Asianet Suvarna News Asianet Suvarna News

ವಿವಾಹ ವಾರ್ಷಿಕೋತ್ಸವದ ಬೆನ್ನಲ್ಲೇ ನಟಿ ಮಹಾಲಕ್ಷ್ಮಿ ಪತಿ ರವೀಂದರ್ ಅರೆಸ್ಟ್​! ಆಗಿದ್ದೇನು?

ಇದೇ 1ನೇ ತಾರೀಖು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದ ಖ್ಯಾತ ನಿರ್ಮಾಪಕ ರವೀಂದರ್ ಚಂದ್ರಶೇಖರ್  ಅವರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಇದಕ್ಕೆ ಕಾರಣ ಏನು?
 

Actress Mahalakshmis husband Ravinder Chandrasekaran arrested suc
Author
First Published Sep 8, 2023, 4:10 PM IST

 ಅತಿ ಹೆಚ್ಚು ಟ್ರೋಲ್​ಗೆ ಒಳಗಾಗಿರುವ ದಂಪತಿ ಎಂದರೆ ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ರವೀಂದರ್ ಚಂದ್ರಶೇಖರ್ (Ravindra Chandrasekaran) ಮತ್ತು ಕಿರುತೆರೆ ನಿರೂಪಕಿ ಮಹಾಲಕ್ಷ್ಮಿ (Mahalakshmi) ಮೊನ್ನೆಯಷ್ಟೇ ತಮ್ಮ ಪ್ರಥಮ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದರು. ಕಳೆದ ಸೆಪ್ಟೆಂಬರ್ 1ರಂದು ತಿರುಪತಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಾಗಿನಿಂದಲೂ ಇವರ ಮದುವೆ ವಿಚಾರಕ್ಕೆ ಬಹಳಷ್ಟು ಟ್ರೋಲ್​ ಆಗುತ್ತಲೇ ಇದ್ದಾರೆ.  ಎಲ್ಲಿ ನೋಡಿದರೂ ಇವರದ್ದೇ ವಿಷಯ.  ಈ ಜೋಡಿ ಏನೇ ಮಾಡಲಿ ಅದರ ಚರ್ಚೆ ಭಾರಿ ಜೋರಾಗಿ ನಡೆಯುತ್ತದೆ. ಇದಕ್ಕೆ ಕಾರಣ ಈ ಜೋಡಿಯ ಲುಕ್​. ಅತ್ಯಂತ ಸುಂದರಿಯಾಗಿರುವ ಮಹಾಲಕ್ಷ್ಮಿ ಅವರು, ತೀರಾ ದಪ್ಪ ಇರುವ ರವೀಂದರ್​ ಜೊತೆ ಮದುವೆಯಾಗಿದ್ದಾರೆ ಎನ್ನುವ ಕಾರಣಕ್ಕೆ  ಬಾಹ್ಯ ರೂಪ ನೋಡಿ ಟ್ರೋಲ್​ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲಿಯೂ ಮದುವೆಯಾಗದ ಹುಡುಗರು ಈ ಜೋಡಿಯನ್ನು ನೋಡಿ ಹೊಟ್ಟೆ ಉರಿದುಕೊಳ್ಳುತ್ತಿದ್ದರೆ, ಹುಡುಗಿಯರು ಈಕೆ ಹಣಕ್ಕಾಗಿಯೇ ಮದುವೆಯಾಗಿದ್ದಾರೆ ಎನ್ನುತ್ತಿದ್ದಾರೆ. ರವೀಂದರ್​​ ಅವರ  ಆಸ್ತಿ ನೋಡಿ ಮದುವೆಯಾಗಿದ್ದಾರೆ, ಈ ಜೋಡಿ ಒಟ್ಟಾಗಿ ಇರುವ ಚಾನ್ಸೇ ಇಲ್ಲ ಎಂದವರೇ ಹೆಚ್ಚು. 

 ಮೊದಲ ವಿವಾಹ ವಾರ್ಷಿಕೋತ್ಸವದ ಖುಷಿಯಲ್ಲಿ ಇರುವಾಗಲೇ ಈ ಜೋಡಿಗೆ ಶಾಕಿಂಗ್​ ಎದುರಾಗಿದೆ.  ನಿರ್ಮಾಪಕ ರವೀಂದರ್​ ಚಂದ್ರಶೇಖರನ್ ಅವರನ್ನು ನಿನ್ನೆ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಇದಕ್ಕೆ ಕಾರಣ, ಇವರ​ ವಿರುದ್ಧ ವಂಚನೆ ಆರೋಪ ದಾಖಲಾಗಿದೆ.   ರವೀಂದರ್ ಚಂದ್ರಶೇಖರ್ ವಿರುದ್ಧ ಕೇಂದ್ರ ಅಪರಾಧ ವಿಭಾಗದ ಪೊಲೀಸ್ ಠಾಣೆಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದೆ.  15.83 ಕೋಟಿ ರೂಪಾಯಿ  ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ   ರವೀಂದರ್ ಚಂದ್ರಶೇಖರ್ ಪೊಲೀಸ್ ಅವರನ್ನು ಈಗ ಬಂಧಿಸಲಾಗಿದೆ.

