ಚಿತ್ರದುರ್ಗ [ನ.12]: ಬಿಜೆಪಿ ಶಾಸಕರ ಮನೆಯಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದಾರೆ. 

ಚಿತ್ರದುರ್ಗದಲ್ಲಿರುವ ಬಿಜೆಪಿ ಶಾಸಕ ವೈ.ಎನ್ ಗೋಪಾಲಕೃಷ್ಣ ಮನೆಗೆ ಕಳ್ಳರು ಕನ್ನ ಹಾಕಲು ಯತ್ನಿಸಿದ್ದಾರೆ. 

ಇಲ್ಲಿನ ಧವಳಗಿರಿ ಬಡಾವಣೆಯಲ್ಲಿರುವ ಮನೆಯಲ್ಲಿ ಯಾರು ಇಲ್ಲದಿರುವಾದ ರಾತ್ರಿ ವೇಳೆ ಮನೆಯ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಳ್ಳಾರಿ ಜಿಲ್ಲೆಯ ಕೂಡ್ಲಗಿ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಗೋಪಾಲಕೃಷ್ಣ ಅವರ ನಿವಾಸವು ಚಿತ್ರದುರ್ಗದಲ್ಲಿ ಇದ್ದು ಕಳೆದ ಆರು ತಿಂಗಳ ಹಿಂದೆಯೂ ಇಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿತ್ತು. 

ಈ ಸಂಬಂಧ ಕೋಟೆ ಠಾಣೆ ಸಿಪಿಐ ಪ್ರಕಾಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಕೋಟೆ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. 

"