Asianet Suvarna News Asianet Suvarna News

New year 2023: ಸಂತೋಷ ಕೂಟಗಳ ಮೇಲೆ ಕಣ್ಗಾವಲು: ಬಿ.ಸಿ.ಪಾಟೀಲ್ ಸೂಚನೆ

 ಕೋವಿಡ್‌ ಪ್ರಕರಣಗಳು ವಿದೇಶದಲ್ಲಿ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಹೊಸ ವರ್ಷದ ಸಂಭ್ರಮಾಚರಣೆಗಳ ಮೇಲೆ ಕಣ್ಣಾಯಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

Surveillance the New Year celebrations says bc patil at chitradurga rav
Author
First Published Dec 31, 2022, 7:36 AM IST

ಚಿತ್ರದುರ್ಗ (ಡಿ.31) : ಕೋವಿಡ್‌ ಪ್ರಕರಣಗಳು ವಿದೇಶದಲ್ಲಿ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಹೊಸ ವರ್ಷದ ಸಂಭ್ರಮಾಚರಣೆಗಳ ಮೇಲೆ ಕಣ್ಣಾಯಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಮಟ್ಟದ ಕೋವಿಡ್‌-19 ಪ್ರಸ್ತುತ ಸ್ಥಿತಿಗತಿ, ಮುಂಜಾಗೃತಾ ಕ್ರಮಗಳು ಮತ್ತು ವ್ಯಾಕ್ಸಿನೇಷನ್‌ ಬಗ್ಗೆ ವಿಡಿಯೋ ಕಾನ್ಪೆರೆನ್ಸ್‌ ಮೂಲಕ ಸಭೆ ನಡೆಸಿದ ಅವರು ಮಾಸ್‌್ಕ ಧರಿಸುವುದು, ಕೈ ಸ್ವಚ್ಛಗೊಳಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ ಮಾಡಲು ಸೂಚಿಸಿದರು.

New Year 2023: ಕರ್ನಾಟಕದ ಪ್ರವಾಸಿತಾಣದ ಲಾಡ್ಜ್‌ಗಳು ಈಗಲೇ ಭರ್ತಿ..!

ಹೊಸ ವರ್ಷದ ಸಂಭ್ರಮಾಚರಣೆಗೆ ಹೊಟೇಲ್‌, ಪಬ್‌, ಬಾರ್‌ಅಂಡ್‌ರೆಸ್ಟೋರೆಂಟ್ಸ್‌, ಕ್ಲಬ್ಸ್‌ ಮತ್ತುಇತರೆ ಒಳಾಂಗಣ ಪ್ರದೇಶಗಳಲ್ಲಿ ಹಮ್ಮಿಕೊಳ್ಳುವ ಸಭೆ ಸಮಾರಂಭಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಜನರನ್ನು ಸೇರಿಸಬಾರದು. ಒಳಾಂಗಣ ಪ್ರದೇಶಗಳಲ್ಲಿ ಹಮ್ಮಿಕೊಳ್ಳುವ ಸಭೆ ಸಮಾರಂಭಗಳಲ್ಲಿ ಸಾಮಾಜಿಕ ಅಂತರ, ಮಾಸ್‌್ಕ, ಬಳಸುವುದು ಮತ್ತು ಬಂದವರಿಗೆ ಥರ್ಮಲ್‌ ಸ್ಕ್ರೀನಿಂಗ್‌ ಮಾಡಲು ಸೂಚಿಸಿ¨ರು.

ಮುಂಜಾಗೃತೆಗೆ ಸೂಚನೆ:

