ಭಾರೀ ಮಳೆಗೆ ಕುಸಿದು ಬಿದ್ದ ಸೇತುವೆ: ಬ್ರಿಡ್ಜ್ ಅಡಿ ಸಿಲುಕಿದ ಬೈಕ್‌ ಸವಾರ

ಬೈಕ್ ಸಂಚರಿಸುವಾಗಲೇ ಕುಸಿದ ಸೇತುವೆ| ಮೂಡಿಗೆರೆ ತಾಲೂಕಿನ ಮಾಲಿಂಗನಾಡು ಗ್ರಾಮದಲ್ಲಿ ನಡೆದ ಘಟನೆ| ಘಟನೆಯಲ್ಲಿ ಬೈಕ್ ಸವಾರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ| ಬೈಕ್ ಸವಾರನ ಸ್ಥಿತಿ ಗಂಭೀರ| ಭಾರೀ ಮಳೆ ಸುರಿದ ಪರಿಣಾಮ ಸೇತುವೆ ಕುಸಿದು ಬಿದ್ದಿದೆ| ಸೇತುವೆ ಮೇಲೆ ಸಂಚರಿಸುತ್ತಿದ್ದ ಸೇತುವೆ ಕುಸಿದು ಬಿದ್ದ ಪರಿಣಾಮ ಸೇತುವೆ ಅಡಿ ಸಿಲುಕಿದ್ದನು|  ಸುಮಾರು 40-50 ಅಡಿ ಆಳಕ್ಕೆ ಕುಸಿದ ಸೇತುವೆ|  

Heavy Rain in Chikkamagluru District: Bridge Collapse

ಚಿಕ್ಕಮಗಳೂರು(ಅ.14): ಬೈಕ್ ಸಂಚರಿಸುವಾಗಲೇ ಸೇತುವೆಯೊಂದು ಕುಸಿದು ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಮಾಲಿಂಗನಾಡು ಗ್ರಾಮದಲ್ಲಿ ಘಟನೆ ಇಂದು ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೈಕ್ ಸವಾರನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. 

ಭಾರೀ ಮಳೆ ಸುರಿದ ಪರಿಣಾಮ ಸೇತುವೆ ಕುಸಿದು ಬಿದ್ದಿದೆ. ಸೇತುವೆ ಮೇಲೆ ಸಂಚರಿಸುತ್ತಿದ್ದ ಸೇತುವೆ ಕುಸಿದು ಬಿದ್ದ ಪರಿಣಾಮ ಸೇತುವೆ ಅಡಿ ಸಿಲುಕಿದ್ದನು, ಬಳಿಕ ಆತನನ್ನು ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಸೇತುವೆ ಸುಮಾರು 40-50 ಅಡಿ ಆಳಕ್ಕೆ ಕುಸಿದಿದೆ ಎನ್ನಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಲೆನಾಡಿನ ಜನ ಹೈರಾಣಾಗಿದ್ದಾರೆ. ಕಳೆದ ವರ್ಷ ಸುರಿದ ಭಾರೀ ಮಳೆಯಿಂದ ಮಲೆನಾಡಿನ ಜನ ಮನೆ, ಜಮೀನುಗಳನ್ನು ಕಳೆದುಕೊಂಡು ಬೀದಿ ಪಾಲಾಗಿದ್ದರು.  
 

Latest Videos
Follow Us:
Download App:
  • android
  • ios