ತೆಲುಗು ಸ್ಟಾರ್, ಪ್ಯಾನ್ ಇಂಡಿಯಾ ಹೀರೋ ಪ್ರಭಾಸ್ ಅವರಿಗೆ ಇಂದು (ಅಕ್ಟೋಬರ್ 23) ಹುಟ್ಟುಹಬ್ಬದ ಸಂಭ್ರಮ.

ತೆಲುಗು ಸ್ಟಾರ್, ಪ್ಯಾನ್ ಇಂಡಿಯಾ ಹೀರೋ ಪ್ರಭಾಸ್ ಅವರಿಗೆ ಇಂದು (ಅಕ್ಟೋಬರ್ 23) ಹುಟ್ಟುಹಬ್ಬದ ಸಂಭ್ರಮ. 42ನೇ ವಸಂತಕ್ಕೆ ಕಾಲಿಟ್ಟಿರುವ ನಟ ಪ್ರಭಾಸ್ ಅವರಿಗೆ ಅಭಿಮಾನಿಗಳು ಮತ್ತು ಸಿನಿ ಗಣ್ಯರಿಂದ ಶುಭಾಶಯಗಳ ಸುರಿಮಳೆಯೇ ಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಭಾಸ್ ಫೋಟೋ ಮತ್ತು ವಿಡಿಯೋಗಳನ್ನು ಶೇರ್ ಮಾಡಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಅಂದಹಾಗೆ ಪ್ರಭಾಸ್ ಈ ಬಾರಿಯೂ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಇತ್ತೀಚಿಗಷ್ಟೆ ಪ್ರಭಾಸ್ ತನ್ನ ಪ್ರೀತಿಯ ಚಿಕ್ಕಪ್ಪನ್ನು ಕಳೆದುಕೊಂಡರು. ಹಾಗಾಗಿ ಈ ಬಾರಿ ಪ್ರಭಾಸ್ ಅದ್ದೂರಿ ಹುಟ್ಟುಹಬ್ಬಕ್ಕೆ ಬ್ರೇಕ್ ಹಾಕಿದ್ದಾರೆ. ಕೊರೊನಾ ಕಾರಣದಿಂದ ಕಳೆದ ಎರಡು ವರ್ಷವೂ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಈ ಬಾರಿ ಸಹ ಬಾಹುಬಲಿ ಸ್ಟಾರ್ ಹುಟ್ಟುಹಬ್ಬಕ್ಕೆ ಬ್ರೇಕ್ ಬಿದ್ದಿದೆ. 

ಪ್ರಭಾಸ್ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡರೂ ಅಭಿಮಾನಿಗಳಿಗೆ ನಿರಾಸೆ ಮಾಡಿಲ್ಲ. ಅದಿಪುರುಷ್ ಸಿನಿಮಾತಂಡ ಹೊಸ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಗಿಫ್ಟ್ ನೀಡಿದೆ. ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಪ್ರಭಾಸ್ ಹೊಸ ಲುಕ್ ಅಭಿಮಾನಿಗಳ ಹೃದಯ ಗೆದ್ದಿದೆ. ಪೋಸ್ಟರ್ ಹಿಂದಿ ಮತ್ತು ತೆಲುಗು ಜೊತೆಗೆ ಕನ್ನಡ, ತಮಿಳು ಮತ್ತು ಮಲಯಾಳಂ ಪೋಸ್ಟರ್ ಸಹ ಬಿಡುಗಡೆ ಮಾಡಲಾಗಿದೆ. ಸ್ವತಃ ಪ್ರಭಾಸ್ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟರ್ ಶೇರ್ ಮಾಡಿದ್ದಾರೆ. ಪೋಸ್ಟರ್ ಹಂಚಿಕೊಂಡು, 'ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀ ರಾಮ್' ಎಂದು ಬರೆದುಕೊಂಡಿದ್ದಾರೆ. ಜೊತೆಗೆ ರಿಲೀಸ್ ಡೇಟ್ ಕೂಡ ಹೇಳಿದ್ದಾರೆ. 

