Ponniyin Selvan; ರಜನಿಕಾಂತ್ ಕಾಲು ಮುಟ್ಟಿ ನಮಸ್ಕರಿಸಿದ ಐಶ್ವರ್ಯಾ ನಡೆಗೆ ನೆಟ್ಟಿಗರಿಂದ ಮೆಚ್ಚುಗೆಯ ಮಹಾಪೂರ
ಖ್ಯಾತ ನಿರ್ದೇಶಕ ಮಣಿರತ್ನಂ ಸಾರಥ್ಯದಲ್ಲಿ ಮೂಡಿಬರುತ್ತಿರುವ ಪೊನ್ನಿಯನ್ ಸೆಲ್ವನ್ ಸಿನಿಮಾದ ಆಡಿಯೋ ಮತ್ತು ಟ್ರೈಲರ್ ರಿಲೀಸ್ ಆಗಿದೆ. ಐಶ್ವರ್ಯಾ ರೈ ಎದ್ದು ಬಂದು ರಜನಿಕಾಂತ್ ಕಾಲು ಮುಟ್ಟಿ ನಮಸ್ಕರಿಸಿ ಹಗ್ ಮಾಡಿದ್ದಾರೆ.
ದಕ್ಷಿಣ ಭಾರತದಿಂದ ಮತ್ತೊಂದು ನಿರೀಕ್ಷೆಯ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಈಗಾಗಲೇ ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡುವ ಮೂಲಕ ಬಾಲಿವುಡ್ ಮಂದಿಯ ನಿದ್ದೆ ಗೆಡಿಸಿರುವ ಸೌತ್ ಸಿನಿಮಾ ಇಂಡಸ್ಟ್ರಿ ಇದೀಗ ಪೊನ್ನಿಯನ್ ಸೆಲ್ವನ್ ಸಿನಿಮಾ ಮೂಲಕ ಮತ್ತೊಂದು ಹೊಡೆತ ಕೊಡಲು ಸಿದ್ಧವಾಗಿದೆ. ಪೊನ್ನಿಯನ್ ಸೆಲ್ವನ್ ಬಿಡುಗಡೆಗೆ ಸಜ್ಜಾಗಿದೆ. ಹೌದು ಖ್ಯಾತ ನಿರ್ದೇಶಕ ಮಣಿರತ್ನಂ ಸಾರಥ್ಯದಲ್ಲಿ ಮೂಡಿಬರುತ್ತಿರುವ ಪೊನ್ನಿಯನ್ ಸೆಲ್ವನ್ ಸಿನಿಮಾದ ಆಡಿಯೋ ಮತ್ತು ಟ್ರೈಲರ್ ರಿಲೀಸ್ ಆಗಿದೆ. ಸೆಪ್ಟಂಬರ್ 7ರಂದು ಅದ್ದೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಘಟಾನುಘಟಿ ಸ್ಟಾರ್ಸ್ ಭಾಗಿಯಾಗಿದ್ದರು. ಈ ಕಾರ್ಯಕ್ರಮದ ಹೈಲೆಟ್ ಅಂದರೆ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಕಮಲ್ ಹಾಸನ್.
ಅಂದಹಾಗೆ ಪೊನ್ನಿಯನ್ನ ಸೆಲ್ವನ್ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದೆ. ಬಾಲಿವುಡ್ ನಟಿ ಐಶ್ವರ್ಯಾ ರೈ, ತ್ರಿಷಾ, ಚಿಯಾನ್ ವಿಕ್ರಮ್, ಕಾರ್ತಿ, ಜಯಂ ರವಿ ಸೇರಿದಂತೆ ಅನೇಕ ಸ್ಟಾರ್ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಅಂದಹಾಗೆ ಕಾರ್ಯಕ್ರಮದಲ್ಲಿ ಎಲ್ಲಾ ಕಲಾವಿದರು ಹಾಜರಾಗಿದ್ದರು. ಐಶ್ವರ್ಯಾ ರೈ ಕೂಡ ಟ್ರೈಲರ್ ರಿಲೀಸ್ ಈವೆಂಟ್ ನಲ್ಲಿ ಭಾಗಿಯಾಗಿದ್ದರು. ಅಂದಹಾಗೆ ಸೂಪರ್ ಸ್ಟಾರ್ ರಜನಿಕಾಂತ್ ಕಾರ್ಯಕ್ರಮಕ್ಕೆ ಎಂಟ್ರಿ ಕೊಡುತ್ತಿದ್ದಂತೆ ಕುಳಿತುಕೊಂಡಿದ್ದ ಐಶ್ವರ್ಯಾ ರೈ ಎದ್ದು ಬಂದು ರಜನಿಕಾಂತ್ ಕಾಲು ಮುಟ್ಟಿ ನಮಸ್ಕರಿಸಿ ಹಗ್ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಂದಹಾಗೆ ಐಶ್ವರ್ಯಾ ರೈ, ರಜನಿಕಾಂತ್ ಕಂಡರೆ ಆಪಾರ ಗೌರವ, ಪ್ರೀತಿ. ಐಶ್ವರ್ಯಾ ಮತ್ತು ರಜನಿಕಾಂತ್ ಇಬ್ಬರು ರೋಬೋ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆಗಲೂ ಸಹ ಐಶ್ವರ್ಯಾ ರೈ ಕಾರ್ಯಕ್ರಮದಲ್ಲಿ ರಜನಿಕಾಂತ್ ಕಾಲು ಮುಟ್ಟಿ ನಮಸ್ಕರಿಸಿದ್ದರು. ಇದೀಗ ಮತ್ತೆ ರಜನಿಕಾಂತ್ ಭೇಟಿಯಾದಾಗಲು ಸಹ ಅದೇ ಗೌರವ ತೋರಿದ್ದಾರೆ. ಐಶ್ವರ್ಯಾ ಅವರ ಈ ನಡೆ ಅಭಿಮಾನಿಗಳ ಹೃದಯ ಗೆದ್ದಿದೆ. ನೆಟ್ಟಿಗರು ಮೆಚ್ಚುಗೆಯ ಕಾಮೆಂಟ್ ಮಾಡಿ ಹಾಡಿಹೊಗಳುತ್ತಿದ್ದಾರೆ.
