ಖ್ಯಾತ ನಟ ವಿಜಯ್ ಪುತ್ರಿ ಖಿನ್ನತೆಯಿಂದ ಆತ್ಮಹತ್ಯೆ
ಖ್ಯಾತ ತಮಿಳು ನಟ ವಿಜಯ್ ಆಂಟೋನಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸಂಗೀತ ಸಂಯೋಜಕ, ನಟ ಮತ್ತು ನಿರ್ಮಾಪಕ ವಿಜಯ್ ಆಂಟೋನಿ ಅವರ ಪುತ್ರಿ ಮೀರಾ ಅವರು ಇಂದು ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಚೆನ್ನೈ: ಖ್ಯಾತ ತಮಿಳು ನಟ ವಿಜಯ್ ಆಂಟೋನಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸಂಗೀತ ಸಂಯೋಜಕ, ನಟ ಮತ್ತು ನಿರ್ಮಾಪಕ ವಿಜಯ್ ಆಂಟೋನಿ ಅವರ ಪುತ್ರಿ ಮೀರಾ ಅವರು ಇಂದು ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. 16 ವರ್ಷದ ಮಗಳು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ವರದಿಗಳ ಪ್ರಕಾರ, ಮೀರಾ ಚೆನ್ನೈನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರು. ತಕ್ಷಣ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಕೆಯನ್ನು ಪರೀಕ್ಷಿಸಿದ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು. ವರದಿಗಳ ಪ್ರಕಾರ, ಅವರು ಒತ್ತಡದಲ್ಲಿದ್ದರು ಮತ್ತು ಅದಕ್ಕಾಗಿಯೇ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ಮೀರಾ, ಚೆನ್ನೈನ ಜನಪ್ರಿಯ ಶಾಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದರು. ಕಲಿಕೆಯಲ್ಲಿ ಉತ್ತಮವಾಗಿದ್ದರು. ವಿಜಯ್ ಆಂಟೋನಿ ತನ್ನ ಕುಟುಂಬದೊಂದಿಗೆ ಚೆನ್ನೈನ ಡಿಡಿಕೆ ರಸ್ತೆಯಲ್ಲಿರುವ ಮನೆಯಲ್ಲಿ ವಾಸಿಸುತ್ತಿದ್ದಾರೆ. ಬೆಳಗ್ಗೆ ಮೀರಾಳ ಕೊಠಡಿಯ ಬಾಗಿಲು ಬಹಳ ಹೊತ್ತಾದರೂ ತೆರೆಯದ ಕಾರಣ ಬಾಗಿಲು ತೆರೆದು ನೋಡಿದಾಗ ಲಾರಾ ನೇಣು ಬಿಗಿದುಕೊಂಡಿರುವುದು ಕಂಡು ಬೆಚ್ಚಿಬಿದ್ದಿದ್ದಾರೆ. ಮನೆಯ ಸಹಾಯಕರು ಕೋಣೆಯಲ್ಲಿದ್ದ ಮೀರಾ ಅವರನ್ನು ಚೆನ್ನೈನ ಆಸ್ಪತ್ರೆಗೆ ಸಾಗಿಸಿದರು. ಆದರೆ, ಆಕೆಯನ್ನು ಪರೀಕ್ಷಿಸಿದ ವೈದ್ಯರು ಆಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ತಮಿಳಿನ ಖ್ಯಾತ ನಟ ವಿಜಯ್‌ಗೆ ಸಿಕ್ತು ಸ್ಯಾಂಡಲ್‌ವುಡ್ ಕಿಚ್ಚನ ಬಲ: ಏನಿದು ಸುದ್ದಿ?
ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮೀರಾ ದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ದರು. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೀರಾ ತುಂಬಾ ಒತ್ತಡದಲ್ಲಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
2006ರಲ್ಲಿ, ವಿಜಯ್ ಆಂಟೋನಿ ಫಾತಿಮಾಳನ್ನು ವಿವಾಹವಾದರು. ದಂಪತಿಗೆ ಮೀರಾ ಅಲ್ಲದೆ ಇನ್ನೊಬ್ಬ ಮಗನಿದ್ದಾನೆ. ವಿಜಯ್ ಆಂಟೋನಿ ತಮಿಳಿನ ಅನೇಕ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪಿಚ್ಚಕಾರನ್ ಅವರಿಗೆ ಬಹಳ ಹೆಸರು ತಂದುಕೊಟ್ಟ ಸಿನಿಮಾ. ವಲಂಡಿಯಲ್ಲಿ ಕಲ್ತೇನೆ, ಡಿಸುಮೆ, ವೇದಾತ್ತಕಾರನ್, ಅಂಗಡಿ ತೇರು ಸೇರಿದಂತೆ ವಿವಿಧ ಚಿತ್ರಗಳಿಗೆ ಸಂಗೀತ ಸಂಯೋಜಿಸಿ ಫೇಮಸ್ ಆಗಿದ್ದಾರೆ. ಕಲಿ, ನಾನ್, ಸೈತಾನ್, ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.
ವಾಟರ್ ಸ್ಕೂರ್ ಅಪಘಾತ; ಕೋಮಾಗೆ ಜಾರಿದ ನಟ ವಿಜಯ್ ಆಂಟೋನಿ?