊಳಗೆ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಹಾಗೂ 10ನೇ ತರಗತಿ ಉತ್ತೀರ್ಣರಾಗಿರಬೇಕು.

 ವಯೋಮಿತಿ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗೆ 18 ರಿಂದ 23 ವರ್ಷ ವಯಸ್ಸು ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ: SC/ ST/ ಮಾಜಿ ಯೋಧ/ ಮಹಿಳೆಯರಿಗೆ ಯಾವುದೇ ಶುಲ್ಕ ಇಲ್ಲ. ಇತರರಿಗೆ 100ರೂ. ಅರ್ಜಿ ಶುಲ್ಕ ಇದ್ದು,  ಎಸ್ ಬಿಐ ಚಲನ್/ನೆಟ್ ಬ್ಯಾಂಕಿಂಗ್/ ವೀಸಾ, ಮಾಸ್ಟರ್ ಕಾರ್ಡ್/ ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು.

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us:
Download App:
  • android
  • ios