ಚಿತ್ರದುರ್ಗ[ಮಾ. 13] ಚಾಲಕನ ನಿಯಂತ್ರಣ ತಪ್ಪಿದ ಕಾರು ಮತ್ತೊಂದು ಕಾರು, ಲಾರಿಗೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೊಗಳೆರಹಟ್ಟಿ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಬಂಗಾರಕ್ಕನಗುಡ್ಡದ ಕೇಶವಮೂರ್ತಿ (40), ನಾಗಮ್ಮ (30), ರಾಧಿಕಾ (22) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬರಿಗೆ ಗಂಭೀರ ಗಾಯವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಬಂಗಾರಕ್ಕನಗುಡ್ಡದವರು ಎಂದು ಗುರುತಿಸಲಾಗಿದೆ. ತುರುವನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.