ಅಕ್ಷಯ್ ಕುಮಾರ್, 'ಯಾರಾದರೂ ನನಗೆ ಸೌತ್ ವರ್ಸಸ್ ಬಾಲಿವುಡ್ ಎಂದರೇ ದ್ವೇಷಿಸುತ್ತೇನೆ. ನಾವೆಲ್ಲರೂ ಒಂದೇ ಉದ್ಯಮದವರು ಮತ್ತು ಅದನ್ನೇ ನಾನು ನಂಬುತ್ತೇನೆ ಎಂದು ಅಕ್ಷಯ್ ಕುಮಾರ್ ಹೇಳಿದ್ದಾರೆ. ನಾವೆಲ್ಲ ಒಂದೇ ಉದ್ಯಮ ಎಂದು ಜನರು ಅರಿತುಕೊಂಡ ದಿನ ಎಲ್ಲವೂ ಸರಿಯಾಗುತ್ತದೆ' ಎಂದು ಹೇಳಿದರು.

ಬಾಲಿವುಡ್ ನಲ್ಲಿ ಸರಣಿ ಸಿನಿಮಾಗಳ ಸೋಲು ಮುಂದುವರೆದಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ನೆಲಕಚ್ಚುತ್ತಿವೆ. ಹಿಂದಿ ಸಿನಿಮಾರಂಗದಲ್ಲಿ ದಕ್ಷಿಣ ಭಾರತದ ಸಿನಿಮಾಗಳು ಅಬ್ಬರಿಸುತ್ತಿವೆ. ಸೌತ್ ಸಿನಿಮಾಗಳ ಆರ್ಭಟ ಬಾಲಿವುಡ್ ಮಂದಿಯನ್ನು ಬೆಚ್ಚಿಬೀಳಿಸಿವೆ. ದಕ್ಷಿಣ ಭಾರತದ ಸಿನಿಮಾಗಳು ಬಾಲಿವುಡ್ ಚಿತ್ರರಂಗವನ್ನು ಆಳುತ್ತಿವೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಸೌತ್ ವರ್ಸಸ್ ಬಾಲಿವುಡ್ ಎನ್ನುವ ಚರ್ಚೆ ಪ್ರಾರಂಭವಾಗಿದೆ. ಈ ಬಗ್ಗೆ ನಟ ಅಕ್ಷಯ್ ಕುಮಾರ್(Akshay Kumar) ಈಗ ಪ್ರತಿಕ್ರಿಯೆ ನೀಡಿದ್ದಾರೆ.

ಇಂಡಿಯಾಟುಡೇಗೆ ನೀಡಿದ ಸಂದರ್ಶನದಲ್ಲಿ ಅಕ್ಷಯ್ ಕುಮಾರ್, 'ಯಾರಾದರೂ ನನಗೆ ಸೌತ್ ವರ್ಸಸ್ ಬಾಲಿವುಡ್ ಎಂದರೇ ದ್ವೇಷಿಸುತ್ತೇನೆ. ನಾವೆಲ್ಲರೂ ಒಂದೇ ಉದ್ಯಮದವರು ಮತ್ತು ಅದನ್ನೇ ನಾನು ನಂಬುತ್ತೇನೆ ಎಂದು ಅಕ್ಷಯ್ ಕುಮಾರ್ ಹೇಳಿದ್ದಾರೆ. ನಾವೆಲ್ಲ ಒಂದೇ ಉದ್ಯಮ ಎಂದು ಜನರು ಅರಿತುಕೊಂಡ ದಿನ ಎಲ್ಲವೂ ಸರಿಯಾಗುತ್ತದೆ' ಎಂದು ಹೇಳಿದರು.

'ಈ ರೀತಿಯ ಚರ್ಚೆ ನಡೆಯುತ್ತಿರುವುದು ದುರದೃಷ್ಟಕರ ಮತ್ತು ನಾವೆಲ್ಲರೂ ಅದಕ್ಕೆ ಬಲಿಯಾಗುತ್ತಿದ್ದೇವೆ ಅಷ್ಟೆ. ನಾವು ಒಂದು ಉದ್ಯಮ ಎಂದು ಯಾಕೆ ಕರೆಯಬಾರದು? ನಾವೇಕೆ ಉತ್ತರ ಮತ್ತು ದಕ್ಷಿಣ ಭಾರತ ಎಂದು ಹೇಳಬಾರದು. ನಮ್ಮ ಎಲ್ಲಾ ಭಾಷೆಗಳು ಉತ್ತಮ. ನಾವು ನಮ್ಮ ಮಾತೃಭಾಷೆಯಲ್ಲಿ ಮಾತನಾಡುತ್ತೇವೆ. ನಾವೆಲ್ಲರೂ ಚೆನ್ನಾಗಿ ಇದ್ದೀವಿ. ನಮ್ಮನ್ನು ನಾವೇ ವಿಭಜಿಸುತ್ತಲೇ ಇರುವುದು ದುರದೃಷ್ಟಕರ' ಎಂದು ಹೇಳಿದರು.

