ಹೊಸದುರ್ಗ [ನ.05]: ರಾಜ್ಯದಲ್ಲಿ ಮದ್ಯಪಾನ ನಿಷೇಧ ಜಾರಿಗೆ ತರುವಂತೆ ಮುಖ್ಯಮಂತ್ರಿ ಯಡಿಯೂರಪ್ಪನವರ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್‌ ಅವರು ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು. 

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿ ಸೋಮವಾರ ಆಯೋಜನೆಗೊಂಡಿದ್ದ ಮಾದಕ ವ್ಯಸನಮುಕ್ತ ಸಮಾಜ ಕುರಿತು ವಿಶೇಷ ಉಪನ್ಯಾಸದ ಸಂದರ್ಭದಲ್ಲಿ ಅವರು ರಾಜ್ಯದಲ್ಲಿ ಮದ್ಯಪಾನ ನಿಷೇಧದ ಕುರಿತು ಮಾತನಾಡಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸಾಣೇಹಳ್ಳಿ ಗ್ರಾಮದ ಗ್ರೀಕ್‌ ಮಾದರಿಯ ಬಯಲು ರಂಗಮಂದಿರದಲ್ಲಿ ಆಯೋಜನೆಗೊಂಡಿದ್ದ ರಾಷ್ಟ್ರೀಯ ನಾಟಕೋತ್ಸವ ಅಂಗವಾಗಿ ಈ ವಿಶೇಷ ಉಪನ್ಯಾಸವಿತ್ತು. ಡಾ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಸಚಿವರಾದ ಮಾಧುಸ್ವಾಮಿ, ಸಿ.ಟಿ.ರವಿ ಇನ್ನಿತರರು ಇದ್ದರು.