UPSC Recruitment 2022: ಸಹಾಯಕ ಪ್ರಾಧ್ಯಾಪಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೇಂದ್ರ ಲೋಕಸೇವಾ ಆಯೋಗ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಮತ್ತು ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಮಾರ್ಚ್ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಬೆಂಗಳೂರು(ಜ.23): ಕೇಂದ್ರ ಲೋಕಸೇವಾ ಆಯೋಗ (Union Public Service Commission- UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಸಹಾಯಕ ಪ್ರಾಧ್ಯಾಪಕ (Unani) ಸೇರಿ ಒಟ್ಟು 29 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಆನ್‌ಲೈನ್ ಮೂಲಕ ಮಾರ್ಚ್ 17, 2022 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ upsc.gov.in ಗೆ ಭೇಟಿ ನೀಡಲು ಕೋರಲಾಗಿದೆ.
ಒಟ್ಟು 20 ಹುದ್ದೆಗಳ ಮಾಹಿತಿ
ಆಡಳಿತಾಧಿಕಾರಿ ಹುದ್ದೆ (Administrative Officer) : 04 ಹುದ್ದೆಗಳು
ಸಹಾಯಕ ಪ್ರಾಧ್ಯಾಪಕ (Assistant Professor ) : 25 ಹುದ್ದೆಗಳು
ಶೈಕ್ಷಣಿಕ ವಿದ್ಯಾರ್ಹತೆ: ಕೇಂದ್ರ ಲೋಕಸೇವಾ ಆಯೋಗ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರ ವಿದ್ಯಾರ್ಹತೆ ಪಡೆದಿರಬೇಕು.
ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಕಲೆ, ವಾಣಿಜ್ಯ ,ವಿಜ್ಞಾನ ವಿಷಯದಲ್ಲಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.
ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸುವವರು ಕಾನೂನಿನಿಂದ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾನಿಲಯದಿಂದ ಯುನಾನಿ ಮೆಡಿಸಿನ್‌ನಲ್ಲಿ ಪದವಿ ಅಥವಾ ಭಾರತೀಯ ವೈದ್ಯಶಾಸ್ತ್ರದ ಶಾಸನಬದ್ಧ ಮಂಡಳಿ/ ಅಧ್ಯಾಪಕರು/ ಭಾರತೀಯ ವೈದ್ಯಶಾಸ್ತ್ರದ ಪರೀಕ್ಷೆ ಅಥವಾ ತತ್ಸಮಾನ ಪದವಿ ಪಡೆದಿರಬೇಕು. ಇಲ್ಲವಾದರೆ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ: ಕೇಂದ್ರ ಲೋಕಸೇವಾ ಆಯೋಗ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವಯೋಮಿತಿ ನಿಗದಿಪಡಿಸಲಾಗಿದೆ.
ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 35 ವರ್ಷ.
ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 45 ರಿಂದ 50 ವರ್ಷ
ವೇತನ: ಕೇಂದ್ರ ಲೋಕಸೇವಾ ಆಯೋಗ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವೃತನ ದೊರೆಯಲಿದೆ. 7 ನೇ ವೇತನ ಆಯೋಗದ ನಿಯಮದಂತೆ ಮಾಸಿಕ ಸಂಬಳ ದೊರೆಯಲಿದೆ.
EXIM Bank Recruitment 2022: ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