ಎಲ್ಲಾ ಸಿನಿಮಾ ಮಂದಿರಗಳಲ್ಲಿ ಮಾಸ್‌್ಕ ಧರಿಸುವುದು ಕಡ್ಡಾಯವಾಗಿಸಬೇಕು. ಜಿಲ್ಲಾಆಸ್ಪತ್ರೆ, ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳು, ಸಮುದಾಯ ಆರೋಗ್ಯಕೇಂದ್ರಗಳು, ಪ್ರಾಥಮಿಕ ಕೇಂದ್ರಗಳಲ್ಲಿ ಕೋವಿಡ್‌ ಟೆಸ್ಟಿಂಗ್‌ ಮಾಡಬೇಕು. ಪಾಸಿಟಿವ್‌ ಧೃಢಪಟ್ಟಎಲ್ಲಾ ಪ್ರಕರಣಗಳ ಮಾದರಿಗಳನ್ನು ಪ್ರಯೋಗಾಲಯಕ್ಕೆ ತಕ್ಷಣವೇ ಕಳಿಸಬೇಕೆಂದರು. ಕೋವಿಡ್‌ 19 ಪ್ರಕರಣಗಳ ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಐಸೋಲೇಶನ್‌ ಬೆಡ್‌ಗಳನ್ನು ಮೀಸಲಿಡುವುದು. ವೆಂಟಿಲೇಟ​ರ್‍ಸ್, ಆಕ್ಸಿಜನ್‌ ಪೂರೈಕೆ, ಔಷಧಿ, ಐಸೋಲೆಷನ್‌ ಬೆಡ್‌ ಹಾಗೂ ಚಿಕಿತ್ಸೆಗೆ ಸಂಬಂಧಿಸಿದ ವೈದ್ಯಕೀಯ ಉಪಕರಣಗಳನ್ನು ವ್ಯವಸ್ಥೆ ಮಾಡಿಕೊಳ್ಳಬೇಕು. ಆಕ್ಸಿಜನ್‌ ಪೂರೈಕೆ ವ್ಯವಸ್ಥೆಯನ್ನು ಖಚಿತ ಪಡಿಸಿಕೊಳ್ಳಲು ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಪ್ರತಿ 15 ದಿನಗಳಿಗೊಮ್ಮೆ ಡ್ರೈರನ್‌ ಮಾಡಬೇಕು. ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮಕ್ಕಳು ಮತ್ತು ಶಾಲಾ ಸಿಬ್ಬಂದಿ ಕಡ್ಡಾಯವಾಗಿ ಮಾಸ್‌್ಕ ಧರಿಸಲು ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ದಿವ್ಯಪ್ರಭು ಮಾತನಾಡಿ, ಕೋವಿಡ್‌-19 ಮುಂಜಾಗ್ರತಾ ಕ್ರಮದ ಕುರಿತು ಈಗಾಗಲೇ ಜಿಲ್ಲಾ ಮಟ್ಟದ ಸಭೆಯನ್ನು ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಲಾಗಿದೆ .ಕೋವಿಡ್‌ ಪಾಸಿಟಿವ್‌ ದೃಢಪಟ್ಟಪ್ರಕರಣಗಳ ಮಾದರಿಯನ್ನು ಪ್ರಯೋಗಾಲಯಗಳಿಗೆ ಕಳುಹಿಸಲು ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಎಸ್‌.ದಿವಾಕರ ಮಾತನಾಡಿ, ವೇದಾಂತ ಸಂಸ್ಥೆಯಿಂದ ಸರಬರಾಜಾಗಿದ್ದ ವೈದ್ಯೋಪಕರಣಗಳನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಸದುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಅವಶ್ಯಕತೆಗಿಂತ ಹೆಚ್ಚಿದ್ದಲ್ಲಿ ಜಿಲ್ಲೆಯ ಇತರೆ ತಾಲೂಕು ಆಸ್ಪತ್ರೆಗಳಿಗೆ ಸರಬರಾಜು ಮಾಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್‌.ರಂಗನಾಥ್‌ ಮಾತನಾಡಿ, ಎಲ್ಲಾ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಪಿಎಸ್‌ಎ ಪ್ಲಾಂಟ್‌ಗಳ ಪ್ರಜರ್‌, ಪ್ಯೂರಿಟಿ ಟೆಸ್ಟ್‌ ಮಾಡಲು ತಿಳಿಸಲಾಗಿದೆ. ಜಿಲ್ಲೆಯಲ್ಲಿ 58 ವೆಂಟಿಲೇಟರ್‌ಗಳು ಲಭ್ಯವಿದ್ದು, ಜಿಲಾ ್ಲಆಸ್ಪತ್ರೆಯಲ್ಲಿ 40 ಇತರೆ ಕಡೆ 18 ವೆಂಟಿಲೇಟರ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸಬೆಗೆ ಮಾಹಿತಿ ನೀಡಿದರು.

\Bengaluru: ಹೊಸ ವರ್ಷಕ್ಕೆ ಉಗ್ರರ ಕರಿನೆರಳು: ರಾಜಧಾನಿಯಲ್ಲಿ ಪೊಲೀಸರ ಕಟ್ಟೆಚ್ಚರ

ಜಿಲ್ಲಾ ಶಸ್ತ್ರಚಿಕಿತ್ಸ ಎಚ್‌.ಜೆ.ಬಸವರಾಜಪ್ಪ, ಜಿಲ್ಲೆಯ ಎಲ್ಲಾ ತಾಲೂಕಿನ ತಹಶೀಲ್ದಾರ್‌, ತಾಲೂಕು ಕಾರ್ಯ ನಿರ್ವಹಣಾಧಿಕಾರಿಗಳು, ಆರೋಗ್ಯಾಧಿಕಾರಿಗಳು, ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳು ಮತ್ತು ಖಾಸಗಿ ಆಸ್ಪತ್ರೆಯ ಮುಖ್ಯಸ್ಥರು ವಿಡಿಯೋ ಕಾನ್ಫರೆನ್ಸ್‌ ನಲ್ಲಿ ಹಾಜರಿದ್ದರು.

Follow Us:
Download App:
  • android
  • ios