ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ 'B'ಹುದ್ದೆಗಳ ನೇಮಕಾತಿ

ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ  ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಮತ್ತಷ್ಟು ತಿಳಿಯಲು ಮುಂದೆ ಓದಿ.

SSC Recruitment 2019 Apply for Junior Engineers Posts

ನವದೆಹಲಿ, (06): ಜ್ಯೂನಿಯರ್ ಎಂಜಿನಿಯರ್ (ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಮತ್ತು ಕ್ವಾಂಟಿಸಿ ಸರ್ವೇಯಿಂಗ್ ಮತ್ತು ಕಾಂಟ್ರ್ಯಾಕ್ಟ್) ಹುದ್ದೆಗಳ ನೇಮಕಾತಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ ( SSC) ಅರ್ಜಿ ಆಹ್ವಾನಿಸಿದೆ. 

ಭಾರತ ಸರ್ಕಾರದ ಹಲವಾರು ಇಲಾಖೆಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಿದ್ದು ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಫೆಬ್ರವರಿ 25,2019ರೊಳಗೆ ಅರ್ಜಿ ಸಲ್ಲಿಸಬಹುದು.

ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅಥವಾ ಪದವಿಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ: ತಿಂಗಳಿಗೆ 35,400 ರಿಂದ 1,12,400 ರೂ.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಶುಲ್ಕ 100 ರೂ. ಪಾವತಿಸಬೇಕು. ಮಹಿಳೆ , ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕವಿನಾಯಿತಿಯನ್ನು ಹೊಂದಿರುತ್ತಾರೆ. ಅರ್ಜಿ ಶುಲ್ಕವನ್ನು ಫೆಬ್ರವರಿ 27,2019ರೊಳಗೆ ಆನ್ ಲೈನ್ ಮೂಲಕ ಪಾವತಿಸಬೇಕು.

ಕರ್ನಾಟಕ ತೋಟಗಾರಿಕೆ ಇಲಾಖೆಯಲ್ಲಿ ನೇರ ನೇಮಕಾತಿ

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನೀಡಲಾಗುವುದು. ಪರೀಕ್ಷೆಯು ಸೆಪ್ಟೆಂಬರ್ 23 ರಿಂದ 27,2019 ರವರೆಗೆ ನಡೆಯಲಿದೆ.

ತದನಂತರ ಡಿಸೆಂಬರ್ 29,2019 ರಂದು ಪರೀಕ್ಷೆಯಿರುತ್ತದೆ. ಬಳಿಕ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಹಾಗೂ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ

Latest Videos
Follow Us:
Download App:
  • android
  • ios