ಚಿಕ್ಕಮಗಳೂರು : ಸೇತುವೆ ಸಂಚಾರ ನಿಷೇಧಿಸಿ DC ಸೂಚನೆ

ಬಾಳೆಹೊನ್ನೂರಿನಲ್ಲಿ ಭದ್ರಾ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿರುವ ಸೇತುವೆ ದುರಸ್ಥಿಗೆ ಪರಿಶೀಲನೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ  ಸೇತುವೆ ಮೇಲೆ ವಾಹನ ಸಂಚಾರ ನಿಷೇಧಿಸಲಾಗಿದೆ. 

Traffic diversion in Balehonnur For Repairing Bridge

ಚಿಕ್ಕಮಗಳೂರು (ಅ.23): ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಸೇತುವೆಯಲ್ಲಿ ವಾಹನ ಸಂಚಾರ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. 

ಚಿಕ್ಕಮಗಳುರು ಜಿಲ್ಲೆ NR ಪುರ ತಾಲೂಕಿನಲ್ಲಿ ಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಪರಿವೀಕ್ಷಣೆ ಹಿನ್ನಲೆಯಲ್ಲಿ ಸೇತುವೆ ಮೇಲೆ ವಾಹನ ಸಂಚಾರ ನಿಷೇಧಿಸಲಾಗಿದೆ. 

ಬೆಳಗ್ಗಿನಿಂದಲೇ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಗೌತಮ್ ಬಗಾದಿ ಆದೇಶ ನೀಡಿದ್ದು, ಸೇತುವೆ ಕುಸಿಯುವ ಹಂತದಲ್ಲಿರುವ ಹಿನ್ನೆಲೆಯಲ್ಲಿ  ಅಧಿಕಾರಿಗಳು ಬ್ರಿಡ್ಜ್ ಟೆಸ್ಟಿಂಗ್ ಮಶಿನ್ ಬಳಸಿ ಪರಿಶೀಲನೆ ನಡೆಸುತ್ತಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿರಾಜಪೇಟೆ-ಬೈಂದೂರು ರಾಷ್ಟ್ರೀಯ ಹೆದ್ದಾರಿ 27ರಲ್ಲಿ ಈ ಸೇತುವೆ ಇದ್ದು,  ವಾಹನ ಸವಾರರು ಬದಲಿ ಮಾರ್ಗ ಬಳಸಲು ಸೂಚನೆ ನೀಡಲಾಗಿದೆ. 

Latest Videos
Follow Us:
Download App:
  • android
  • ios