ವಿವಿಧ ಹುದ್ದೆ ನೇಮಕಾತಿಗೆ ಕೇಂದ್ರ ಲೋಕ ಸೇವಾ ಆಯೋಗ ಅರ್ಜಿ ಆಹ್ವಾನ
ಕೇಂದ್ರ ಲೋಕ ಸೇವಾ ಆಯೋಗ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಬೇಕಿದೆ. ವಿದ್ಯಾರ್ಹತೆ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗೆ ನೀಡಲಾಗಿದೆ.
ನವದೆಹಲಿ, (ಜ.26): ಭಾರತದಾದ್ಯಂತ ವಿವಿಧ 134 ಹುದ್ದೆಗಳ ನೇಮಕಾತಿಗೆ ಕೇಂದ್ರ ಲೋಕ ಸೇವಾ ಆಯೋಗ ಅರ್ಜಿ ಆಹ್ವಾನಿಸಿದೆ.
ಅರ್ಹ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 13/2/2020 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.
ಗ್ರಾಮ ಲೆಕ್ಕಿಗ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ: ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಮತ್ತು ಎಂಬಿಬಿಎಸ್ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ: ಯುಪಿಎಸ್ಸಿ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.
ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಶುಲ್ಕ: ಸಾಮಾನ್ಯ, ಓಬಿಸಿ ಅಭ್ಯರ್ಥಿಗಳಿಗೆ 25 ರೂ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://upsconline.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 13,2020ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಈ ಬಗ್ಗೆ ಮತ್ತಷ್ಟು ಮಾಹಿತಿ ಬೇಕಿದ್ದಲ್ಲಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.