ಯಳಂದೂರು[ನ.2]: ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವಿನ ಶೀತಲ ಸಮರ ರಾಜ್ಯೋತ್ಸವ ಸಂದರ್ಭದಲ್ಲೂ ಮುಂದುವರಿದಿದೆ. ಇಷ್ಟು ವರ್ಷ ಒಟ್ಟಿಗೆ ರಾಜ್ಯೋತ್ಸವ ಆಚರಿಸುತ್ತಿದ್ದವರು ಈ ಬಾರಿ ಪ್ರತ್ಯೇಕ ಧ್ವಜಾರೋಹಣ ನೆರವೇರಿಸಿದ್ದಾರೆ.

ಶುಕ್ರವಾರ ತಾಲೂಕು ಆಡಳಿತ ಕಚೇರಿ ಅವರಣದಲ್ಲಿ ಅಧಿಕಾರಿಗಳು ಕನ್ನಡ ಬಾವುಟ ಧ್ವಜಾರೋಹಣ ಮಾಡುವ ಮೂಲಕ ರಾಜ್ಯೋತ್ಸವ ಆಚರಿಸಿದರೆ, ಪಕ್ಕದಲ್ಲೇ ಇರುವ ತಾಲೂಕು ಪಂಚಾಯಿತಿ ಕಚೇರಿ ಮುಂದೆ ಹೊಸ ಧ್ವಜ ಸ್ತಂಭನೆಟ್ಟ 24 ಜನಪ್ರತಿನಿಧಿಗಳು ಪ್ರತ್ಯೇಕ ಕನ್ನಡ ಧ್ವಜಾರೋಹಣ ಮಾಡಿದರು. ಇದರಿಂದಾಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅಧಿಕಾರಿ ವರ್ಗ ಮತ್ತುವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗಿತ್ತು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಅಧಿಕಾರಿಗಳು ಎರಡೂ ಕಡೆ ಹೆಜ್ಜೆ ಹಾಕಿ ವಿಶ್ವಾಸ ಗಳಿಸುವ ಪ್ರಯತ್ನ ನಡೆಸಿದರೆ, ವಿದ್ಯಾರ್ಥಿಗಳು ಮಾತ್ರ ತಾಲೂಕು ಆಡಳಿತ ನಡೆಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ತಹಸೀಲ್ದಾರ್ ಮತ್ತು ಜನಪ್ರತಿನಿಧಿಗಳ ನಡುವಿನ ಮನಸ್ತಾಪವೇ ಈ ಘಟನೆಗೆ ಕಾರಣ ಎನ್ನಲಾಗಿದೆ. 

ಖಾಸಗಿ ಕಾಲೇಜಿನಲ್ಲಿ ಕನ್ನಡಪರ ಕಾರ್ಯಕರ್ತರಿಂದಲೇ ರಾಜ್ಯೋತ್ಸವ:

ಹೊಳೆಹೊನ್ನೂರಿನ ಖಾಸಗಿ ಶಿಕ್ಷಣ ಸಂಸ್ಥೆಯೊಂದು ಕನ್ನಡ ರಾಜ್ಯೋತ್ಸವ ಆಚರಿಸದಿದ್ದುದಕ್ಕೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರೇ ಮುಂದೆ ನಿಂತು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಿದ್ದಾರೆ. ಸ್ಥಳೀಯರು ಕಾಲೇಜಿಗೆ ಭೇಟಿ ನೀಡಿದಾಗ ತರಗತಿಗಳನ್ನು ನಡೆಸಲಾಗುತ್ತಿತ್ತು ಎಂದು ಹೇಳಲಾಗಿದೆ.