ಜಮ್ಮು-ಕಾಶ್ಮೀರದ ಉಗ್ರದಾಳಿ ಹಾಗೂ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮೇಲಿನ ದಾಳಿ ಖಂಡಿಸಿ ಚಿಕ್ಕಮಗಳೂರು ಬಂದ್ ಆಚರಿಸಲಾಯಿತು. ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ವಾರದ ಸಂತೆಯನ್ನೂ ಸ್ಥಗಿತಗೊಳಿಸಲಾಗಿದೆ. ಕಳಸ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡದಲ್ಲೂ ನಿನ್ನೆ ಬಂದ್ ಆಚರಿಸಲಾಗಿತ್ತು.
ಚಿಕ್ಕಮಗಳೂರು(ಮೇ.03) ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಂನಲ್ಲಿ ನಡೆದ ಉಗ್ರರ ದಾಳಿ ಹಾಗೂ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮೇಲೆ ನಡದ ದಾಳಿಯನ್ನು ಖಂಡಿಸಿ ಚಿಕ್ಕಮಗಳೂರು ನಿವಾಸಿಗಳು ಇಂದು ಜಿಲ್ಲೆಯನ್ನು ಬಂದ್ ಮಾಡಿದ್ದಾರೆ. ಎರಡು ಘಟನೆಗಳನ್ನು ಖಂಡಿಸಿ ಚಿಕ್ಕಮಗಳೂರು ನಿವಾಸಿಗಳು ಕರೆ ನೀಡಿದ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿಕ್ಕಮಗಳೂರು ಪಟ್ಟಣ ಸಂಪೂರ್ಣ ಬಂದ್ ಆಗಿದೆ. ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಇನ್ನು ಚಿಕ್ಕಮಗಳೂರಿನಲ್ಲಿ ಶನಿವಾರದ ವಾರದ ಸಂತೆ ನಡೆಯಲಿದೆ. ಆದರೆ ಬಂದ್ ಕಾರಣದಿಂದ ವಾರದ ಸಂತೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.
ಅಲ್ದೂರ ಪಟ್ಟಣದಲ್ಲಿ ಬಂದ್‌ಗೆ ಭರ್ಜರಿ ಬೆಂಬಲ
ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಸಂಪೂರ್ಣ ಬಂದ್‌ಗೆ ಕರೆ ನೀಡಲಾಗಿದೆ. ಇದರಂತೆ ಇಂದು ಬೆಳಗ್ಗೆಯಿಂದಲೇ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆದಿಲ್ಲ. ಆಲ್ದೂರು ಹೋಳಿಯಲ್ಲಿ ಹೆಚ್ಚು ಹಳ್ಳಿಗಳು, ಕೂಲಿ ಕಾರ್ಮಿಕರು ಹೆಚ್ಚಿದ್ದಾರೆ. ಹೀಗಾಗಿ ಬೆಳಗ್ಗೆ 7 ಗಂಟೆಯಿಂದಲೇ ಅಲ್ದೂರು ಪಟ್ಟಣ ಜನರಿಂದ ಗಿಜಿಗಿಡುತ್ತಿತ್ತು. ಆದರೆ ಇಂದು ಬಂದ್ ಕಾರಣ ಸಂಪೂರ್ಣ ಸ್ತಬ್ಧವಾಗಿದೆ.
ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಹ*ತ್ಯೆ ಪ್ರಕರಣ, 8 ಆರೋಪಿಗಳು ವಶಕ್ಕೆ?
ಕಾಶ್ಮೀರದಲ್ಲಿ ಹಿಂದೂ ಪ್ರವಾಸಿಗರನ್ನು ಗುರಿಯಾಗಿಸಿ ನಡೆಸಿದ ಉಗ್ರ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದಾರೆ. ಪಾಕಿಸ್ತಾನದ ಭಯೋತ್ಪಾದಕರು ಹಿಂದೂಗಳನ್ನು ಗುರಿಯಾಗಿಸಿ ನಡೆಸಿದ ದಾಳಿಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಹಿಂದೂ ಕಾರ್ಯಕರ್ತನ ಮೇಲೆ ಮಂಗಳೂರಿನಲ್ಲಿ ನಡೆದ ದಾಳಿ ಚಿಕ್ಕಮಗಳೂರು ಜನತೆ ಸಹನೆ ಪರೀಕ್ಷಿಸಿದೆ. ಈ ಎರಡು ದಾಳಿ ಖಂಡಿಸಿ ಚಿಕ್ಕಮಗಳೂರು ಬಂದ್ ನಡೆಸಲಾಗುತ್ತಿದೆ.