ನಟ ಅಕ್ಷಯ್ ಕುಮಾರ್‌ಗೆ ಕೊರೋನಾ ಪಾಸಿಟಿವ್; ಕ್ಯಾನೆಸ್‌ ಫಿಲ್ಮ್ ಫೆಸ್ಟಿವಲ್‌ನಿಂದ ಔಟ್

ಅಕ್ಷಯ್ ಕುಮಾರ್ ಸದ್ಯ ಬಹುನಿರೀಕ್ಷೆಯ ಪೃಥ್ವಿರಾಜ್ ಸಿನಿಮಾದ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈಗಾಗಲೇ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು ಸಿನಿ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಚಾಂದ್ ಬರ್ದೈ ಅವರ ಮಹಾಕಾವ್ಯದಿಂದ ಆಧಾರಿಸಿದ ಸಿನಿಮಾ ಇದಾಗಿದೆ. ಈ ಸಿನಿಮಾ ಬಗ್ಗೆ ಮಾತನಾಡಿದ ಅಕ್ಷಯ್ ಕುಮಾರ್, 'ನನ್ನ 30 ವರ್ಷಗಳ ಸಿನಿಮಾ ಜರ್ನಿಯಲ್ಲಿ ನಾನು ಮೊದಲ ಬಾರಿಗೆ ಅಂತಹ ದೊಡ್ಡ ಐತಿಹಾಸಿಕ ಚಿತ್ರವನ್ನು ಮಾಡುತ್ತಿದ್ದೇನೆ. ಈ ಚಿತ್ರಕ್ಕೆ ಆಫರ್ ಬಂದಿರುವುದು ನನಗೆ ಹೆಮ್ಮೆಯ ವಿಷಯವಾಗಿದೆ. ನನಗೆ ಈ ಅವಕಾಶ ಸಿಕ್ಕಿದ್ದಕ್ಕೆ ನಾನು ವಿನಮ್ರನಾಗಿದ್ದೇನೆ' ಎಂದು ಸಂತಸ ಹಂಚಿಕೊಂಡರು.

ಅಜಯ್ ದೇವಗನ್ ಗೆ ಅಕ್ಷಯ್ ಕುಮಾರ್ ಸಾಥ್; ಗುಟ್ಕಾ ಗ್ಯಾಂಗ್ ಎಂದು ಕಾಲೆಳೆದ ನೆಟ್ಟಿಗರು

ಅಕ್ಷಯ್ ಕುಮಾರ್‌ಗೆ ಕೊರೊನಾ ಪಾಸಿಟಿವ್

ಅಕ್ಷಯ್ ಕುಮಾರ್‌ಗೆ (Akshay Kumar) ಎರಡನೇ ಬಾರಿ ಕೊರೋನಾ ಸೋಂಕು ತಗುಲಿತ್ತು. ಈ ಬಗ್ಗೆ ಅಕ್ಷಯ್ ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ (Social Media)ಬಹಿರಂಗ ಪಡಿಸಿದ್ದಾರೆ. ಕೊರೊನಾ ಕಾರಣದಿಂದ ಕಾನ್ಸ್ ಫಿಲ್ಮ್ ಫೆಸ್ಟಿವಲ್ (Cannes film festival 2022) ಮಿಸ್ ಮಾಡಿಕೊಳ್ಳುತ್ತಿರುವುದಾಗಿಯೂ ತಿಳಿಸಿದ್ದರು.

ಈ ಬಗ್ಗೆ ಅಕ್ಷಯ್ ಕುಮಾರ್ ಟ್ವೀಟ್ ಮಾಡಿದ್ದು, 'ಕಾನ್ಸ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಭಾಗವಹಿಸಲು ನಾನು ಎದುರು ನೋಡುತ್ತಿದ್ದೆ. ಆದರೆ ಬೇಸರದ ಸಂಗತಿ ಎಂದರೆ ನನಗೆ ಕೋವಿಡ್ ಪಾಸಿಟಿವ್ ಬಂದಿದೆ. ಹಾಗಾಗಿ ನಾನು ವಿಶ್ರಾಂತಿ ಪಡೆಯುತ್ತಿದ್ದೇನೆ. ನಾನು ನಿಜಕ್ಕೂ ಕಾನ್ಸ್ ಮಿಸ್ ಮಾಡಿಕೊಳ್ಳುತ್ತಿದ್ದೇನೆ' ಎಂದು ಹೇಳಿದ್ದರು.