Wedding Anniversary: ಮಹಾಲಕ್ಷ್ಮಿ ಕೊಂಚ ದುರಹಂಕಾರಿ, ಆ್ಯಟಿಟ್ಯುಡ್​ ಜಾಸ್ತಿ... ರವೀಂದರ್​ 'ಲವ್​ ಲೆಟರ್'​ ವೈರಲ್​
 
ಅಷ್ಟಕ್ಕೂ ಇವರ ಮೇಲೆ ಕೇಸ್​ ಹಾಕಿರುವವರು ಅಮೆರಿಕದಲ್ಲಿ ನೆಲೆಸಿರುವ ಭಾರತ ಮೂಲದ ವಿಜಯ್​ ಎಂಬುವವರು. ಇವರು ನೀಡಿರುವ ದೂರಿನ ಆಧಾರದ ಮೇಲೆ ರವೀಂದರ್​ ವಿರುದ್ಧ ಪ್ರಕರಣ ದಾಖಲಾಗಿದೆ.  ವಿಚಾರಣೆಗೆ ಬರುವಂತೆ ರವಿಂದರ್ ಅವರಿಗೆ ನೋಟಿಸ್​ ನೀಡಲಾಗಿತ್ತು. ಇದರ ಆಧಾರದ ಮೇಲೆ  ರವೀಂದರ್​ ಅವರು ವಿಚಾರಣೆಯನ್ನೂ ಎದುರಿಸಿದ್ದಾರೆ ಎನ್ನಲಾಗಿದೆ. ವಿಜಯ್​ ದೂರಿನ ಪ್ರಕಾರ ಅವರು ಭಾರೀ ಮೊತ್ತದ ಹಣವನ್ನು ಸಿನಿಮಾ ಪ್ರಾಜೆಕ್ಟ್​ (Cinema Project) ಒಂದಕ್ಕೆ ರವೀಂದರ್​ ಜತೆ ಸೇರಿ ಹೂಡಿಕೆ ಮಾಡಿದ್ದರಂತೆ. ಆದರೆ, ರವಿಂದರ್​ ಅವರ ಸಿನಿಮಾದ ಬೆಳವಣಿಗೆ ಬಗ್ಗೆ ಯಾವುದೇ ಮಾಹಿತಿ ನೀಡಿದೆ, ತಮ್ಮ ಬದ್ಧತೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದ್ದಾರೆ. ಇದರಿಂದ ಮೋಸ ಹೋಗಿದ್ದೇನೆ ಎಂದು ಭಾವಿಸಿ ರವೀಂದರ್​ ವಿರುದ್ಧ ದೂರು ನೀಡಿದ್ದಾರೆ. ಸಾಲವನ್ನು ವಾಪಸ್​ ನೀಡುವಂತೆ ಹಲವು ಬಾರಿ ಕೇಳಿಕೊಂಡರೂ  ಪ್ರಯೋಜನವಾಗಿಲ್ಲ. ಆದ್ದರಿಂದ ದೂರು ದಾಖಲಿಸಿರುವುದಾಗಿ ವಿಜಯ್​ ಹೇಳಿದ್ದಾರೆ.

 ಈ ದೂರನ್ನು ಆನ್​ಲೈನ್​ ಮೂಲಕ ದಾಖಲು ಮಾಡಲಾಗಿದೆ. ದೂರನ್ನು ಪಡೆದುಕೊಂಡಿರುವ  ಚೆನ್ನೈ ಕೇಂದ್ರ ಅಪರಾಧ ವಿಭಾಗ ರವೀಂದರ್​ ಅವರನ್ನು ವಿಚಾರಣೆಗೆ ಬರುವಂತೆ ಕರೆದಿತ್ತು. ನಿರ್ಮಾಣ ಕಂಪೆನಿ ಲಿಬ್ರಾ ಪ್ರೊಡಕ್ಷನ್​ನ ಮಾಲೀಕ (Production owner) ರವೀಂದರ್ ಚಂದ್ರಶೇಖರ್   ವಿರುದ್ಧ ಸಾಕ್ಷಿಗಳನ್ನು  ಕಲೆಹಾಕಲಾಗುತ್ತಿದೆ. ಆದರೆ ಈ ನಡುವೆಯೇ  ನೋಟಿಸ್ ಸ್ವೀಕರಿಸಿರುವ ತಕ್ಷಣ ರವೀಂದರ್ ಅವರು ತನಿಖೆಗೆ ಹಾಜರಾಗಿ, ಅಧಿಕಾರಿಗಳೊಂದಿಗೆ ಸಹಕರಿಸಿದ್ದಾರೆ ಮತ್ತು ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಎರಡೂ ಕಡೆ ಮಾಡಿರುವ ಆರೋಪಗಳ ಸಿಂಧುತ್ವವನ್ನು ನಿರ್ಧರಿಸಲು ಇಬ್ಬರೂ ಪ್ರಸ್ತುತಪಡಿಸಿದ ಸಾಕ್ಷ್ಯಗಳು, ಹೇಳಿಕೆಗಳು ಮತ್ತು ದಾಖಲೆಗಳನ್ನು ಪೊಲೀಸರು ಸಂಪೂರ್ಣವಾಗಿ ಪರಿಶೀಲಿಸಲಿದ್ದಾರೆ.  

ಮಹಾಲಕ್ಷ್ಮಿ-ರವೀಂದರ್​ ಡಿವೋರ್ಸ್​ ಕೊಡ್ತಿದ್ದಾರಾ? ಇನ್​ಸ್ಟಾಗ್ರಾಮ್​ನಲ್ಲಿ ನಟಿ ಹೇಳಿದ್ದೇನು?

Follow Us:
Download App:
  • android
  • ios