ಲಾರಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿದ್ದಾರೆ.
ಚಿತ್ರದುರ್ಗ, [ಮೇ.01]: ಲಾರಿ ಹಾಗೂ ಇನ್ನೋವಾ ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ತಾಯಮ್ಮ (60), ಲತಾ(26), ಸುಶ್ಮಿತಾ (23), ವರ್ಣಿಕಾ(09), ಜಾಹ್ನವಿ (03) ಮೃತರು. ಕಾರ್ನ ಟೈರ್ ಬ್ಲಾಸ್ಟ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಇಬ್ಬರು ಮಹಿಳೆಯರು ಸೇರಿ ಐವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
