ಇದು ರಾಮಾಯಣ ಅಲ್ಲ, ಅದಿಪುರುಷ್: ಟ್ರೋಲ್ ಬಳಿಕ ಉಲ್ಟ ಹೊಡೆದ ಪ್ರಭಾಸ್ 'ಆದಿಪುರುಷ್' ತಂಡ

ನಾವು ಮಾಡಿದ್ದು ರಾಮಾಯಣ ಅಲ್ಲ ಅದಿಪುರುಷ್ ಎಂದು ಸಿನಿಮಾದ ಸಂಭಾಷಣಕಾರ ಮನೋಜ್​ ಮುಂತಶೀರ್ ಟ್ರೋಲ್ ಬಳಿಕ ಉಲ್ಟ ಹೊಡೆದಿದ್ದಾರೆ. 

adipurush writer manoj muntashir reportedly says we did not do ramayana this is Adipurush after troll sgk

ಟಾಲಿವುಡ್ ಸ್ಟಾರ್ ಪ್ರಭಾಸ್ ನಟನೆಯ ಬಹುನಿರೀಕ್ಷೆಯ ಸಿನಿಮಾ ಆದಿಪುರುಷ್ ಅದ್ದೂರಿಯಾಗಿ ತೆರೆಗೆ ಬಂದಿದೆ. ಕೋಟಿ ಕೋಟಿ ವೆಚ್ಚದಲ್ಲಿ ತಯಾರಾದ ಆದಿಪುರುಷ್ ಪ್ಯಾನ್ ಇಂಡಿಯಾ ಪಟ್ಟದಲ್ಲಿ ರಿಲೀಸ್ ಆಗಿದೆ. ಆದರೆ ಸಿನಿಮಾ ನೋಡಿ ಪ್ರೇಕ್ಷಕರು ನಿರಾಸೆ ವ್ಯಕ್ತಪಡಿಸುತ್ತಿದ್ದಾರೆ. ನಿರ್ದೇಶಕ ಓಂ ರಾವುತ್ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ಟ್ರೋಲ್ ಆಗುತ್ತಿದೆ. ಈ ಸಿನಿಮಾದ ಹಲವು ಅಂಶಗಳನ್ನು ಟೀಕಿಸಲಾಗುತ್ತಿದೆ. ರಾಮಾಯಣವನ್ನು ಆಧರಿಸಿದ ಈ ಸಿನಿಮಾದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡಿದ್ದಾರೆ. ಸೀತೆಯಾಗಿ ಕೃತಿ ಸನೋನ್​ ಕಾಣಿಸಿಕೊಂಡಿದ್ದಾರೆ. ಆಂಜನೇಯನಾಗಿ ದೇವದತ್ತ ನಾಗೆ ಅವರು ಅಭಿನಯಿಸಿದ್ದಾರೆ. ಲಕ್ಷ್ಮಣನ ಪಾತ್ರಕ್ಕೆ ಸನ್ನಿ ಸಿಂಗ್​ ಅವರು ಬಣ್ಣ ಹಚ್ಚಿದ್ದಾರೆ. ಸೈಫ್​ ಅಲಿ ಖಾನ್​ ಅವರು ರಾವಣನಾಗಿ ಅಬ್ಬರಿಸಿದ್ದಾರೆ. 

ಈ ಸಿನಿಮಾದಲ್ಲಿ ರಾಮಾಯಣವನ್ನು ತೋರಿಸಿದ ರೀತಿ ಸರಿಯಾಗಿಲ್ಲ, ಪಾತ್ರಗಳು ಡಿಸೈನ್ ಸರಿಯಿಲ್ಲ ಎಂದು ಪ್ರೇಕ್ಷಕರು ತಕರಾರು ತೆಗೆದಿದ್ದಾರೆ. ಈ ಬಗ್ಗೆ ಈಗ ಸಿನಿಮಾದ ಸಂಭಾಷಣಕಾರ ಮನೋಜ್​ ಮುಂತಶೀರ್ ಪ್ರತಿಕ್ರಿಯೆ ನೀಡಿದ್ದು ನಾವು ಮಾಡಿದ್ದು ರಾಮಾಯಣ ಅಲ್ಲ ಎಂದು ಹೇಳಿದ್ದಾರೆ. ವರಸೆ ಬದಲಾಯಿಸಿದ ಮನೋಜ್​ ಮಾತುಗಳು ಅಚ್ಚರಿ ಮೂಡಿಸಿವೆ.   

ಸೋಶಿಯಲ್​ ಮೀಡಿಯಾದಲ್ಲಿ ‘ಆದಿಪುರುಷ್​’ ಸಿನಿಮಾವನ್ನು ಟ್ರೋಲ್​ ಮಾಡಲಾಗುತ್ತಿದೆ. ಪಾತ್ರಗಳನ್ನು ತೋರಿಸಿದ ರೀತಿ, ಸಂಭಾಷಣೆಯ ಶೈಲಿ, ಗ್ರಾಫಿಕ್ಸ್​ ಗುಣಮಟ್ಟ ಸೇರಿದಂತೆ ಅನೇಕ ವಿಚಾರಗಳು ಹಿಗ್ಗಾಮುಗ್ಗಾ ಟ್ರೋಲ್ ಆಗುತ್ತಿದೆ. ಪ್ರೇಕ್ಷಕರು ಟೀಕಿಸುತ್ತಿದ್ದಾರೆ. ಈ ನಡುವೆ ಸಂಭಾಷಣಕಾರ ಮನೋಜ್​ ಮುಂತಶೀರ್​ ಅವರು ನೀಡಿದ ಕೇಳಿಕೆ ಸೆನ್ಸೇಷನ್​ ಸೃಷ್ಟಿ ಮಾಡಿದೆ. ‘ಇದನ್ನು ನಾನು ಮೊದಲೇ ಹೇಳಿದ್ದೇ ಮತ್ತು ಈಗಲೂ ಹೇಳುತ್ತೇನೆ. ಈ ಸಿನಿಮಾದ ಹೆಸರು ಆದಿಪುರುಷ್​. ನಾವು ರಾಮಾಯಣವನ್ನು ಸಿನಿಮಾ ಮಾಡಿಲ್ಲ. ಅದರಿಂದ ತುಂಬ ಸ್ಫೂರ್ತಿ ಪಡೆದಿದ್ದೇವೆ. ಡಿಸ್​​ಕ್ಲೈಮರ್​ನಲ್ಲೂ ನಾವು ಅದನ್ನೇ ಹೇಳಿದ್ದೇವೆ’ ಎಂದು ಮನೋಜ್​ ಮುಂತಶೀರ್​ ಹೇಳಿರುವುದಾಗಿ ವರದಿ ಆಗಿದೆ.

ಹನುಮಂತನ ಸೀಟ್‌ನಲ್ಲಿ ಕುಳಿತು 'ಆದಿಪುರುಷ್' ವೀಕ್ಷಿಸಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿತ: ವಿಡಿಯೋ ವೈರಲ್

‘ಆದಿಪುರುಷ್​’ ಸಿನಿಮಾ ಬಗ್ಗೆ ಜನರು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಸಿನಿಮಾ ನೋಡಿದ ಬಳಿಕ ಬಹುತೇಕರಿಗೆ ನಿರಾಸೆ ಆಗಿದೆ. ‘ರಾಮನ ಹೆಸರನ್ನು ಹಾಳು ಮಾಡಬೇಡಿ’ ಎಂದು ನಟಿ ಕಂಗನಾ ರಣಾವತ್​ ಕೂಡ ಪರೋಕ್ಷವಾಗಿ ಚಿತ್ರತಂಡದ ವಿರುದ್ಧ ಕಿಡಿ ಕಾರಿದ್ದರು. ಈ ಚಿತ್ರದಿಂದ ಹಿಂದೂಗಳ ಭಾವನೆಗೆ ಧಕ್ಕೆ ಆಗಿದೆ ಎಂದು ಕೂಡ ಕೆಲವರು ಆರೋಪಿಸುತ್ತಿದ್ದಾರೆ. ಹಾಗಿದ್ದರೂ ಕೂಡ ಸಿನಿಮಾದ ಬಾಕ್ಸ್​ ಆಫೀಸ್​ ಕಲೆಕ್ಷನ್​ ತಗ್ಗಿಲ್ಲ. ಮೊದಲ ದಿನ ಈ ಸಿನಿಮಾ ವಿಶ್ವಾದ್ಯಂತ ನೂರಾರು ಕೋಟಿ ರೂಪಾಯಿ ಕಮಾಯಿ ಮಾಡಿದೆ.

Adipurush Twitter Review: ರಾಮನಾಗಿ ಪ್ರಭಾಸ್ ಇಷ್ಟವಾದ್ರ? ಫಸ್ಟ್ ಡೇ ಫಸ್ಟ್ ಶೋ ನೋಡಿದ ಫ್ಯಾನ್ಸ್ ಹೇಳಿದ್ದೇನು?

ಆದಿಪುರುಷ್ ರಿಲೀಸ್ ಆಗಿ ಕೆಟ್ಟ ವಿಮರ್ಶೆಗಳು ಬರುತ್ತಿದ್ದರು ಪ್ರಭಾಸ್ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಸಿನಿಮಾ ರಿಲೀಸ್ ಬಳಿಕ ಪ್ರಭಾಸ್ ಎಲ್ಲೋಗಿದ್ದಾರೆ ಎನ್ನುವುದು ಸಹ ಗೊತ್ತಿಲ್ಲ. ಪ್ರಭಾಸ್​ ಮೌನಕ್ಕೆ ಶರಣಾಗಿದ್ದಾರೆ. ಈ ಬಗ್ಗೆ ಪ್ರಭಾಸ್ ಪ್ರತಿಕ್ರಿಯೆ ನೀಡುತ್ತಾರಾ ಎನ್ನುವುದು ಕುತೂಹಲ ಮೂಡಿಸಿದೆ. 
 

Latest Videos
Follow Us:
Download App:
  • android
  • ios