UPSC ನೇಮಕಾತಿ 2020: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ಯು 2020ನೇ ಸಾಲಿನ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
ನವದೆಹಲಿ, (ಜೂನ್ 14): ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) 2020ನೇ ಸಾಲಿನ ವಿವಿಧ 47 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಐಇಎಸ್/ ಐಎಸ್ಎಸ್ ಪರೀಕ್ಷೆ ಮೂಲಕ ಆಯ್ಕೆಯಾಗಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಜೂನ್ 30 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಮತ್ತಷ್ಟು ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Statistics/ಗಣಿತ, Applied Statistics) ಒಂದು ಪಠ್ಯ ವಿಷಯವಾಗಿರಬೇಕು , ಸ್ನಾತಕೋತ್ತರ ಪದವಿ, ಎಂಬಿಬಿಎಸ್.
ವಯೋಮಿತಿ: ಕನಿಷ್ಠ 21 ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ: ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ 200 ರೂ. ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆಯರಿಗೆ ಯಾವುದೇ ಶುಲ್ಕವಿರುವುದಿಲ್ಲ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.