Kashmir Files ಸಕ್ಸಸ್ ಬೆನ್ನಲ್ಲೇ ಮತ್ತೆರಡು ನೈಜ ಘಟನೆ ಆಧಾರಿತ ಸಿನಿಮಾ ಘೋಷಿಸಿದ ಅಗ್ನಿಹೋತ್ರಿ
ಕಾಶ್ಮೀರ್ ಫೈಲ್ಸ್ ಯಶಸ್ಸಿನ ನಂತರ ನಿರ್ದೇಶಕ ಅಗ್ನಿಹೋತ್ರಿ ಇತಿಹಾಸದಲ್ಲಿ ದಾಖಲಾಗದ ಮತ್ತೆಡರು ಕಥೆಯನ್ನು ಸಿನಿಮಾ ಮಾಡಲು ರೆಡಿಯಾಗಿದ್ದಾರೆ. ಕಾಶ್ಮೀರ್ ಫೈಲ್ಸ್ ಸಿನಿಮಾತಂಡವೇ ಮತ್ತೆ ಒಂದಾಗಿರುವುದು ವಿಶೇಷ. ನಿರ್ದೇಶಕ ಅಗ್ನಿ ಹೋತ್ರಿ, ಅಭಿಷೇಕ್ ಅಗರ್ವಾಲ್ ಮತ್ತು ಪಲ್ಲವಿ ಜೋಶಿ ಈ ಮೂವರು ಇದೀಗ ಮತ್ತೆರಡು ಸಿನಿಮಾ ಘೋಷಿಸಿದ್ದಾರೆ.
ದಿ ಕಾಶ್ಮೀರ್ ಫೈಲ್ಸ್ ಹಿಂದಿ ಬಾಕ್ಸ್ ಆಫೀಸ್ ನಲ್ಲಿ ಧೂಳ್ ಎಬ್ಬಿಸಿದ ಸಿನಿಮಾ. ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ಕೊರೊನಾ ಬಳಿಕ ಹಿಂದಿ ಬಾಕ್ಸ್ ಆಫೀಸ್ ನಲ್ಲಿ ಅತೀ ಹೆಚ್ಚು ಕಮಾಯಿ ಮಾಡಿದ ಸಿನಿಮಾ ಎನ್ನುವ ಖ್ಯಾತಿಯನ್ನು ಗಳಿಸಿದೆ. ನಿರ್ದೇಶಕ ಅಗ್ನಿಹೋತ್ರಿ ಸಾರಥ್ಯದಲ್ಲಿ ಬಂದ ಸಿನಿಮಾವನ್ನು ಪ್ರೇಕ್ಷಕರು ಮಾತ್ರವಲ್ಲದೇ ಸಿನಿಮಾ ಗಣ್ಯರು ಮತ್ತು ರಾಜಕೀಯ ಗಣ್ಯರು ಸಹ ಹಾಡಿಹೊಗಳಿದ್ದರು.
ಈಗಾಗಲೇ ಹಿಂದಿಯಲ್ಲಿ 250 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ದಾಖಲೆ ಮಾಡಿದೆ. ಈ ಯಶಸ್ಸಿನ ನಂತರ ನಿರ್ದೇಶಕ ಅಗ್ನಿಹೋತ್ರಿ ಇತಿಹಾಸದಲ್ಲಿ ದಾಖಲಾಗದ ಮತ್ತೆಡರು ಕಥೆಯನ್ನು ಸಿನಿಮಾ ಮಾಡಲು ರೆಡಿಯಾಗಿದ್ದಾರೆ. ಕಾಶ್ಮೀರ್ ಫೈಲ್ಸ್ ಸಿನಿಮಾತಂಡವೇ ಮತ್ತೆ ಒಂದಾಗಿರುವುದು ವಿಶೇಷ. ನಿರ್ದೇಶಕ ಅಗ್ನಿ ಹೋತ್ರಿ, ಅಭಿಷೇಕ್ ಅಗರ್ವಾಲ್ ಮತ್ತು ಪಲ್ಲವಿ ಜೋಶಿ ಈ ಮೂವರು ಇದೀಗ ಮತ್ತೆರಡು ನೈಜ ಘಟನೆ ಆಧಾರಿತ ಕಥೆಯನ್ನು ಸಿನಿಮಾ ಮಾಡಲು ತಯಾರಾಗಿದ್ದಾರೆ. ಇತಿಹಾಸದಲ್ಲಿ ಸಮಾಧಿಯಾಗಿರುವ ಐತಿಹಾಸಿಕ ಘಟನೆಗಳ ಮೇಲೆ ಚಲನಚಿತ್ರ ಮಾಡುವುದಾಗಿ ಅಗ್ನಿಹೋತ್ರಿ ಬಹಿರಂಗ ಪಡಿಸಿದ್ದಾರೆ.
