ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ನೀಲಿ ಚಿತ್ರ ಹಾಗೂ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿದ್ದಾರೆ. ಇಡಿ ಅವರ ಕಚೇರಿ ಮೇಲೆ ದಾಳಿ ನಡೆಸಿದೆ. ಶಿಲ್ಪಾ ಭಾಗಿಯಾಗಿಲ್ಲ ಎಂದು ರಾಜ್ ಹೇಳಿದ್ದಾರೆ. ಈ ನಡುವೆ ಶಿಲ್ಪಾ ಪತಿಯ ಫೋಟೋ ಜೊತೆ ಮಾತನಾಡುವ ವಿಡಿಯೋ ವೈರಲ್ ಆಗಿದೆ. 2021ರಲ್ಲೂ ರಾಜ್ ನೀಲಿ ಚಿತ್ರ ಪ್ರಕರಣದಲ್ಲಿ ಸಿಕ್ಕಿ ಜೈಲು ಸೇರಿದ್ದರು. ಶಿಲ್ಪಾ ಹೆಸರು ಕೂಡ ಈ ಪ್ರಕರಣದಲ್ಲಿ ಥಳಕು ಹಾಕಿಕೊಂಡಿತ್ತು.
ಸದ್ಯ ಬಾಲಿವುಡ್ ಬ್ಯೂಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ಉದ್ಯಮಿ ರಾಜ್ ಕುಂದ್ರಾ ನೀಲಿ ಚಿತ್ರದ ಮತ್ತು ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಸಿಲುಕಿದ್ದಾರೆ. ಅಶ್ಲೀಲ ಸಿನಿಮಾ ನಿರ್ಮಾಣ ಮತ್ತು ಹಂಚಿಕೆ ಪ್ರಕರಣ ಎದುರಿಸುತ್ತಿರುವ ಈ ದಂಪತಿ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಈಚೆಗಷ್ಟೇ ದಾಳಿ ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಹಾಗೂ ಇನ್ನೂ ಕೆಲವರ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದೆ. ಇದೀಗ ಈ ಪ್ರಕರಣ ಹೆಚ್ಚು ಮಹತ್ವ ಪಡೆದುಕೊಳ್ಳುತ್ತಿರುವುದಕ್ಕೆ ಕಾರಣ ರಾಜ್ ಕುಂದ್ರಾ ಅವರು ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಎನ್ನುವ ಕಾರಣಕ್ಕೆ. ಈ ಹಿಂದೆ ಈ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಹೆಸರು ಕೂಡ ಕೇಳಿ ಬಂದಿತ್ತು. ಇದೇ ಕಾರಣಕ್ಕೆ ಈಗಲೂ ಶಿಲ್ಪಾಗೂ ಇದಕ್ಕೂ ಲಿಂಕ್ ಇದೆ ಎಂದೇ ಹೇಳಲಾಗುತ್ತಿದೆ. ಇದರಲ್ಲಿ ತಮ್ಮ ಪತ್ನಿಯ ತಪ್ಪಿಲ್ಲ ಎಂದು ರಾಜ್ ಕುಂದ್ರಾ ಪದೇ ಪದೇ ಹೇಳುತ್ತಿದ್ದರೂ, ದಂಪತಿ ಸದ್ಯ ಆತಂಕದಲ್ಲಿದ್ದಾರೆ. ದಯವಿಟ್ಟು ಇದಕ್ಕೂ, ಶಿಲ್ಪಾಗೂ ಲಿಂಕ್ ಮಾಡಬೇಡಿ. ಇದರಲ್ಲಿ ಆಕೆಯ ಪಾತ್ರ ಏನೂ ಇಲ್ಲ. ಎಲ್ಲವನ್ನೂ ನ್ಯಾಯಾಲಯದ ನಿರ್ಧರಿಸುತ್ತದೆ. ಇದಾಗಲೇ ಸೂಕ್ತ ಸಾಕ್ಷ್ಯಾಧಾರಗಳನ್ನು, ದಾಖಲೆಗಳನ್ನು ನೀಡಿದ್ದೇನೆ. ಈ ಪ್ರಕರಣದಲ್ಲಿ ನನ್ನ ಪಾತ್ರವೂ ಇಲ್ಲ ಎನ್ನುವುದು ಸಾಬೀತಾಗುತ್ತದೆ. ದಯವಿಟ್ಟು ಶಿಲ್ಪಾ ಶೆಟ್ಟಿಯ ಮಾನ ಹರಾಜು ಹಾಕಬೇಡಿ ಎಂದು ರಾಜ ಕುಂದ್ರ ಕಣ್ಣೀರು ಹಾಕುತ್ತಲೇ ಇದ್ದಾರೆ.
