Asianet Suvarna News Asianet Suvarna News

ಸಹಾಯಕ ಪ್ರಾಧ್ಯಾಪಕರ ಆಯ್ಕೆಯ ಎನ್ಇಟಿ ಪರೀಕ್ಷೆಗೆ ದಿನಾಂಕ ಫಿಕ್ಸ್

ಸಹಾಯಕ ಪ್ರಾಧ್ಯಾಪಕರ ಆಯ್ಕೆಗೆ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮಾಹಿತಿ ನೀಡಿದ್ದಾರೆ. 

UGC NET December 2020 Exam Scheduled In May; Registration Begins rbj
Author
Bengaluru, First Published Feb 2, 2021, 8:24 PM IST

ನವದೆಹಲಿ, (ಫೆ.02): ಸಹಾಯಕ ಪ್ರಾಧ್ಯಾಪಕರ ಆಯ್ಕೆಗೆ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) ಮೇ ತಿಂಗಳಲ್ಲಿ ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮಾಹಿತಿ ನೀಡಿದ್ದಾರೆ. 

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ ಟಿಎ) ಜೂನಿಯರ್ ರಿಸರ್ಚ್ ಫೆಲೋಶಿಪ್ ಹಾಗೂ ಸಹಾಯಕ ಪ್ರಾಧ್ಯಾಪಕ ಅರ್ಹತೆಯ ಯುಜಿಸಿ-ಎನ್ಇಟಿ ಪರೀಕ್ಷೆಗಳನ್ನು 2021ರ ಮೇ ತಿಂಗಳ 2, 3, 4, 5, 6, 7, 10, 11, 12, 14 & 17 ರಂದು ನಡೆಸಲಿದೆ ಎಂದು ರಮೇಶ್ ಪೋಖ್ರಿಯಾಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

10 ಮತ್ತು 12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಎನ್ ಟಿಎ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸ್ವಾಯತ್ತ ಸಂಸ್ಥೆಯಾಗಿದ್ದು, ಫೆ.2 ರಂದು ಪರೀಕ್ಷೆ ನಡೆಸುವುದಕ್ಕೆ ಅಧಿಸೂಚನೆ ಹೊರಡಿಸಿದೆ. 

ಪರೀಕ್ಷೆಗಳು 2 ಪತ್ರಿಕೆಗಳನ್ನು ಒಳಗೊಂಡಿದ್ದು, ಕಂಪ್ಯೂಟರ್ ಆಧಾರಿತ ಟೆಸ್ಟ್ (ಸಿಬಿಟಿ) ಮೋಡ್ ನಲ್ಲೇ ಇರಲಿದೆ, ಮಾ.2 ರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

Follow Us:
Download App:
  • android
  • ios