ದಕ್ಷಿಣ ಕನ್ನಡ ಬಂದ್ ಬಳಿಕ ಚಿಕ್ಕಮಗಳೂರು
ದಕ್ಷಿಣ ಕನ್ನಡದಲ್ಲಿ ಸುಹಾಸ್ ಶೆಟ್ಟಿ ಹ*ತ್ಯೆ ಖಂಡಿಸಿ ನಿನ್ನೆ(ಮೇ.02) ಬಂದ್ ಆಚರಿಸಲಾಗಿತ್ತು. ವಿಶ್ವ ಹಿಂದೂ ಪರಿಷತ್ ಸೇರಿದಂತೆ ಇತರ ಕೆಲ ಹಿಂದೂಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿತ್ತು. ಇದರಂತೆ ನಿನ್ನೆ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಬಂದ್ ಆಗಿತ್ತು. ಒಂದು ದಿನ ಬಂದ್ ಆಚರಣೆ ಯಶಸ್ವಿಯಾಗಿತ್ತು. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಬಂದ್ ವೇಳೆ ಬಸ್ ಸೇರಿದಂತೆ ಇತರ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿತ್ತು. ಮಂಗಳೂರು ಸೇರಿದಂತೆ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.ಇಂದು ಮಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಕಾನೂನು ಸುವ್ಯವಸ್ಥೆ ಪಾಲನೆ ಕುರಿತು ಮಹತ್ವದ ಸಭೆ ನಡೆಸಲಿದ್ದಾರೆ.
ರಾಜ್ಯದ್ಯಂತ ಪ್ರತಿಭಟನೆ
ಸುಹಾಶ್ ಶೆಟ್ಟಿ ಮೇಲಿನ ದಾಳಿ ಖಂಡಿಸಿ ಬಿಜೆಪಿ ಜಿಲ್ಲಾ ಘಟಕಗಳು ಹಲೆವೆಡೆ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್ ಸರ್ಕಾರದ ಒಲೈಕೆ ರಾಜಕಾರಣಕ್ಕೆ ಹಿಂದೂ ಕಾರ್ಯಕರ್ತ ಬೆಲೆ ತೆರಬೇಕಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಇದೇ ವೇಳೆ ಎನ್ಐಎ ತನಿಖೆಗೆ ಆಗ್ರಹಿಸಿದೆ. ರಾಜ್ಯ ಪೊಲೀಸರು ಅಸಾಹಯಕರಾಗಿದ್ದಾರೆ. ಸರ್ಕಾರದ ಸೂಚನೆಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಸುಹಾಶ್ ಶೆಟ್ಟಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರಿನಲ್ಲ ಇಬ್ಬರು ಆರೋಪಿಗಳು ವಶಕ್ಕೆ
ಸುಹಾಸ್ ಶೆಟ್ಟಿ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು 8 ಆರೋಪಿಗಳನ್ನು ವಶಕ್ಕೆ ಪೆಡದು ವಿಚಾರಣೆ ನಡೆಸಿದ್ದರೆ. ಈ ಪೈಕಿ ಇಬ್ಬರು ಆರೋಪಿಗಳು ಚಿಕ್ಕಮಗಳೂರಿನ ಕಳಸ ಮೂಲ ಎನ್ನಲಾಗುತ್ತಿದೆ. ಮಂಗಳೂರಿನ ಸಫ್ವಾನ್ ಗ್ಯಾಂಗ್ ಸೇರಿಕೊಂಡು ಸುಹಾಸ್ ಶೆಟ್ಟಿ ಮೇಲಿನ ದಾಳಿ ಪ್ರಕರಣದಲ್ಲಿ ಬಾಗಿಯಾಗಿದ್ದಾರೆ ಎಂದು ಇಬ್ಬರು ಹಿಂದೂ ಯುವಕರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸುಹಾಸ್ ಶೆಟ್ಟಿ ಹ*ತ್ಯೆ ಸುಳಿವು ಮೊದಲೇ ಪೊಲೀಸರಿಗಿತ್ತು, ಮೆಸೇಜ್ ಮಾಹಿತಿ ಬಿಚ್ಚಿಟ್ಟ ಸುನೀಲ್ ಕಮಾರ್