ಇದರ ನಡುವೆಯೇ ಏನೂ ಆಗಿಯೇ ಇಲ್ಲ ಎನ್ನುವಂತೆ ಶಿಲ್ಪಾ ಶೆಟ್ಟಿ ಧೈರ್ಯದಿಂದ ಇದ್ದಾರೆ. ಇದೀಗ ಅವರು ತಮ್ಮ ಪತಿ ರಾಜ್ ಕುಂದ್ರಾ ಅವರ ಫೋಟೋ ಜೊತೆ ಮಾತನಾಡುತ್ತಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ. ಈ ವಿಡಿಯೋಅನ್ನು ಖುದ್ದು ರಾಜ್ ಕುಂದ್ರಾ ಅವರೇ ಶೇರ್ ಮಾಡಿಕೊಂಡಿದ್ದಾರೆ. ಇದರಲ್ಲಿ 50 ವರ್ಷದ ಬ್ಯೂಟಿ ಶಿಲ್ಪಾ 20ರ ತರುಣಿಯಂತೆ ಕಾಣಿಸುತ್ತಿದ್ದು ಚಿಕ್ಕ ಡ್ರೆಸ್ ಹಾಕಿಕೊಂಡು ಪತಿಯ ಫೋಟೋದೊಂದಿಗೆ ಮಾತನಾಡಿದ್ದಾರೆ. 1988ರಲ್ಲಿ ಬಿಡುಗಡೆಯಾದ ಜಾಕಿ ಶ್ರಾಫ್ ಮತ್ತು ಕಿಮಿ ಕಾಟ್ಕರ್ ಅಭಿನಯದ ತೆರಾ ನಾಮ್ ಲಿಯಾ ಚಿತ್ರದ ಮುಝೆ ತುಮ್ಸೆ ಹೈ ಕಿತನೆ ಗಿಲೆ ಹಾಡನ್ನು ಹಾಡಿದ್ದಾರೆ. ಈ ಹಾಡಿನಲ್ಲಿ ಪತಿಯ ಮೇಲೆ ಶಿಲ್ಪಾ ಸಿಟ್ಟುಮಾಡಿಕೊಂಡಿರುವಂತೆ ಕಾಣಿಸುತ್ತಿದೆ.
ನೀಲಿ ಚಿತ್ರದ ಮಧ್ಯೆ ಶಿಲ್ಪಾ ಶೆಟ್ಟಿಯನ್ನು ಎಳೆದು ತರಬೇಡಿ ಪ್ಲೀಸ್: ಉದ್ಯಮಿ ರಾಜ್ ಕುಂದ್ರಾ ಕಣ್ಣೀರು!
ಈ ಹಾಡಿನಲ್ಲಿ ನೀನು ನನಗೆ ಸಿಗಲಿಲ್ಲ ಎನ್ನುವ ಮಾತಿದೆ. ಅದನ್ನೇ ಶಿಲ್ಪಾ ಹೇಳಿದ್ದಾರೆ. ಆದರೆ ಫ್ಯಾನ್ಸ್ ಶಾಕ್ ಆಗಿದ್ದು, ಅದಕ್ಕಲ್ಲ, ಫೋಟೋದಿಂದಲೇ ರಾಜ್ ಕುಂದ್ರಾ ಆ ಹಾಡನ್ನು ಮುಂದುವರೆಸಿದ್ದಾರೆ. ಇದನ್ನು ನೋಡಿ ಶಾಕ್ ಆಗಿದ್ದಾರೆ ನೆಟ್ಟಿಗರು. ನೀಲಿ ಚಿತ್ರದ ಕೇಸ್ನಲ್ಲಿ ಸಿಕ್ಕಿಬಿದ್ದರೂ ಆರಾಮಾಗಿ ಇರುವ ಜೋಡಿಯನ್ನು ನೋಡಿ ಕೆಲವರು ಕಾಲು ಕೂಡ ಎಳೆಯುತ್ತಿದ್ದಾರೆ. ಅಷ್ಟಕ್ಕೂ, 2021ರಲ್ಲಿ ಶಿಲ್ಪಾ ಬಾಳಲ್ಲಿ ಬಿರುಗಾಳಿ ಬಂದಿದ್ದು ಎಲ್ಲರಿಗೂ ತಿಳಿದಿರುವ ವಿಷಯವೇ. ಇವರ ಪತಿ, ರಾಜ್ ಕುಂದ್ರಾ ನೀಲಿ ಚಿತ್ರ ಕೇಸ್ನಲ್ಲಿ ಸಿಲುಕಿ ಬಿದ್ದಿದ್ದರು. ನಟಿಯರನ್ನು ಮತ್ತು ಮಾಡೆಲ್ಗಳನ್ನು ಬಳಸಿಕೊಂಡು ರಾಜ್ ಕುಂದ್ರಾ ಅವರು ನೀಲಿ ಚಿತ್ರಗಳನ್ನು ತಯಾರಿಸುತ್ತಿದ್ದರು ಎಂಬುದಕ್ಕೆ ಪೊಲೀಸರು ಹಲವು ಸಾಕ್ಷ್ಯಗಳನ್ನು ಒದಗಿಸಿದ್ದರು. ಬ್ಲೂ ಫಿಲ್ಮ್ ಆರೋಪದ ಮೇಲೆ ಅವರು 63 ದಿನಗಳವರೆಗೆ ಜೈಲಿನಲ್ಲಿ ಇದ್ದರು. ನೀಲಿ ಚಿತ್ರಗಳ ನಿರ್ಮಾಣ ದಂಧೆಯಲ್ಲಿ ತೊಡಗಿದ್ದ ಆರೋಪವನ್ನು ಇಂದಿಗೂ ರಾಜ್ ಕುಂದ್ರಾ ಇಂದಿಗೂ ಎದುರಿಸುತ್ತಿದ್ದಾರೆ. ‘ನಾನು ಮಾಡಿದ್ದು ನೀಲಿ ಚಿತ್ರ ಅಲ್ಲ, ಕಾಮೋದ್ರೇಕದ ಸಿನಿಮಾ ಮಾತ್ರ’ ಎಂದು ರಾಜ್ ಕುಂದ್ರಾ ಹೇಳಿಕೆ ನೀಡಿದ್ದರು. ತಾವು ಬ್ಲೂಫಿಲ್ಮ್ ಮಾಡುವುದನ್ನು ಅವರು ಒಪ್ಪಿಕೊಂಡಿರಲಿಲ್ಲ. ಆದರೆ ಈ ಪ್ರಕರಣದಲ್ಲಿ ಹಲವು ನಟಿಯರ ಜೊತೆ ಖುದ್ದು ಶಿಲ್ಪಾ ಶೆಟ್ಟಿಯವರ (Shilpa Shetty) ಹೆಸರೂ ಥಳಕು ಹಾಕಿಕೊಂಡಿತ್ತು.
ಆದರೆ ಕೊನೆಗೆ ರಾಜ್ ಅಶ್ಲೀಲ ದಂಧೆಯಲ್ಲಿ ತೊಡಗಿರುವ ಮೂಲಕ ಅಕ್ರಮ ಹಣ ವರ್ಗಾವಣೆ (ಮನಿ ಲಾಂಡರಿಂಗ್) ಕೇಸ್ನಲ್ಲಿ ಸಿಲುಕಿರುವ ರಾಜ್ ಕುಂದ್ರಾ ಹಾಗೂ ಅಶ್ಲೀಲ ದಂಧೆಗೆ ಯಾವುದೇ ನೇರ ಸಂಪರ್ಕ ಇರುವುದು ಇದುವರೆಗೆ ತಿಳಿದುಬಂದಿಲ್ಲ ಎಂದು ತನಿಖಾಧಿಕಾರಿಗಳು ಹೇಳಿದ್ದರು. ಬ್ರಿಟನ್ ಮೂಲದ ಕೆನ್ರಿನ್ ಕಂಪನಿಯ ವಿವಿಧ ಬ್ಯಾಂಕ್ ವಹಿವಾಟುಗಳಿಗೆ ಸಂಬಂಧಿಸಿದ ಹಣದ ಜಾಡುಗಳ ಮೇಲೆ ಇಡಿ ಗಮನಹರಿಸುತ್ತಿದ್ದು, ಸದ್ಯ ಯಾವುದೇ ನೇರ ವಹಿವಾಟು ನಡೆದಿರುವುದು ತಿಳಿದುಬಂದಿಲ್ಲ ಎಂದಿದ್ದರು. ಈ ಹಿನ್ನೆಲೆಯಲ್ಲಿ, ಪೋರ್ನ್ ವಿಡಿಯೋ ಕೇಸ್ನಲ್ಲಿ ರಾಜ್ ಕುಂದ್ರಾ ಅವರು ನೇರವಾಗಿ ಪಾಲ್ಗೊಂಡಿಲ್ಲ ಎನ್ನುವುದು ಸದ್ಯದ ಮಟ್ಟಿಗೆ ತಿಳಿದುಬಂದಿದ್ದು, ಇದರ ತನಿಖೆ ಮುಂದುವರೆಸಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ ಕುಂದ್ರಾ ಅವರ ಮುಂಬೈನ ಮನೆ ಮತ್ತು ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ನೀಲಿ ಚಿತ್ರ ತಂದಿಟ್ಟ ಫಜೀತಿ! ಶಿಲ್ಪಾ ಶೆಟ್ಟಿ ದಂಪತಿಗೆ ಶಾಕ್ ಕೊಟ್ಟ ಇ.ಡಿ- ಮನೆ, ಕಚೇರಿ ಮೇಲೆ ದಾಳಿ!
