ವಿವಿಧ ಹುದ್ದೆಗಳ ನೇಮಕಾತಿಗೆ UPSC ಅರ್ಜಿ ಆಹ್ವಾನ
ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ UPSC ಅರ್ಜಿ ಆಹ್ವಾನಿಸಿದೆ. ಯಾವ ಹುದ್ದೆಗಳು? ಅರ್ಜಿ ಸಲ್ಲಿಸುವುದೇಗೆ? ಕೊನೆ ದಿನಾಂಕ ಯಾವಾಗ? ಅರ್ಜಿ ಶುಲ್ಕವೆಷ್ಟು? ಇನ್ನಿತರ ಮಾಹಿತಿ ಇಲ್ಲಿದೆ.
ಬೆಂಗಳೂರು,. [ಜ.13]: ವಿವಿಧ 392 ಹುದ್ದೆಗಳನ್ನು ಭರ್ತಿ ಮಾಡಲು ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ.
ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಯಲ್ಲಿ ಕೆಲಸ ನಿರ್ವಹಿಸಲು ಆಸಕ್ತವುಳ್ಳ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಫೆಬ್ರವರಿ 4. 2019ರೊಳಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: ಸೈನ್ಯ-208, ನೌಕ ಪಡೆ- 42, ಏರ್ ಫೋರ್ಸ್-92, ನೌಕಾ ಅಕಾಡೆಮಿ -50 ಒಟ್ಟು 392 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
KSRTCಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ: ಅರ್ಜಿ ಹಾಕಿ
ವಿದ್ಯಾರ್ಹತೆ: ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಆರ್ಮಿ ವಿಂಗ್ ಹುದ್ದೆಗೆ ಅರ್ಜಿ ಹಾಕುವವರು 10+2 ಮಾದರಿಯ ಶಾಲೆಯಲ್ಲಿ ಶಿಕ್ಷಣ ಪೂರ್ಣಗಳಿಸಿರಬೇಕು ಅಥವಾ ರಾಷ್ಟ್ರೀಯ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾಲಯ ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಲೆಟೆಸ್ಟ್ ವಿವಿಧ ಜಾಬ್ಸ್ ಸುದ್ದಿಗಳಿಗಾಗಿ ಇದನ್ನು ಕ್ಲಿಕ್ ಮಾಡಿ
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜುಲೈ 2,2000 ರ ಮುಂಚೆ ಜನಿಸಿರಬಾರದು ಮತ್ತು ಜುಲೈ 1,2003 ರೊಳಗೆ ಜನಿಸಿದ ಅವಿವಾಹಿತ ಪುರುಷ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕ: ಈ ಮೇಲ್ಕಂಡ ತಿಳಿಸಲಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ST ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ. ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು ಶುಲ್ಕ 100/- ರೂ. ಪಾವತಿಸಬೇಕು.
ವಿವಿಧ ಹುದ್ದೆಗಳ ನೇಮಕಾತಿಗೆ BMRCL ಅರ್ಜಿ ಆಹ್ವಾನ
ಆಯ್ಕೆ ವಿಧಾನ: ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಮಾಡಲಾಗುತ್ತದೆ. ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ಯುಪಿಎಸ್ ಸಿ ಯ ಅಧಿಕೃತ ವೆಬ್ ಸೈಟ್ ನಲ್ಲಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.