ಅಂದಹಾಗೆ ಬಹುನಿರೀಕ್ಷೆಯ ಆದಿಪುರುಷ್ ಸಿನಿಮಾ ಜನವರಿ 12, 2023ರಂದು ರಿಲೀಸ್ ಆಗುತ್ತಿದೆ. 3ಡಿಯಲ್ಲಿ ರಿಲೀಸ್ ಆಗುತ್ತಿದೆ. ಅಂದಹಾಗೆ ಆದಿಪುರುಷ್ ಇತ್ತೀಚಿಗಷ್ಟೆ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಎಂಟ್ರಿ ಕೊಟ್ಟಿತ್ತು. ಟ್ರೈಲರ್ ರಿಲೀಸ್ ಆಗುತ್ತಿದ್ದಂತೆ ಹಿಗ್ಗಾಮುಗ್ಗಾ ಟ್ರೋಲ್‌ಗೆ ಗುರಿಯಾಗಿತ್ತು. ಟ್ರೈಲರ್ ನಲ್ಲಿ ರಾವಣ ಪಾತ್ರಧಾರಿ ಸೈಫ್ ಅಲಿ ಖಾನ್ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು. ರಾಣವನನ್ನು ಮೊಘಲ್ ದೊರೆಯಹಾಗೆ ತೋರಿಸಲಾಗಿದೆ ಹಾಗೂ ಕಳಪೆ ಗ್ರಾಫಿಕ್ಸ್ ವಿಚಾರಕ್ಕೆ ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು. ಹಾಗಾಗಿ ಸಿನಿಮಾ ಹೇಗೆ ಮೂಡಿಬರಲಿದೆ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Salaar; ವರ್ಧರಾಜ ಮನ್ನಾರ್ ಆಗಿ ಪ್ರಭಾಸ್ ಸಿನಿಮಾಗೆ ಎಂಟ್ರಿ ಕೊಟ್ಟ ಪೃಥ್ವಿರಾಜ್, ಲುಕ್ ವೈರಲ್

ಆದಿಪುರುಷ್ ಸಿನಿಮಾಗೆ ಹಿಂದಿಯ ಓಂ ರಾವುತ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಾಯಕಿಯಾಗಿ ಕೃತಿ ಸನೊನ್ ಕಾಣಿಸಿಕೊಂಡಿದ್ದಾರೆ. ಸೈಫ್ ಅಲಿ ಖಾನ್ ಸೇರಿದಂತೆ ಅನೇಕ ಸ್ಟಾರ್ಸ್ ಸಿನಿಮಾದಲ್ಲಿ ನಟಿಸಿದ್ದಾರೆ. ಇನ್ನು ಪ್ರಭಾಸ್ ಈ ಸಿನಿಮಾ ಜೊತೆಗೆ ಮತ್ತೊಂದು ಬಹುನಿರೀಕ್ಷೆಯ ಸಲಾರ್ ಚಿತ್ರದಲ್ಲೂ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಕೆಜಿಎಫ್ ನಿರ್ದೇಶಕ ಪ್ರಸಾಂತ್ ನೀಲ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಸಲಾರ್ ಸಿನಿಮಾದ ಅಪ್ ಡೇಟ್ ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಪ್ರಭಾಸ್ ಹುಟ್ಟುಹಬ್ಬದ ದಿನವಾದರೂ ಸರ್ಪ್ರೈಸ್ ಸಿಗಲಿದೆಯಾ ಎಂದು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ. ಆದರೆ ಇದುವರೆಗೂ ಯಾವುದೇ ಸುಳಿವು ಸಹ ನೀಡಿಲ್ಲ ಸಿನಿಮಾತಂಡ.

View post on Instagram

2ನೇ ಬಾರಿ ಕಾಂತಾರ ವೀಕ್ಷಿಸಿ ಪ್ರಭಾಸ್; ಎಲ್ಲರೂ ನೋಡಲೇ ಬೇಕಾದ ಸಿನಿಮಾ ಎಂದ 'ಸಲಾರ್' ಸ್ಟಾರ್

ಈ ಬಾರಿಯ ಹುಟ್ಟುಹಬ್ಬಕ್ಕೂ ಸಲಾರ್ ತಂಡ ನಿರಾಸೆ ಮೂಡಿಸುತ್ತಾ ಕಾದುನೋಡಬೇಕಿದೆ. ಈ ಸಿನಿಮಾ ಜೊತೆಗೆ ನಾಗ್ ಆಶ್ವಿನ್ ಅವರ ಮತ್ತೊಂದು ಸಿನಿಮಾದಲ್ಲಿ ಪ್ರಭಾಸ್ ನಿರತರಾಗಿದ್ದಾರೆ. ದೀಪಿಕಾ ಪಡುಕೋಣೆ ನಾಯಕಿಯಾಗಿರುವ ಈ ಸಿನಿಮಾಗೆ ಇನ್ನು ಟೈಟಲ್ ಇಟ್ಟಿಲ್ಲ. ಬಿಗ್ ಬಿ ಅಮಿತಾಭ್ ಬಚ್ಚನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಕೂಡ ಭಾರಿ ನಿರೀಕ್ಷೆ ಹುಟ್ಟುಹಾಕಿದೆ.