ಈ ಬಗ್ಗೆ ಸಿನಿಮಾ ವಿಶ್ಲೇಷಕ ತರಣ್ ಆದರ್ಶ್ ಟ್ವೀಟ್ ಮಾಡಿ ಬಹಿರಂಗ ಪಡಿಸಿದ್ದಾರೆ. ಕಾಶ್ಮೀರ್ ಫೈಲ್ಸ್ ತಂಡ ಮತ್ತೆರಡು ಸಿನಿಮಾಗಳಿಗೆ ಒಂದಾಗುತ್ತಿದೆ. ಕಾಶ್ಮೀರ್ ಫೈಲ್ಸ್ ಅದ್ಭುತ ಯಶಸ್ಸಿನ ನಂತರ ನಿರ್ಮಾಪಕರಾದ ಅಭಿಷೇಕ್ ಅಗರ್ವಾಲ್ ಮತ್ತು ಪಲ್ಲವಿ ಜೋಶಿ ಹಾಗೂ ವಿವೇಕ್ ಅಗ್ನಿಹೋತ್ರಿ ಎರಡು ಸಿನಿಮಾಗಳನ್ನು ಮಾಡುತ್ತಿದ್ದಾರೆ. ಭಾರತೀಯ ಇತಿಹಾಸದಲ್ಲಿ ವರದಿಯಾಗದ ಕಥೆಯನ್ನು ಹೇಳುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಕೊರೊನಾ ಬಳಿಕ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಮೊದಲ ಹಿಂದಿ ಸಿನಿಮಾ The Kashmir Files; ಗಳಿಸಿದ್ದೆಷ್ಟು?
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಕಾಶ್ಮೀರ್ ಫೈಲ್ಸ್ 90 ದಶಕದಲ್ಲಿ ಕಾಶ್ಮೀರ ಪಂಡಿತರ ಹತ್ಯೆ ಮತ್ತು ವಲಸೆ ಬಗ್ಗೆ ಇರುವ ಸಿನಿಮಾವಾಗಿದೆ. ಕೇವಲ 15 ಕೋಟಿ ರೂಪಾಯಿನಲ್ಲಿ ಈ ಸಿನಿಮಾವನ್ನು ನಿರ್ಮಿಸಲಾಗಿದೆ. ಸಿನಿಮಾ ಬಿಡುಗಡೆಯಾಗಿ 5 ವಾರಗಳಲ್ಲಿ ಕಾಶ್ಮೀರ ಫೈಲ್ಸ್ 250 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಕೊರೊನಾ ಬಳಿಕ ಹಿಂದಿಯಲ್ಲಿ ಅತೀ ಹೆಚ್ಚು ಕಲೆಕ್ಷನ್ ಮಾಡಿ ಸಿನಿಮಾವಾಗಿದೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಅನುಪಮ್ ಖೇರ್, ವಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ, ದರ್ಶನ್ ಕುಮಾರ್ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ಸ್ಟಾರ್ ಕಲಾವಿದರಿಲ್ಲದೆ, ಅಬ್ಬರದ ಪ್ರಚಾರ ವಿಲ್ಲದೆ ಈ ಸಿನಿಮಾ ಗಳಿಸಿದ ದೊಡ್ಡ ಮಟ್ಟದ ಸಕ್ಸಸ್ ಬಾಲಿವುಡ್ ಮಂದಿಗೆ ಅಚ್ಚರಿ ಮೂಡಿಸಿದೆ.
ಇನ್ಮುಂದೆ ಇದು ಸಿನಿಮಾವಲ್ಲ, ಒಂದು ಚಳುವಳಿ; ಕಾಶ್ಮೀರ್ ಫೈಲ್ಸ್ ಬಗ್ಗೆ ಕರಣ್ ಜೋಹರ್ ಮಾತು
ನೌಟಂಕಿ ಸಿನಿಮಾ ಮುಗಿಸಿರುವ ಅಗ್ನಿಹೋತ್ರಿ
ಕಾಶ್ಮೀರ್ ಫೈಲ್ಸ್ ಸಕ್ಸಸ್ ಖುಷಿಯಲ್ಲೇ ಅಗ್ನಿಹೋತ್ರಿ ಮತ್ತೊಂದು ಮುಗಿಸಿದ್ದಾರೆ. ಸದ್ದಿಲ್ಲದೆ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ತಯಾರಿ ನಡೆಸುತ್ತಿದ್ದಾರೆ. ಲಾಕ್ ಡೌನ್ ನಿಂದ ಕಾಶ್ಮೀರ್ ಫೈಲ್ಸ್ ಸಿನಿಮಾ ಚಿತ್ರೀಕರಣ ನಿಂತ ಸಮಯದಲ್ಲಿ ಈ ಸಿನಿಮಾದ ಚಿತ್ರೀಕರಣ ಮುಗಿಸಿರುವುದಾಗಿ ಹೇಳಿದ್ದಾರೆ. ರೆಡಿ ಇದ್ದ ಸ್ಕ್ರಿಪ್ಟ್ ಅನ್ನು ಗ್ಯಾಪ್ ನಲ್ಲಿ ಸಿನಿಮಾ ಮಾಡಿ ಮುಗಿಸಿದ್ದಾರೆ ಅಗ್ನಿಹೋತ್ರಿ. ನೌಟಂಕಿ ಸಿನಿಮಾ ಕೂಡ ತುಂಬಾ ಕಡಿಮೆ ಬಜೆಟ್ ನಲ್ಲಿ ತಯಾರಾದ ಸಿನಿಮಾ. ಸದ್ಯ ಮತ್ತೆ ಎರಡು ಘಟನಗಳನ್ನು ತೆರೆಮೇಲೆ ತರಲು ಸಿದ್ಧರಾಗಿರುವ ಅಗ್ನಿಹೋತ್ರಿ ಯಾವ ಘಟನೆಯನ್ನು ಹೇಳುತ್ತಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ. ಸದ್ಯದಲ್ಲೇ ಅಗ್ನಿಹೋತ್ರಿ ಸಿನಿಮಾ ಘೋಷಣೆಯಾಗುವ ಸಾಧ್ಯತೆ ಇದೆ.