TCIL Recruitment 2022: ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗೆ ಫೆ.15 ಅರ್ಜಿ ಸಲ್ಲಿಸಲು ಕೊನೆಯ ದಿನ

 ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಫೆಬ್ರವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

TCIL recruitment 2022 notification for Technician Apprentice Trainee post gow

ಬೆಂಗಳೂರು(ಫೆ13): ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ (Telecommunications Consultants India Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 6 ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ (Technician Apprentice Trainee) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಅರ್ಜಿ ಸಲ್ಲಿಸಲು ಕೋರಲಾಗಿದೆ. ಫೆಬ್ರವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆನ್​ಲೈನ್​ (Online) ಮೂಲಕ ಅರ್ಜಿ ಸಲ್ಲಿಸಬೇಕು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ dot.gov.in ಗೆ ಅಥವಾ https://tcilindia.com/ಗೆ ಭೇಟಿ ನೀಡಬಹುದು. 

ಒಟ್ಟು 6 ಹುದ್ದೆಗಳ ಮಾಹಿತಿ:
ಆರ್ಕಿಟೆಕ್ಚರ್ (Architecture) -01
ಎಲೆಕ್ಟ್ರಿಕಲ್ ಇಂಜಿನಿಯರಿಂಗ್ (Electrical Engineering) -01
ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ ಇಂಜಿನಿಯರಿಂಗ್ (Electronics & Communication Engineering)- 01
ಮಾಹಿತಿ ತಂತ್ರಜ್ಞಾನ (Information Technology) -01
ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ (Computer Science & Engineering) -01
ಸಿವಿಲ್ ಇಂಜಿನಿಯರಿಂಗ್ (Civil Engineering) - 01

ಶೈಕ್ಷಣಿಕ ವಿದ್ಯಾರ್ಹತೆ: ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಇಂಜಿನಿಯರಿಂಗ್‌ ನಲ್ಲಿ ಡಿಪ್ಲೋಮಾ ಪದವಿ ಪಡೆದಿರಬೇಕು.

KSP ET PST EXAM POSTPONED: ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ET, PST ಪರೀಕ್ಷೆ ಮುಂದೂಡಿಕೆ

ವಯೋಮಿತಿ: ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 28 ವಯಸ್ಸಿನವರಾಗಿರಬೇಕು.   SC/ST/OBC ಅಭ್ಯರ್ಥಿಗಳೀಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ: ಟೆಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ: ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

GKVK Bangalore Recruitment 2022: ಅಸಿಸ್ಟೆಂಟ್ ಪ್ರೊಫೆಸರ್ ಸೇರಿ ಒಟ್ಟು 19 ಹುದ್ದೆಗಳಿಗೆ ಅರ್ಜಿ ಆಹ್ವಾನ

ವೇತನ: ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 8000 ರೂ ಸ್ಟೈಪೆಂಡ್ ನೀಡಲಾಗುವುದು.

ಉದ್ಯೋಗ ಸ್ಥಳ: ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು ದೆಹಲಿಯಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ.

NPCIL Recruitment 2022: ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ನರ್ಸ್ ಸೇರಿ ವಿವಿಧ 42 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಬೇಕಾದ ವಿಳಾಸ: ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೊದಲಿಗೆ http://www.mhrdnats.gov.in/ ಅಧಿಕೃತ ವೆಬ್‌ತಾಣಕ್ಕೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು.  https://tcilindia.com/ ನಲ್ಲಿ ಅಧಿಸೂಚನೆಯನ್ನು ಓದಿಕೊಂಡು ಬಳಿಕ ಅಗತ್ಯ ದಾಖಲಾತಿಗಳೊಂದಿಗೆ ಫೆ.15ಕ್ಕೆ ಮೊದಲು tcilapprentice2021@gmail.com ಈ ಮೇಲ್  ಮಾಡಬೇಕು.

Latest Videos
Follow Us:
Download App:
  • android
  • ios