ಪೊನ್ನಿಯಿನ್ ಸೆಲ್ವನ್: ಬಾಲಿವುಡ್‌ಗೆ ಹೊಡೆತ ಕೊಡಲು ದಕ್ಷಿಣದ ಮತ್ತೊಂದು ಚಿತ್ರ?
ನಿರ್ದೇಶಕ ಮಣಿರತ್ನಂ ಅವರನ್ನು ಹಗ್ ಮಾಡಿ ಪ್ರೀತಿ ವ್ಯಕ್ತಪಡಿಸಿದ್ದಾರೆ. ಅಂದಹಾಗೆ ಐಶ್ವರ್ಯಾ ರೈ ನಿರ್ದೇಶಕ ಮಣಿರತ್ನಂ ಅವರನ್ನು ಗುರು ಎನ್ನುತ್ತಾರೆ. ಯಾಕೆಂದರೆ ಐಶ್ವರ್ಯ ಮೊದಲ ಸಿನಿಮಾಗೆ ನಿರ್ದೇಶನ ಮಾಡಿದ್ದು ಮಣಿರತ್ನಂ. ಅಂದಹಾಗೆ ಮಣಿರತ್ನಂ ಜೊತೆ ಐಶ್ವರ್ಯಾಗೆ ಇದು 4ನೇ ಸಿನಿಮಾವಾಗಿದೆ. ಇರುವನ್, ಗುರು, ರಾವಣ್ ಸಿನಿಮಾ ಮಾಡಿದ್ದ ಈ ಜೋಡಿ ಇದೀಗ ಪೊನ್ನಿಯನ್ ಸೆಲ್ವನ್ ಮೂಲಕ ಮತ್ತೆ ಅಭಿಮಾನಿಗಳನ್ನು ಮೋಡಿ ಮಾಡಲು ಸಜ್ಜಾಗಿದೆ.
Ponniyin Selvan; ಐಶ್ವರ್ಯಾ ಲುಕ್‌ಗೆ ಫ್ಯಾನ್ಸ್ ಫಿದಾ, ಉಳಿದವರ ಗೆಟಪ್ ಹೇಗಿದೆ?
ಸಿನಿಮಾದ ಬಗ್ಗೆ
ಪೊನ್ನಿಯನ್ ಸೆಲ್ವನ್ ಎರಡು ಭಾಗದಲ್ಲಿ ಮೂಡಿಬರುತ್ತಿದೆ. ಸದ್ಯಕ್ಕೆ ಮೊದಲ ಭಾಗದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಕಲ್ಕಿ ಕೃಷ್ಣಮೂರ್ತಿ ಬರೆದ ‘ಪೊನ್ನಿಯಿನ್ ಸೆಲ್ವನ್’ ಕೃತಿಯನ್ನು ಆಧರಿಸಿ ಈ ಚಿತ್ರ ತಯಾರಾಗುತ್ತಿದೆ. ಈ ಮೊದಲು ಅನಾವರಣ ಆಗಿದ್ದ ‘ಪೊನ್ನಿ ನದಿ..’ ಹಾಡಿಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಈಗ ಟ್ರೇಲರ್ ಎಲ್ಲರ ಗಮನ ಸೆಳೆಯುತ್ತಿದೆ. ಚೋಳ ಸಾಮ್ರಾಜ್ಯದ ಐತಿಹಾಸಿಕ ಕಥೆಯನ್ನು ಪೊನ್ನಿಯನ್ ಸೆಲ್ವನ್ ಸಿನಿಮಾದಲ್ಲಿ ಹೇಳುತ್ತಿದ್ದಾರೆ. ಎ.ಆರ್. ರೆಹಮಾನ್ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ರಿಲೀಸ್ ಆಗುತ್ತಿದೆ. ತಮಿಳು, ಕನ್ನಡ, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಲಿದೆ.